ಬೆಂಗಳೂರಿನಲ್ಲಿ ನ.14ರಂದು ನೀರು ಪೂರೈಕೆ ಸ್ಥಗಿತ

ನವೆಂಬರ್ 14 ರಂದು ಬೆಂಗಳೂರಿನಲ್ಲಿ ಕಾವೇರಿ ಕುಡಿಯುವ ನೀರು ಪೂರೈಕೆಯಲ್ಲಿ ಎರಡು ಗಂಟೆಗಳ ಕಾಲ ವ್ಯತ್ಯಯ ಉಂಟಾಗಲಿದೆ. ತಾತಗುಣಿ ವಿದ್ಯುತ್ ಸ್ಥಾವರದಲ್ಲಿ ದುರಸ್ಥಿ ಕಾಮಗಾರಿ ಕೈಗೊಳ್ಳುವುದರಿಂದ ಈ ವ್ಯತ್ಯಯ ಉಂಟಾಗಲಿದ್ದು, ನಾಗರಿಕರು ನೀರನ್ನು ಮಿತವಾಗಿ ಬಳಸಲು ಜಲಮಂಡಳಿ ಕೋರಿದೆ.

Bengaluru BWSSB Water supply disruption 2 hours outage on Nov 14 sat

ಬೆಂಗಳೂರು (ನ.12): ಸಿಲಿಕಾನ್ ಸಿಟಿ ಬೆಂಗಳೂರಿಗೆ ನ.14ರ ಗುರುವಾರ ಕಾವೇರಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಕುಡಿಯುವ ನೀರು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಪತ್ರಿಕಾ ಪ್ರಕಟಣೆಯಲ್ಲಿ ತಿಳಸಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ವೃಷಭಾವತಿ 220 ಕೆವಿ ವಿದ್ಯುತ್ ಸ್ಥಾವರದಿಂದ ತಾತಗುಣಿ ವಿದ್ಯುತ್ ಸ್ಥಾವರಕ್ಕೆ ಸಂಪರ್ಕಮಾಡಲಾಗಿರುವ 220 ಕೆವಿ ವಿದ್ಯುತ್  ಮಾರ್ಗದಲ್ಲಿರುವ 220 ಕೆವಿ High Level Bus GOS  ಮತ್ತು ಇತರೆ ಪರಿಕರಗಳನ್ನು ತುರ್ತಾಗಿ ಬದಲಾಯಿಸಬೇಕಿದೆ. ಈ ದುರಸ್ಥಿ ಕಾಮಗಾರಿಗಳನ್ನು ಕೈಗೊಳ್ಳಲು ತಾತಗುಣಿ 220 ಕೆವಿ ವಿದ್ಯುತ್  ಸ್ಥಾವರವನ್ನು ಹಾಗೂ ಕಾವೇರಿ ನೀರು ಸರಬರಾಜು ಯೋಜನೆಯ ಎಲ್ಲಾ ಹಂತಗಳ ಜಲರೇಚಕ ಯಂತ್ರಗಾರಗಳನ್ನು  ದಿನಾಂಕ 14-11-2024 ರಂದು (ನ.14ರ ಗುರುವಾರ) ಬೆಳಗ್ಗೆ 10:30 ಗಂಟೆಯಿಂದ ಮಧ್ಯಾಹ್ನ 12:30 ಗಂಟೆಯವರೆಗೆ ಅಂದರೆ ಒಟ್ಟು 02 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗುತ್ತದೆ.

ಇದನ್ನೂ ಓದಿ: ಸಂಪಿಗೆ ಥಿಯೇಟರ್ ಮಾಲೀಕರ ಮನೆಯಲ್ಲಿ 1.5 ಕೋಟಿ ಮೌಲ್ಯದ ಚಿನ್ನಾಭರಣ ಕದ್ದ ನೇಪಾಳಿ ಗ್ಯಾಂಗ್!

ಈ ಹಿನ್ನಲೆಯಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಇನ್ನು ವಿದ್ಯುತ್ ಸಂಪರ್ಕ 2 ಗಂಟೆಗು ಸ್ಥಗಿತಗೊಂಡರ ನೀರು ಪೂರೈಕೆಯ ಮೇಲೆ ಹೆಚ್ಚು ಪರಿಣಾಮ ಬೀರಲಿದೆ. ಆದ್ದರಿಂದ, ಬೆಂಗಳೂರು ನಿವಾಸಿಗಳು ಜಲಮಂಡಳಿಯೊಂದಿಗೆ ಸಹಕರಿಸಲು ಹಾಗೂ  ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಂಡು ಮಿತವಾಗಿ ಬಳಕೆ ಮಾಡುವಂತೆ ಪತ್ರಿಕಾ ಪ್ರಕಟಣೆಯ್ಲಿ ಕೋರಲಾಗಿದೆ.

Latest Videos
Follow Us:
Download App:
  • android
  • ios