ಬೆಳ್ತಂಗಡಿ [ಮಾ.17]: ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ಕಾಂಗ್ರೆಸ್ ಅಧ್ಯಕ್ಷ ಎನ್. ಶ್ರೀನಿವಾಸ ಕಿಣಿ ಅಧ್ಯಕ್ಷ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. 

ಕೈ ಶಾಸಕರ ರಾಜೀನಾಮೆ: ಬಿಜೆಪಿ ಹಾದಿ ಸುಗಮ...

ಅವರು ಮಾರ್ಚ್ 10 ರಂದು ಡಿ ದಿನೇಶ್ ಗುಮಡೂರಾವ್ ಅವರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಕಾರ್ಯನಿರ್ವಹಿಸುತ್ತಿದ್ದು, ಸದ್ಯದ ರಾಜಕೀಯ ಸ್ಥಿತಿಗತಿಯಲ್ಲಿ ಮುಂದುವರಿಯಲು ನನಗೆ ಇಚ್ಛೆ ಇಲ್ಲ ಎಂದು ತಿಳಿಸಿದ್ದಾರೆ. 

ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಅಧ್ಯಕ್ಷ ಸ್ಥಾನ ತೊರೆಯುತ್ತಿದ್ದೇನೆ ಎಂದು ತಿಳಿಸಿದ್ದರು.