ಬೆಂಗಳೂರು, [ಡಿ.04]: ಬೆಳಗಾವಿ ಎಂಇಎಸ್ ಮಾಜಿ ಶಾಸಕ ಸಾಂಬಾಜಿ ಪಾಟೀಲ್ ಪುತ್ರ ಸಾಗರ್​ ಪಾಟೀಲ್ (28) ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. 

ನಿನ್ನೆ [ಸೋಮವಾರ] ರಾತ್ರಿ ಸ್ನೇಹಿತರ ಜೊತೆ ರಾಣಿ ಚೆನ್ನಮ್ಮ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಗಳೂರಿನಿಂದ ಬೆಳಗಾವಿಗೆ ಹೊರಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. 

"

ಶ್ರೀರಾಮಪುರದಲ್ಲಿ ರೈಲು ಬರುತ್ತಿದ್ದ ವೇಳೆ ಡೋರ್ನಲ್ಲಿ ನಿಂತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿದೆ. ಬಿದ್ದಿರುವ ರಭಸಕ್ಕೆ ತೆಲೆಗೆ ಭಾರೀ ಪ್ರಮಾಣದಲ್ಲಿ ಪೆಟ್ಟು ಬಿದ್ದಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. 

ಈ ಸಂಬಂಧ ಬೆಂಗಳೂರಿನ ಸಿಟಿ ರೈಲ್ವೆ ಸ್ಟೇಷನ್ನಲ್ಲಿ ಪ್ರಕರಣ ದಾಖಲಾಗಿದ್ದು, ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.