Asianet Suvarna News Asianet Suvarna News

ಕುಮಾರಸ್ವಾಮಿ ಭೇಟಿ ಮಾಡಿದ ಇಸ್ರೇಲ್‌ನ ಹೈಮ್: ಭಾರತಕ್ಕೆ ಕೃತಜ್ಞತೆ ಸಲ್ಲಿಸಿದ ಬೆನ್

ಬಿಡದಿ ಸಮೀಪದ ಕೇತಗಾನಹಳ್ಳಿಯ ತೋಟಕ್ಕೆ ಆಗಮಿಸಿದ ಹೈಮ್ ರವರು ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಕರ್ನಾಟಕ ಮತ್ತು ಇಸ್ರೇಲ್ ನಡುವಿನ ಬಾಂಧವ್ಯ, ಅಭಿವೃದ್ಧಿಯ ಪರಿಕಲ್ಪನೆಗಳ ವಿನಿಮಯ ಹಾಗೂ ಸೌಹಾರ್ದ ಸಂಬಂಧವನ್ನು ವೃದ್ಧಿಸುವ ನಿಟ್ಟಿನಲ್ಲಿ ಚರ್ಚಿಸಿದರು.

Ben Haim of Israel Met HD Kumaraswamy in Ramanagara grg
Author
First Published Nov 10, 2023, 12:31 PM IST

ರಾಮನಗರ(ನ.10): ದಕ್ಷಿಣ ಭಾರತದ ಇಸ್ರೇಲ್ ಕಾನ್ಸುಲೇಟ್ ಜನರಲ್ ಟಾಮಿ ಬೆನ್ - ಹೈಮ್ ಅವರು ಗುರುವಾರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಬಿಡದಿ ಸಮೀಪದ ಕೇತಗಾನಹಳ್ಳಿಯ ತೋಟಕ್ಕೆ ಆಗಮಿಸಿದ ಹೈಮ್ ರವರು ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಕರ್ನಾಟಕ ಮತ್ತು ಇಸ್ರೇಲ್ ನಡುವಿನ ಬಾಂಧವ್ಯ, ಅಭಿವೃದ್ಧಿಯ ಪರಿಕಲ್ಪನೆಗಳ ವಿನಿಮಯ ಹಾಗೂ ಸೌಹಾರ್ದ ಸಂಬಂಧವನ್ನು ವೃದ್ಧಿಸುವ ನಿಟ್ಟಿನಲ್ಲಿ ಚರ್ಚಿಸಿದರು.

ಅಲ್ಲದೆ, ಹಮಾಸ್ ವಿರುದ್ಧ ನಡೆಸಲಾಗುತ್ತಿರುವ ನಿರ್ಣಾಯಕ ಹೋರಾಟದ ಬಗ್ಗೆಯೂ ಮಾಹಿತಿ ನೀಡಿದ ಅವರು, ಯುದ್ಧ ಮುಗಿದು ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ಮೇಲೆ ಕೃಷಿ, ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ, ತಂತ್ರಜ್ಞಾನ ವಿನಿಮಯ, ಸಾಂಸ್ಕೃತಿಕ ಸಂಬಂಧಗಳು ಸೇರಿದಂತೆ ಇನ್ನೂ ಅನೇಕ ಕ್ಷೇತ್ರಗಳಲ್ಲಿ ಕರ್ನಾಟಕದ ಜತೆ ಕೆಲಸ ಮಾಡಲು ಉತ್ಸುಕವಾಗಿರುವುದಾಗಿ ತಿಳಿಸಿದರು.

ಕೇಂದ್ರದ ಕಡೆ ಕೈ ತೋರುವ ಬದಲು ತಮ್ಮ ಕೆಲಸ ಮಾಡಲಿ: ಸಿಎಂಗೆ ಎಚ್‌ಡಿಕೆ ತಿರುಗೇಟು

ಹಮಾಸ್ ಉಗ್ರರು ಇಸ್ರೇಲ್, ಅಮೆರಿಕ ಸೇರಿ ವಿವಿಧ ದೇಶಗಳ ಮಕ್ಕಳು, ವೃದ್ಧರು, ಮಹಿಳೆಯರನ್ನು ಅಪಹರಣ ಮಾಡಿರುವ ಅಂಶವನ್ನು ಪ್ರಸ್ತಾಪಿಸಿ ಗದ್ಗದಿತರಾದ ಟಾಮಿ ಬೆನ್ ರವರು, ಇಂತಹ ಸಂಕಷ್ಟ ಸಮಯದಲ್ಲಿ ಭಾರತವು ಇಸ್ರೇಲ್ ಪರ ನಿಂತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು. ಅಲ್ಲದೆ, ಕಾಣದ ಕೆಲ ಶಕ್ತಿಗಳು ಹಮಾಸ್ ಗೆ ಆರ್ಥಿಕ, ಶಸ್ತ್ರಾಸ್ತ್ರ ನೆರವು ನೀಡುತ್ತಿರುವ ಬಗ್ಗೆ ಅತೀವ ಕಳವಳ ವ್ಯಕ್ತಪಡಿಸಿದರು.

2018ರಲ್ಲಿ ಮುಖ್ಯಮಂತ್ರಿಗಳಾಗಿದ್ದಾಗ ಕುಮಾರಸ್ವಾಮಿ ಅವರು ಇಸ್ರೇಲ್ ದೇಶಕ್ಕೆ ಕೈಗೊಂಡಿದ್ದ ಅಧ್ಯಯನ ಪ್ರವಾಸವನ್ನು ನೆನಪು ಮಾಡಿಕೊಂಡ ಟಾಮಿ ಬೆನ್ ರವರು, ಕರ್ನಾಟಕ ಮತ್ತು ಇಸ್ರೇಲ್ ಸಂಬಂಧಗಳ ವೃದ್ಧಿಯಲ್ಲಿ ಬಹಳಷ್ಟು ಕೆಲಸ ಮಾಡುವ ಬಗ್ಗೆ ವಿವರ ನೀಡಿದರು.

ಸಮಾನ ಆಸಕ್ತಿ, ದೃಷ್ಟಿಕೋನದಿಂದ ಬೆಳೆಯುತ್ತಿರುವ ಕರ್ನಾಟಕ, ಇಸ್ರೇಲ್ ನಡುವೆ ಸಮಾನ ಹಿತಾಸಕ್ತಿಗಳು ಕೂಡ ಇದ್ದು, ಈ ನಿಟ್ಟಿನಲ್ಲಿ ನಾವೆಲ್ಲರೂ ದೀರ್ಘಕಾಲೀನ ದೃಷ್ಟಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಟಾಮಿ ಬೆನ್ - ಹೈಮ್ ಮನವಿ ಮಾಡಿದರು.

ಇಸ್ರೇಲ್ ಮತ್ತು ಕರ್ನಾಟಕ ಸಂಬಂಧಗಳನ್ನು ದೀರ್ಘಕಾಲೀನವಾಗಿ ಸ್ಥಿರಗೊಳಿಸುವುದು ಹಾಗೂ ಈ ಸಂಬಂಧಗಳನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ಉದ್ದೇಶ ಹೊಂದಿರುವುದಾಗಿ ಕುಮಾರಸ್ವಾಮಿ ಅವರಿಗೆ ತಿಳಿಸಿದರು.

ಕೇಂದ್ರದಲ್ಲಿ ಕರ್ನಾಟಕದ ಪರ ಧ್ವನಿ ಎತ್ತಿರುವೆ: ಮಾಜಿ ಸಿಎಂ ಕುಮಾರಸ್ವಾಮಿ

ಯುದ್ಧಪೀಡಿತ ದೇಶದಲ್ಲಿ ಆದಷ್ಟು ಬೇಗ ಶಾಂತಿ ನೆಲೆಸುವಂತೆ ಆಗಲಿ ಎಂದು ಹಾರೈಸಿದ ಕುಮಾರಸ್ವಾಮಿ, ಹಮಾಸ್ ವಶದಲ್ಲಿರುವ ಎಲ್ಲಾ ಒತ್ತೆಯಾಳುಗಳು ಸುರಕ್ಷಿತವಾಗಿ ಬಿಡುಗಡೆಯಾಗಿ ಬರಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.
ಅಲ್ಲದೆ, ಕೃಷಿ, ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ, ತಂತ್ರಜ್ಞಾನ ಕ್ಷೇತ್ರಗಳಲ್ಲಿ ಕರ್ನಾಟಕ ಮತ್ತು ಇಸ್ರೇಲ್ ಒಟ್ಟಿಗೆ ಕೆಲಸ ಮಾಡಬೇಕು ಎಂದು ಹೇಳಿದರು.

ತಮ್ಮ ತೋಟಕ್ಕೆ ಆಗಮಿಸಿದ ಟಾಮಿ ಬೆನ್ - ಹೈಮ್ ಅವರನ್ನು ಕುಮಾರಸ್ವಾಮಿ ಅವರು ಅತ್ಯಂತ ಆತ್ಮೀಯವಾಗಿ ಬರ ಮಾಡಿಕೊಂಡು ಗೌರವಿಸಿದರು. ತೋಟವನ್ನು ತೋರಿಸಿ, ಬಾಳೆಗೊನೆಯನ್ನು ನೀಡಿ ಸತ್ಕರಿಸಿದರು. ತೋಟದಲ್ಲಿ ಬೆಳೆದಿರುವ ಅಡಿಕೆ, ಬಾಳೆ, ತೆಂಗು ಇತ್ಯಾದಿಗಳ ಬಗ್ಗೆ ಮಾಹಿತಿ ಪಡೆದರು. ಹಾಗೂ ಜಲ ಮರುಪೂರಣದ ಬಗ್ಗೆ ವಿಶೇಷವಾಗಿ ಹೈಮ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

Follow Us:
Download App:
  • android
  • ios