Asianet Suvarna News Asianet Suvarna News

ಬೆಂಗಳೂರಿನ ಎಲ್ಲ ಮತಗಟ್ಟೆಗಳಲ್ಲಿ ಬೆಳಗ್ಗೆ 5.30ರಿಂದಲೇ ಅಣುಕು ಮತದಾನ ಆರಂಭ

ಬೆಂಗಳೂರು ನಗರ ವ್ಯಾಪ್ತಿಗೊಳಪಡುವ 3 ಲೋಕಸಭಾ ಕ್ಷೇತ್ರಗಳಲ್ಲಿ ನಾಳೆ ಬೆಳಗ್ಗೆ 5.30ಕ್ಕೆ ಅಣುಕು ಮತದಾನ ಪ್ರಾರಂಭವಾಗಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಮಾಹಿತಿ ನೀಡಿದರು.

Bengaluru All Polling booths inside mock voting will start from 5 30 am sat
Author
First Published Apr 25, 2024, 1:24 PM IST | Last Updated Apr 25, 2024, 1:24 PM IST

ಬೆಂಗಳೂರು (ಏ.25): ಬೆಂಗಳೂರು ನಗರ ವ್ಯಾಪ್ತಿಗೊಳಪಡುವ 3 ಲೋಕಸಭಾ ಕ್ಷೇತ್ರಗಳಲ್ಲಿ ನಾಳೆ ಏ.26ರಂದು ಬೆಳಗ್ಗೆ 7.00 ರಿಂದ ಸಂಜೆ 6.00 ಗಂಟೆಯವರೆಗೆ ಮತದಾನ ನಡೆಯಲಿದೆ. ಆದರೆ, ಅದಕ್ಕಿಂತ ಮುಂಚಿತವಾಗಿ ಬೆಳಗ್ಗೆ 5.30ಕ್ಕೆ ಅಣುಕು ಮತದಾನ ಪ್ರಾರಂಭವಾಗಲಿದ್ದು, 7.00 ಗಂಟೆಯೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ನೀಡಿದ್ದಾರೆ.

ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಇಂದು ವಿವಿಧ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಗರದ 3 ಲೊಕಸಭಾ ಕ್ಷೇತ್ರ ಚುನಾವಣಾಧಿಕಾರಿ ವ್ಯಾಪ್ತಿಯಲ್ಲಿರುವ ಮಸ್ಟರಿಂಗ್ ಕೇಂದ್ರಗಳಿಗೆ ಎಲ್ಲಾ ಮತಗಟ್ಟೆ ಅಧಿಕಾರಿಗಳು ಬಂದು ಮತಗಟ್ಟೆಗಳಿಗೆ ಅಗತ್ಯವಿರುವ ಇವಿಎಂ, ಬ್ಯಾಲೆಟ್ ಯುನಿಟ್, ಕಂಟ್ರೋಲ್ ಯುನಿಟ್, ವಿವಿ ಪ್ಯಾಟ್ ಸೇರಿದಂತೆ ಎಲ್ಲಾ ಮತಗಟ್ಟೆ ಸಾಮಗ್ರಿಗಳನ್ನು ತೆಗೆದುಕೊಂಡು ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಹಾಗೂ ಇತರೆ ವಾಹನಗಳ ಮೂಲಕ ಮತಗಟ್ಟೆಗಳಿಗೆ ಪೊಲೀಸ್ ಬಂದೋಬಸ್ತ್ ಮೂಲಕ ತೆರಳಲಿದ್ದಾರೆ. ಎಲ್ಲಾ ಮತಗಟ್ಟೆಗಳಲ್ಲೂ ವಸತಿ, ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ‌‌ ಎಂದು ತಿಳಿಸಿದರು.

ಮತಗಟ್ಟೆಯೊಳಗೆ ಮೊಬೈಲ್ ಕೊಂಡೊಯ್ಯಲು ಅವಕಾಶವಿಲ್ಲ; ಫೋಟೋ, ವಿಡಿಯೋ ತೆಗೆಯಲು ನಿರ್ಬಂಧ

ಇನ್ನು ನಾಳೆ ಏಪ್ರಿಲ್ 26ರಂದು ಬೆಳಗ್ಗೆ 7.00 ರಿಂದ ಸಂಜೆ 6.00 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅದಕ್ಕಿಂತ ಮುಂಚಿತವಾಗಿ ಬೆಳಗ್ಗೆ 5.30ಕ್ಕೆ ಅಣುಕು ಮತದಾನ ಪ್ರಾರಂಭವಾಗಲಿದ್ದು, 7.00 ಗಂಟೆಯೊಳಗಾಗಿ ಪೂರ್ಣಗೊಳ್ಳಲಿದೆ. ಮತಗಟ್ಟೆಗಳಲ್ಲಿ ಮತದಾರರಿಗೆ ಯಾವುದೇ ಸಮಸ್ಯೆ ಆಗದಂತೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ. ಅಣುಕು ಮತದಾನದ ವೇಳೆ ಇವಿಎಂ ನಲ್ಲಿ ಲೋಪದೋಷಗಳು ಕಂಡುಬಂದರೆ ಸೆಕ್ಟರ್ ಅಧಿಕಾರಿ ಮೂಲಕ ಕನಿಷ್ಠ 10 ಮತಗಟ್ಟೆಗಳಿಗೆ ನಿಯೋಜನೆ ಮಾಡಿರುವಂತಹ ಮಾರ್ಗ ಅಧಿಕಾರಿಯು(Route Officer) ಪರ್ಯಾಯ ವ್ಯವಸ್ಥೆ ಮಾಡಲಿದ್ದಾರೆ ಎಂದು ಚುನಾವಣಾಧಿಕಾರಿ ಮಾಹಿತಿ ನೀಡಿದರು.

ಬೆಂಗಳೂರಿನ ಎಲ್ಲ ಮಸ್ಟರಿಂಗ್ ಕೇಂದ್ರಗಳಿಂದ ಬ್ಯಾಲೆಟ್ ಯುನಿಟ್(ಇವಿಎಂ), ಕಂಟ್ರೋಲ್ ಯುನಿಟ್(ಸಿಯು), ವಿವಿ ಪ್ಯಾಟ್ ಗಳನ್ನು ಮತಗಟ್ಟೆಗಳಿಗೆ ತಲುಪಿಸಲು ಈಗಾಗಲೇ ರೂಟ್ ಸಿದ್ದಪಡಿಸಿಕೊಳ್ಳಲಾಗಿದೆ. ಆ ಪ್ರಕಾರ ಒಂದು ಬಸ್ ನಲ್ಲಿ 5 ರಿಂದ 6 ಮಟಗಟ್ಟೆಗಳ ಅಧಿಕಾರಿಗಳು ತೆರಳಲಿದ್ದಾರೆ. ಇಂದು ಮಧ್ಯಾಹ್ನ ನಂತರ ಮತಗಟ್ಟೆಗಳಿಗೆ ತೆರಳಲಿದ್ದಾರೆ ಎಂದು ಹೇಳಿದರು.

ಮತಗಟ್ಟೆ ಅಧಿಕಾರಿಗಳಿಗೆ ಕಿಟ್ ವಿತರಣೆ: ನಗರದ 28 ವಿಧಾನಸಭಾ ಕ್ಷೇತ್ರಗಳ ಮಸ್ಟರಿಂಗ್ ಕೇಂದ್ರಗಳಿಂದ ಮತಗಟ್ಟೆ ಅಧಿಕಾರಿಗಳು, ಇವಿಎಂ, ಸಿಯು, ವಿವಿ ಪ್ಯಾಟ್, ಮತದಾನದ ದಿನ ಅಗತ್ಯವಿರುವ ಚೆಕ್ ಲಿಸ್ಟ್ ಪ್ರಕಾರ ಎಲ್ಲಾ ರೀತಿಯ ಸಾಮಗ್ರಿಗಳು, ಮತಗಟ್ಟೆಗಳಲ್ಲಿ ರಾತ್ರಿ ಉಳಿಯಲು‌ ಮತಗಟ್ಟೆ ಅಧಿಕಾರಿಗಳಿಗೆ ಬೇಕಾದಂತಹ ವ್ಯವಸ್ಥೆ ಮಾಡಲಾಗಿದೆ. ಇನ್ನು ಮಸ್ಟರಿಂಗ್ ಕೇಂದ್ರಗಳ ಪರಿಶೀಲನೆ ವೇಳೆ ವಲಯ ಜಂಟಿ ಆಯುಕ್ತರುಗಳಾದ ಮೊಹ್ಮದ್ ನಯೀಮ್ ಮೊಮಿನ್, ಬಾಲಶೇಖರ್, ಸಹಾಯಕ ಚುನಾವಣಾಧಿಕಾರಿಗಳಾದ ಸುರೇಶ್, ಪ್ರಮೋದ್ ಪಾಟೀಲ್, ಬಾಲಪ್ಪ ಹಂದಿಗುಂದ, ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಡಬಲ್ ಸೆಕ್ಯೂರಿಟಿ; ಎಲ್ಲ ಮತಗಟ್ಟೆಗಳಿಗೆ ವೆಬ್ ಕಾಸ್ಟಿಂಗ್ ಅಳವಡಿಕೆ

ಭೇಟಿ ನೀಡಿದ ಮಸ್ಟರಿಂಗ್ ಕೇಂದ್ರಗಳ ವಿವರ:

  • 1. ಶೇಷಾದ್ರಿಪುರಂ ಕಾಲೇಜು, ಯಲಹಂಕ.
  • 2. ಬಿಇಎಲ್ ಹೈ ಸ್ಕೂಲ್, ಬ್ಯಾಟರಾಯನಪುರ.
  • 3. ಕ್ರೈಸ್ಟ್ ಯೂನಿವರ್ಸಿಟಿ, ದಾಸರಹಳ್ಳಿ.
Latest Videos
Follow Us:
Download App:
  • android
  • ios