ಬೆಂಬಲಿಗರೊಂದಿಗೆ ತೆನೆ ಇಳಿಸಿ ಕಮಲ ಹೊತ್ತ ಮುಖಂಡ

ಜೆಡಿಎಸ್‌ ರಾಜ್ಯ ವಕ್ತಾರರ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಜೆಡಿಎಸ್‌ ಕೋಲಾರ ಜಿಲ್ಲಾ ಚುನಾವಣಾ ಉಸ್ತುವಾರಿ ಬೆಳ್ಳಿ ಲೋಕೇಶ್‌ ಭದ್ರಮ್ಮ ಛತ್ರದಲ್ಲಿರುವ ಬಿಜೆಪಿ ಪ್ರಚಾರ ಕಚೇರಿಯಲ್ಲಿ ಸಂಸದ ಜಿ.ಎಸ್‌.ಬಸವರಾಜು, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್‌ ಹೆಬ್ಬಾಕ, ಶಾಸಕ ಜಿ.ಬಿ.ಜೋತಿಗಣೇಶ್‌, ಮಾಜಿ ಶಾಸಕ ಬಿ.ಸುರೇಶಗೌಡ ಹಾಗೂ ಹಲವು ಮುಖಂಡರ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

Belli Lokesh Joins BJP Snr

  ತುಮಕೂರು :  ಜೆಡಿಎಸ್‌ ರಾಜ್ಯ ವಕ್ತಾರರ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಜೆಡಿಎಸ್‌ ಕೋಲಾರ ಜಿಲ್ಲಾ ಚುನಾವಣಾ ಉಸ್ತುವಾರಿ ಬೆಳ್ಳಿ ಲೋಕೇಶ್‌ ಭದ್ರಮ್ಮ ಛತ್ರದಲ್ಲಿರುವ ಬಿಜೆಪಿ ಪ್ರಚಾರ ಕಚೇರಿಯಲ್ಲಿ ಸಂಸದ ಜಿ.ಎಸ್‌.ಬಸವರಾಜು, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್‌ ಹೆಬ್ಬಾಕ, ಶಾಸಕ ಜಿ.ಬಿ.ಜೋತಿಗಣೇಶ್‌, ಮಾಜಿ ಶಾಸಕ ಬಿ.ಸುರೇಶಗೌಡ ಹಾಗೂ ಹಲವು ಮುಖಂಡರ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಹಲವರನ್ನು ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಜಿಲ್ಲಾಧ್ಯಕ್ಷ ಎಚ್‌.ಎನ್‌.ರವಿಶಂಕರ್‌, ಸಂಘಟನಾತ್ಮಕ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ತುಮಕೂರು ನಗರದಲ್ಲಿ ಕಳೆದ ಐದು ವರ್ಷಗಳಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ಬಿಜೆಪಿ ಗೆಲುವಿಗೆ ಕಾರಣವಾಗಲಿದ್ದು, ನಗರದಲ್ಲಿ ಆಗಿರುವ ಬದಲಾವಣೆಗೆ ಮತದಾರರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಅತ್ಯಧಿಕ ಮತಗಳಿಂದ ಜ್ಯೋತಿಗಣೇಶ್‌ ಗೆಲುವು ಸಾಧಿಸಲಿದ್ದಾರೆ ಎಂದರು.

ಬಿಜೆಪಿಗೆ ಸೇರ್ಪಡೆಗೊಂಡು ಮಾತನಾಡಿದ ಬೆಳ್ಳಿ ಲೋಕೇಶ್‌, ರಾಜಕಾರಣದಲ್ಲಿ ಪ್ರಜಾಪ್ರಭುತ್ವ ಕಾಪಾಡುತ್ತಿರುವ ಏಕೈಕ ಪಕ್ಷ ಬಿಜೆಪಿ ಮಾತ್ರ. ಮಾಜಿ ಶಾಸಕ ಸುರೇಶ್‌ ಗೌಡರು ನನಗೆ ಬಿಜೆಪಿಗೆ ಸೇರ್ಪಡೆಯಾಗುವಂತೆ ಆಹ್ವಾನಿಸಿದರು. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ಇದ್ದಕಾರಣಕ್ಕೆ ಶಾಸಕ ಜ್ಯೋತಿಗಣೇಶ್‌ ಮನೆಗೆ ಬಂದು ಬಿಜೆಪಿಗೆ ಬರುವಂತೆ ಆಹ್ವಾನ ನೀಡಿದ್ದರು. ರಾಜಕಾರಣದಲ್ಲಿ ವಿರೋಧಿಗಳಾದರೂ ಬಹುತೇಕರೊಂದಿಗೆ ಆತ್ಮೀಯತೆಯನ್ನು ಕಂಡುಕೊಂಡಿದ್ದೇನೆ. ಬಿಜೆಪಿಯಲ್ಲಿರುವ ಸ್ನೇಹಿತರು ನಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳಲಿದ್ದಾರೆ ಎಂಬ ವಿಶ್ವಾಸವಿದೆ. ಪಕ್ಷ ನೀಡುವ ಜವಾಬ್ದಾರಿಯನ್ನು ಯಾವುದೇ ಲೋಪ ಬಾರದಂತೆ ಶಿರಸಾ ವಹಿಸಿ ಪಾಲಿಸುವುದಾಗಿ ತಿಳಿಸಿದರು.

ಮಾಜಿ ಶಾಸಕ ಬಿ.ಸುರೇಶ್‌ಗೌಡ ಮಾತನಾಡಿ, ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್‌ ಒಡೆದ ಮನೆಯಾಗಿದೆ. ಬೇರೆ ಪಕ್ಷಗಳಿಂದ ಮುಖಂಡರು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ಬಿಜೆಪಿ 11 ಕ್ಷೇತ್ರಗಳಲ್ಲಿಯೂ ಗೆಲ್ಲುವ ವಾತಾವರಣವಿದೆ ಬಿಜೆಪಿಗೆ ದೊಡ್ಡ ಶಕ್ತಿ ಇದೆ ಎಂದು ಹೇಳಿದರು.

ಮಾಜಿ ಸಂಸದ ಜಿ.ಎಸ್‌.ಬಸವರಾಜು ಮಾತನಾಡಿ, ಪಕ್ಷಕ್ಕೆ ಸೇರ್ಪಡೆಯಾಗಿರುವವರನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತೇನೆ. ಸಕಾಲದಲ್ಲಿ ಪಕ್ಷ ಸೇರಿ ಶಕ್ತಿ ತುಂಬಿದ್ದೀರಿ. ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಪಕ್ಷ ಕಟ್ಟಲು ಮುಂದಾಗೋಣ ಎಂದು ಹೇಳಿದರು.

ಇದೇ ವೇಳೆ ಜೆಡಿಎಸ್‌ ಜಿಲ್ಲಾ ಉಪಾಧ್ಯಕ್ಷ ಆರ್‌.ದೇವರಾಜು, ಡಿಪೋ ನಾಗರಾಜು, ಕೇಸರಿ ಶ್ರೀನಿವಾಸ್‌, ಲೀಲಾವತಿ, ನಟರಾಜು, ಕುಬೇರ್‌ ಭೂಷಣ್‌, ಸದಾರಾಂ, ಅರುಣ್‌ಗೌಡ, ಸೇರಿದಂತೆ ಇತರರು ಬಿಜೆಪಿ ಸೇರ್ಪಡೆಯಾದರು.

ಕಾರ್ಯಕ್ರಮದಲ್ಲಿ ಟೂಡಾ ಮಾಜಿ ಅಧ್ಯಕ್ಷ ಬಾವಿಕಟ್ಟೆನಾಗಣ್ಣ, ನರಸಿಂಹಮೂರ್ತಿ, ಪಂಚೆ ರಾಮಚಂದ್ರಪ್ಪ, ಹನುಮಂತರಾಜು, ಸಂದೀಪ್‌ ಗೌಡ, ರುದ್ರೇಶ್‌, ಕೆಂಪರಾಜು, ಜಯಂತ್‌ ಗೌಡ, ಬಳ್ಳಗೆರೆ ವೆಂಕಟೇಶ್‌ ಸೇರಿದಂತೆ ಇತರರಿದ್ದರು.

ಸೊಗಡು ಮನವೊಲಿಕೆಗೆ ಪ್ರಯತ್ನ

ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿ ಸ್ವತಂತ್ರ ಅಭ್ಯರ್ಥಿಯಾಗಿರುವ ಸೊಗಡು ಶಿವಣ್ಣ ಅವರನ್ನು ಮನವೊಲಿಸುವ ಪ್ರಯತ್ನ ಆರಂಭವಾಗಿದೆ. ಈಗಾಗಲೇ ಬಿ.ಎಸ್‌. ಯಡಿಯೂರಪ್ಪ ಸೇರಿದಂತೆ ಆರ್‌ಎಸ್‌ಎಸ್‌ ಮುಖಂಡರು ಸೊಗಡು ಶಿವಣ್ಣನವರ ಮನವೊಲಿಕೆ ಮಾಡುತ್ತಿದ್ದಾರೆ. ತುಮಕೂರು ನಗರ ಬಿಜೆಪಿ ಅಭ್ಯರ್ಥಿ ಜ್ಯೋತಿ ಗಣೇಶ್‌ ಅವರು ಮಾತನಾಡಿ ಸೊಗಡು ಶಿವಣ್ಣನವರ ಮನವೊಲಿಕೆ ಪ್ರಯತ್ನ ನಡೆಯುತ್ತಿದೆ. ಪಕ್ಷದ ಹಿರಿಯರು ಅದನ್ನು ಆಪರೇಚ್‌ ಮಾಡುತ್ತಿದ್ದು ಅದು ಯಶಸ್ವಿಯಾಗುತ್ತದೆ ಎಂಬ ವಿಶ್ವಾಸ ನನಗಿದೆ ಎಂದು ಜ್ಯೋತಿ ಗಣೇಶ್‌ ಹೇಳಿದರು.

Latest Videos
Follow Us:
Download App:
  • android
  • ios