ಬನ್ನೇರುಘಟ್ಟ ರಸ್ತೆಯಲ್ಲಿ ಆಟೋ, ಬೈಕ್‌ಗಳಿಗೆ ಗುದ್ದಿದ ಬಿಎಂಟಿಸಿ ಬಸ್; ಒಬ್ಬ ಸಾವು ಹಲವರ ಸ್ಥಿತಿ ಗಂಭೀರ

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿಸಿ ಬಿಎಂಟಿಸಿ ಬಸ್ ಬೈಕ್‌ಗಳು ಹಾಗೂ ಆಟೋಗಳಿಗೆ ಗುದ್ದಿ ಸರಣಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ.

Bengaluru BMTC bus hit auto bikes on Bannerghatta road serial accident one death many injured sat

ಬೆಂಗಳೂರು / ಆನೇಕಲ್ (ಜು.11): ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ಬಸ್‌ಗೆ ಒಬ್ಬ ಬೈಕ್ ಸವಾರನನ್ನು ಉಳಿಸಲು ಮುಂದಾಗಿ ಬಿಎಂಟಿಸಿ ಬಸ್ ನಿಯಂತ್ರಣ ಕಳೆದುಕೊಂಡು ಮೂರ್ನಾಲ್ಕು ಬೈಕ್‌ಗಳು ಹಾಗೂ ಆಟೋಗೆ ಡಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಗುದ್ದಿಕೊಂಡು ನಿಂತಿದೆ. ಈ ದುರ್ಘಟನೆಯಲ್ಲಿ ಒಬ್ಬ ಮೃತಪಟ್ಟಿದ್ದು, ಹಲವರು ಗಂಭೀರ ಗಾಯಗೊಂಡಿದ್ದಾರೆ.

ಬನ್ನೇರುಘಟ್ಟ ರಸ್ತೆಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಬಸ್‌ಗೆ ಅಡ್ಡ ಬಂದ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಸರಣಿ ಅಪಘಾತ ಸಂಭವಿಸಿದೆ. ಎರಡು ಬೈಕ್ಗಳು ಹಾಗೂ ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್ ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಇನ್ನು ಬಸ್ ಗುದ್ದಿದ ರಭಸಕ್ಕೆ ಒಬ್ಬ ಪ್ರಯಾಣಿಕ ಬಸ್ಸಿನಿಂದ ಹಾರಿ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾನೆ. ಇಷ್ಟಾದರೂ ಬಸ್ ನಿಯಂತ್ರಣಕ್ಕೆ ಸಿಗದೇ ವಿದ್ಯುತ್ ಕಂಬದ ಪಕ್ಕದಲ್ಲಿದ್ದ ಕಾಂಪೌಂಡ್‌ಗೆ ಗುದ್ದಿ ನಿಂತಿದೆ.

ಗೂಗಲ್‌ಗೂ ಗೊತ್ತಾಯ್ತು ಪಟ್ಟಣಗೆರೆ ಶೆಡ್ಡಿನ ಗಮ್ಮತ್ತು; ಈ ಲೊಕೇಶನ್‌ಗೆ 5 ಸ್ಟಾರ್ ರಿವ್ಯೂವ್ಸ್ ನೋಡಿ ನೆಟ್ಟಿಗರು ಸುಸ್ತು

ಬನ್ನೇರುಘಟ್ಟ ಮುಖ್ಯ ರಸ್ತೆ ಪಾರಿಜಾತ ಆಸ್ಪತ್ರೆ ಮುಂಭಾಗ ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವ. ಆಂದ್ರಪ್ರದೇಶ ಮೂಲದ ಪ್ರಸಾದ್ ರಾವ್(60) ಮೃತ ದುರ್ದೈವಿ ಆಗಿದ್ದಾನೆ. ಗಾಯಾಳುಗಳ ಪೈಕಿ ಓರ್ವ ಪಾದಚಾರಿ, ಇಬ್ಬರು ಬೈಕ್ ಸವಾರರು ಮತ್ತು ಓರ್ವ ಬಸ್ಸಿನ ಪ್ರಯಾಣಿಕ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ರೇನ್ ಮೂಲಕ ಬಸ್, ಬೈಕ್ ಮತ್ತು ಟಾಟಾ ಏಸ್ ವಾಹನ ತೆರವುಗೊಳಿಸಿ ಇತರೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಸೋದರತ್ತೆ ಮಗಳನ್ನು ಪ್ರೀತಿಸಿದ ಪ್ರವೀಣ ಅನಾಥ ಹೆಣವಾದ; ಮಾತುಕತೆಗೆ ಕರೆಸಿಕೊಂಡು ಕೊಂದೇಬಿಟ್ಟರು!

ಸರಣಿ ಅಪಘಾತ ನಡೆದ ಪಾರಿಜಾತ ಆಸ್ಪತ್ರೆ ಮುಂಭಾಗ ಸಂಜೆ ವೇಳೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ಘಟನೆಯ ಬೆನ್ನಲ್ಲಿಯೇ ಪೊಲೀಸರು ಬಿಎಂಟಿಸಿ ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಜೊತೆಗೆ, ಸರಣಿ ಅಪಘಾತಕ್ಕೆ ಸಂಬಂಧಿಸಿದಂತೆ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

Latest Videos
Follow Us:
Download App:
  • android
  • ios