ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಸುಮಾರು 43 ಕೋಟಿ ರೂ. ಮೌಲ್ಯದ ಒತ್ತುವರಿ ಜಾಗವನ್ನು ಬಿಡಿಎ ವಶಪಡಿಸಿಕೊಂಡಿದೆ. ಇದೇ ವೇಳೆ, ಮುಂಬರುವ ಮಳೆಗಾಲದಲ್ಲಿ ಪ್ರವಾಹ ತಡೆಯಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಬಿಎ ಮುಖ್ಯ ಆಯುಕ್ತರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಬಡಾವಣೆಯ ಬ್ಲಾಕ್‌ 2ರಲ್ಲಿ ಎರಡು ಎಕರೆ ಜಮೀನನ್ನು ಒತ್ತುವರಿ ಮಾಡಿಕೊಂಡು ಅನಧಿಕೃತವಾಗಿ ನಿರ್ಮಿಸಲಾಗಿದ್ದ ಶೆಡ್‌ಗಳನ್ನು ತೆರವುಗೊಳಿಸಿ ಸುಮಾರು 43 ಕೋಟಿ ರು.ಮೌಲ್ಯದ ಆಸ್ತಿಯನ್ನು ಬಿಡಿಎ ವಶಪಡಿಸಿಕೊಂಡಿದೆ.

Add Asianetnews Kannada as a Preferred SourcegooglePreferred

ಬೆಂಗಳೂರು ಉತ್ತರ ತಾಲೂಕು, ಯಶವಂತಪುರ ಹೋಬಳಿ, ಮಂಗನಹಳ್ಳಿ ಗ್ರಾಮದ ಸರ್ವೆ ನಂ. 22/2 ರಲ್ಲಿ 2 ಎಕರೆ ಜಮೀನನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದರು. ಹಲವು ಬಾರಿ ನೋಟಿಸ್‌ ನೀಡಿದ್ದರು ಒತ್ತುವರಿ ತೆರವು ಮಾಡಿರಲಿಲ್ಲ. ಮಂಗಳವಾರ ಒತ್ತುವರಿ ಕಾರ್ಯಾಚರಣೆ ನಡೆಸಿದ ಬಿಡಿಎ ಅಧಿಕಾರಿಗಳು ಅನಧಿಕೃತವಾಗಿ ನಿರ್ಮಾಣವಾಗಿದ್ದ ಶೆಡ್ ಗಳನ್ನು ತೆರವುಗೊಳಿಸಿ, ಸುಮಾರು 43 ಕೋಟಿ ರು. ಮೌಲ್ಯದ ಆಸ್ತಿಯನ್ನು ಪ್ರಾಧಿಕಾರವು ವಶಪಡಿಸಿಕೊಂಡಿತು ಎಂದು ಬಿಡಿಎ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಮಳೆ ಅನಾಹುತ ತಡೆಗೆ ಸನ್ನದ್ಧರಾಗಲು ತಾಕೀತು

ನಗರದಲ್ಲಿ ಪೂರ್ವ ಮುಂಗಾರು ಮತ್ತು ಮುಂಗಾರು ಮಳೆಯ ಸಮಯದಲ್ಲಿ ಯಾವುದೇ ತೊಂದರೆ ಅಥವಾ ಪ್ರವಾಹ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಳೆ ಸಿದ್ಧತೆ ಕುರಿತು ಸುತ್ತೋಲೆ ಹೊರಡಿಸಿರುವ ಆಯುಕ್ತರು, ಜಿಬಿಎ ವ್ಯಾಪ್ತಿಯಲ್ಲಿ ಈ ಹಿಂದೆ 209 ಪ್ರವಾಹ ಪೀಡಿತ ಪ್ರದೇಶಗಳನ್ನು ಗುರುತಿಸಲಾಗಿತ್ತು. 2025ನೇ ಸಾಲಿನಲ್ಲಿ ವಿವಿಧ ಮುಂಜಾಗೃತ ಕ್ರಮಗಳಿಂದಾಗಿ ಅವುಗಳ ಸಂಖ್ಯೆ 49ಕ್ಕೆ ಇಳಿದಿದೆ. ಉಳಿದ 49 ಪ್ರದೇಶಗಳಲ್ಲಿ ಪ್ರವಾಹ ತಡೆಗಟ್ಟಲು ಸೂಕ್ತ ಕ್ರಮ ಕೈಗೊಂಡು ಶಾಶ್ವತ ಪರಿಹಾರ ಒದಗಿಸಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ವರುಣನ ಅಬ್ಬರ: ಬಾಳೆ ಬೆಳೆ ನಾಶ, ಸಿಡಿಲು, ಬಿರುಗಾಳಿಯಿಂದ ಜನಜೀವನ ಅಸ್ತವ್ಯಸ್ತ

ಶಾಶ್ವತ ಪರಿಹಾರ ಒದಗಿಸದ ಪ್ರದೇಶಗಳಲ್ಲಿ, ನಗರ ಪಾಲಿಕೆಗಳ ಮುಖ್ಯ ಎಂಜಿನಿಯರ್‌ಗಳು ಜಿಬಿಎ ಯೋಜನಾ ಅನುಷ್ಠಾನ ಘಟಕದ ಮುಖ್ಯ ಎಂಜಿನಿಯರ್ ಜೊತೆ ಸಮನ್ವಯ ಸಾಧಿಸಿ ಮಳೆಯ ಸಮಯದಲ್ಲಿ ಯಾವುದೇ ತೊಂದರೆ ಅಥವಾ ಪ್ರವಾಹ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ಜಿಲ್ಲಾಸ್ಪತ್ರೆ ಆಮ್ಲಜನಕ ದುರಂತದ ಸಂತ್ರಸ್ತರಿಗೆ ಅದೇ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ನೀಡಿದ ಸಿಎಂ

Scroll to load tweet…