ಬೆಂಗಳೂರಿನ ಬಾಪೂಜಿನಗರದಲ್ಲಿ ರೌಡಿಶೀಟರ್ ಕೌಶಿಕ್ ಎಂಬ ಕಾರ್ ಚಾಲಕನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಹಳೆಯ ವೈಷಮ್ಯವೇ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ.

ಬೆಂಗಳೂರು: ಸಿಲಿಕಾನ್ ಸಿಟಿಯ ಮೈಸೂರು ರಸ್ತೆಯ ಬಾಪೂಜಿನಗರದಲ್ಲಿ ಕಾರ್ ಡ್ರೈವರ್‌ ಒಬ್ಬನನ್ನು ಕಲ್ಲಿನಿಂದ ಹೊಡೆದು ಕೊ8ಲೆ ಮಾಡಲಾಗಿದೆ. ಈ ಭೀಕರ ಹ8ತ್ಯೆ ಪ್ರಕರಣವು ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರಕರಣದಲ್ಲಿ ಸಾವನ್ನಪ್ಪಿರುವ ವ್ಯಕ್ತಿ ರೌಡಿಶೀಟರ್‌ ಕೌಶಿಕ್ (25) ಎಂದು ಗುರುತಿಸಲಾಗಿದೆ. ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬಿಯರ್ ಬಾಟಲ್ ಮತ್ತು ಕಲ್ಲುಗಳಿಂದ ತಲೆಗೆ ಹೊಡೆದು ಕೌಶಿಕ್‌ ನನ್ನು ಹತ್ಯೆ ಮಾಡಲಾಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಅಪರಿಚಿತ ವ್ಯಕ್ತಿಗಳು ಈ ಕೊ8ಲೆ ನಡೆಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಕೌಶಿಕ್ ಸ್ನೇಹಿತರೊಂದಿಗೆ ಪಾರ್ಟಿ ಮಾಡಿರುವುದು ಕೂಡ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಹತ್ಯೆಯ ಮಾಹಿತಿ ದೊರಕುತ್ತಿದ್ದಂತೆ ಬ್ಯಾಟರಾಯನಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಪೋಸ್ಟ್‌ಮಾರ್ಟಂ ವರದಿ ಆಧಾರದ ಮೇಲೆ ಹೆಚ್ಚಿನ ಮಾಹಿತಿಗಳು ಹೊರಬರುವ ನಿರೀಕ್ಷೆಯಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಮೃತ ಕೌಶಿಕ್‌ ಬಗ್ಗೆ ಮಾಹಿತಿ

ಮೃತ ಕೌಶಿಕ್‌ ಬ್ಯಾಟರಾಯನಪುರ ರೌಡಿ ಶೀಟರ್ ಆಗಿದ್ದ. ಈತನ ವಿರುದ್ಧ ಹಿಂದೆ ಅನೇಕ ಪ್ರಕರಣಗಳು ದಾಖಲಾಗಿದ್ದವು. 2020ರಲ್ಲಿ ನಡೆದ ಒಂದು ಕೊ8ಲೆ ಪ್ರಕರಣದಲ್ಲಿ ಈತ A8 ಆರೋಪಿಯಾಗಿದ್ದು, ಪ್ರಕರಣದಲ್ಲಿ ಜೈಲಿನಲ್ಲೂ ಕಾಲ ಕಳೆದಿದ್ದ. ನಂತರ ಜಾಮೀನು ಪಡೆದು ಹೊರಬಂದ ಕೌಶಿಕ್, ಬದುಕು ನಡೆಸಲು ಕ್ಯಾಬ್ ಚಾಲಕನಾಗಿದ್ದ.

ಕೊ8ಲೆಯ ಹಿನ್ನೆಲೆ ಬಗ್ಗೆ ಶಂಕೆ

ಪೊಲೀಸರು ನೀಡಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ ಕೌಶಿಕ್ ಸ್ನೇಹಿತರೊಂದಿಗೆ ಪಾರ್ಟಿ ನಡೆಸಿದ್ದ, ಪಾರ್ಟಿ ವೇಳೆ ಏನೋ ಕಾರಣಕ್ಕೆ ಜಗಳವಾಗಿರುವ ಸಾಧ್ಯತೆಗಳಿವೆ. ಇದೇ ಜಗಳವು ಕೊಲೆಗೆ ಪ್ರಮುಖ ಕಾರಣವಾಗಿರಬಹುದು ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಮಧ್ಯರಾತ್ರಿ 2.30ರ ಸುಮಾರಿಗೆ ಕೌಶಿಕ್‌ ಮೇಲೆ ದಾಳಿ ನಡೆದಿದ್ದು, ಬಳಿಕ ಆತ ಮೃತಪಟ್ಟಿರುವ ಸಾಧ್ಯತೆ ಇದೆ. ಪ್ರಸ್ತುತ, ಪೊಲೀಸರು ಘಟನೆಯ ಕುರಿತು ಸಂಪೂರ್ಣ ಮಾಹಿತಿ ಕಲೆಹಾಕುತ್ತಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.