ಬೆಳಗಾವಿ (ಸೆ.30):  ಸತತವಾಗಿ ನಾಲ್ಕು ಬಾರಿ ಸಂಸದರಾಗಿ ಪಕ್ಷ ಸಂಘಟನೆ ಜೊತೆಗೆ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ ದಿ.ಸುರೇಶ ಅಂಗಡಿ ಅವರ ಕುಟುಂಬಸ್ಥರಿಗೆ ಉಪಚುನಾವಣೆಯಲ್ಲಿ ಟಿಕೆಟ್‌ ನೀಡುವಂತೆ ಕಾರ‍್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ ಕಟೀಲ್‌ಗೆ ಮನವಿ ಮಾಡಿದರು.

ದಿ.ಸುರೇಶ ಅಂಗಡಿ ನಿಧನ ಹಿನ್ನೆಲೆಯಲ್ಲಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ನಗರಕ್ಕೆ ಆಗಮಿಸಿದ್ದ ನಳೀನಕುಮಾರ ಕಟೀಲ್‌ ಅವರನ್ನು ಭೇಟಿ ಮಾಡಿದ ಕಾರ‍್ಯಕರ್ತರು, ನಾಲ್ಕು ಬಾರಿ ಸಂಸದರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ಸುರೇಶ ಅಂಗಡಿ ಅವರ ಅಕಾಲಿಕ ಮರಣದಿಂದ ಬೆಳಗಾವಿ ಲೋಕಸಭೆ ಕ್ಷೇತ್ರ ಅನಾಥವಾಗಿದೆ. 

ಸುರೇಶ್ ಅಂಗಡಿ ಕೊನೆ 5 ದಿನ, ಏಮ್ಸ್ ಸಿಬ್ಬಂದಿಗೆ ಕೇಂದ್ರ ಮಂತ್ರಿ ಎಂದೂ ತಿಳಿದಿರ್ಲಿಲ್ಲ!

ಹೀಗಾಗಿ ಮುಂದಿನ ಉಪಚುನಾವಣೆಯಲ್ಲಿ ದಿ.ಸುರೇಶ ಅಂಗಡಿ ಅವರ ಪತ್ನಿ, ಪುತ್ರಿ ಸೇರಿದಂತೆ ಅವರ ಕುಟುಂಬಸ್ಥರಿಗೆ ಟಿಕೆಟ್‌ ನೀಡಬೇಕು. ಒಂದು ವೇಳೆ ಅಂಗಡಿ ಕುಟುಂಬಕ್ಕೆ ಟಿಕೆಟ್‌ ನೀಡದಿದ್ದರೆ ನಾವು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.