ಬೆಂಗಳೂರಿನಲ್ಲಿ ಕ್ರಿಸ್‌ಮಸ್ ದಿನವೇ ನಿರ್ಮಾಣ ಹಂತದ ಕಟ್ಟಡ ಕುಸಿತ: ಒಬ್ಬ ಸಾವು, ಇಬ್ಬರ ಸ್ಥಿತಿ ಗಂಭೀರ
ಬೆಂಗಳೂರಿನಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಪಕ್ಕದ ಕಟ್ಟಡ ಕುಸಿದು ಬಿದ್ದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರು (ಡಿ.25): ಸಿಲಿಕಾನ್ ಸಿಟಿ ಬೆಂಗಳೂರು ಕ್ರಿಸ್‌ಮಸ್ ಹಬ್ಬದ ಸಂಭ್ರಮದಲ್ಲಿ ಮುಳುಗಿದೆ. ಆದರೆ, ಇಲ್ಲಿ ತಾವಾಯ್ತು ತಮ್ಮ ಕೆಲಸವಾಯ್ತು ಎಂದು ಪ್ರತಿನಿತ್ಯದಂತೆ ಕಟ್ಟಡ ನಿರ್ಮಾಣ ಕೆಲಸದಲ್ಲಿ ನಿರತರಾಗಿದ್ದ ಕಾರ್ಮಿಕರು ಮಾಲೀಕರ ನಿರ್ಲಕ್ಷ್ಯದಿಂದಾಗಿ ಪ್ರಾಣವನ್ನೇ ಬಿಟ್ಟಿದ್ದಾರೆ. ಕಟ್ಟಡ ನಿರ್ಮಾಣಕ್ಕೆ ಮಣ್ಣನ್ನು ಅಗೆಯುವಾಗ ಪಕ್ಕದ ಗೋಡೆಯ ಮಣ್ಣು ಕುಸಿದು ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತಿಬ್ಬರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿ ನಡೆದಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ ಕಟ್ಟಡ ನಿರ್ಮಾಣಕ್ಕೆ ಮುಂದಾಗಿ ಕಾರ್ಮಿಕರ ಪ್ರಾಣ ಹೋಗಿರುವ ಹಲವು ಘಟನೆಗಳು ನಡೆದಿವೆ. ಈಗ ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಕುಸಿತವಾಗಿದೆ. ಕಟ್ಟಡ ನಿರ್ಮಾಣ ಸಮಯದಲ್ಲಿ ಪಕ್ಕದಲ್ಲಿದ್ದ ಕಟ್ಟಡ ಕುಸಿದು ಬಿದ್ದಿದೆ. ಇಲ್ಲಿಯೂ ಕೂಡ ಕ್ರಿಸ್‌ಮಸ್ ಹಬ್ಬದ ದಿನವೇ ಮಣ್ಣು ಕುಸಿದು ಕಾರ್ಮಿಕನ ಪ್ರಾಣ ಹೋಗಿದೆ. ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಸುದ್ದಗುಂಟೆಪಾಳ್ಯ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಕಟ್ಟಡದ ಅಡಿಯಲ್ಲಿ ಸಿಲುಕಿದ್ದ ಇಬ್ಬರು ಕೆಲಸಗಾರರನ್ನು ರಕ್ಷಣೆ ಮಾಡಲಾಗಿದೆ.
ವಿಜಯಪುರ ಲೈವ್ ಮರ್ಡರ್: ಎಂಗೇಜ್ಮೆಂಟ್ ಆದವಳೊಂದಿಗೆ ಅನೈತಿಕ ಸಂಬಂಧಕ್ಕಾಗಿ ಬಿತ್ತು ಹೆಣ
ಕಟ್ಟಡದ ಮಣ್ಣಿನ ಅಡಿ ಸಿಲುಕಿದ್ದ ಒರ್ವ ಸಾವನ್ನಪ್ಪಿದ್ದಾನೆ. ಮೃತ ಕಾರ್ಮಿಕನನ್ನು ಬಿಹಾರ ರಾಜ್ಯದ ಸೋಮ್ ಪುರ್ ಮೂಲದ ರಂಜನ್ ಎಂದು ಗುರುತಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ನೆರವಿನಿಂದ ಮಣ್ಣಿನಡಿ ಸಿಲುಕಿದ್ದ ಮೃತ ದೇಹ ಹೊರ ತೆಗೆಯಲಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಮಣ್ಣಿನ ಕೆಳಗೆ ಸಿಲುಕಿದ್ದವರನ್ನು ಸ್ಥಳೀಯ ಯುವಕರು ರಕ್ಷಣೆ ಮಾಡಲು ಹೋಗಿದ್ದ ವೇಳೆ ಪಕ್ಕದಲ್ಲಿದ್ದ ಕಾಂಪೌಂಡ್ ಕೂಡ ಅವರ ಮೇಲೆ ಬಿದ್ದಿದೆ. ಅದೃಷ್ಟವಶಾತ್ ಕಾಂಪೌಂಡ್‌ನ ಕಲ್ಲುಗಳು ಎತ್ತರವಾಗಿ ಇಲ್ಲದ ಕಾರಣ ಸಣ್ಣ ಪುಟ್ಟ ಗಾಯಗಳೊಂದಿಗೆ ರಕ್ಷಣೆಗೆ ಯೋದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ವೇಳೆ ಸ್ವಲ್ಪ ಯಾಮಾರಿದ್ದರೂ ರಕ್ಷಣೆ ಮಾಡಲು ತೆರಳಿದ್ದ ಮೂವರು ಮಣ್ಣಿನ ಕೆಳಗೆ ಸಿಲುಕಬೇಕಿತ್ತು.
ಘಟನೆ ವಿವರ : ಕಟ್ಟಡ ನಿರ್ಮಾಣ ಮಾಡಲು ಅಡಿಪಾಯಕ್ಕೆ ಗುಂಡಿ ತೆಯಲಾಗುತಿತ್ತು. ಈ ವೇಳೆ ಪಕ್ಕದ ಕಟ್ಟಡ ಕಡೆಯಿಂದ ಮಣ್ಣು ಕುಸಿದಿದೆ. ಮಣ್ಣು ಕುಸಿದಾಗ ಇಬ್ಬರು ಕಾರ್ಮಿಕರು ಮಣ್ಣಿನ ಅಡಿಯಲ್ಲಿ ಸಿಲುಕಿದ್ದಾರೆ. ಈ ವೇಳೆ ಸ್ಥಳಯರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕೆಲಸ ಮಾಡಿದ್ದಾರೆ. ಕೆಲಸ ಮಾಡ್ತಿದ್ದ ಜೆಸಿಬಿ ಮೂಲಕ ಕಾಂಪೌಂಡ್ ಕೆಳಗೆ ಬೀಳದಂತೆ ತಡೆದು ಕೆಳಗೆ ಸಿಲುಕಿದ್ದವರ ರಕ್ಷಣೆ ಮಾಡಲು ಮುಂದಾಗಿದ್ದಾರೆ. ಈ ವೆಳೆ ಒರ್ವನ ರಕ್ಷಣೆ ಮಾಡಿದ್ದಾರೆ. ನಂತ್ರ ಮತ್ತೊರ್ವನ ರಕ್ಷಣೆ ಮಾಡುವ ವೇಳೆ ಪಕ್ಕದ ಕಟ್ಟಡದ ಕಾಂಪೌಂಡ್ ಕುಸಿದು ಬಿದ್ದಿದೆ. ಪುನಃ ಜೆಸಿಬಿ ಹಾಗೂ ಎಸ್ ಡಿ ಆರ್ ಎಫ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಸೇರೆ ಮೃತ ದೇಹ ಹೊರ ತಗೆದಿದ್ದಾರೆ.
ಹೊಸ ವರ್ಷಕ್ಕೆ ಕೋವಿಡ್ 4ನೇ ಅಲೆ ಭೀತಿ, JN.1 ಪ್ರಕರಣ 63ಕ್ಕೆ ಏರಿಕೆ, ಸಕ್ರಿಯ ಕೊರೋನಾ 4054!
ಜೆಸಿಬಿ ಡ್ರೈವರ್ ಎಡವಟ್ಟಿನಿಂದ ಅನಾಹುತ: ಕಟ್ಟಡ ಕುಸಿತ ಘಟನೆ ಬಗ್ಗೆ ಮಾತನಾಡಿದ ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ ಬಾಬ ಅವರು, ಮಧ್ಯಾಹ್ನ 2.30ರ ಸುಮಾರಿಗೆ ಈ ಘಟನೆ ನಡೆದಿದೆ. ಅಪಾರ್ಟ್ಮೆಂಟ್ ನಿರ್ಮಾಣ ಮಾಡ್ಬೇಕು ಅಂತಾ ಜೆಸಿಬಿ ಮೂಲಕ ಅಡಿಪಾಯ ಅಗೆಯಲಾಗ್ತಿತ್ತು. ಜೆಸಿಬಿ ಜೊತೆಗೆ ಮೂರ್ನಾಲ್ಕು ಜನ ಕಾರ್ಮಿಕರನ್ನ ಕೆಲಸಕ್ಕೆ ಬಳಸಿಕೊಳ್ಳಲಾಗಿತ್ತು. ಈ ವೇಳೆ ಪಕ್ಕದಲ್ಲಿ ಮೂರು ಅಂತಸ್ಥಿನ ಬಿಲ್ಡಿಂಗ್ ಕಟ್ಟಡಕ್ಕೆ ಜೆಸಿಬಿ ತಾಗಿ ಘಟನೆ ನಡೆದಿದೆ. ಆ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರ ಮೇಲೆ ಬಿದ್ದಿದೆ. ಘಟನೆಯಲ್ಲಿ ಬಿಹಾರ ಮೂಲ್ ಓರ್ವ ಸಾವನ್ನಪ್ಪಿದ್ದಾನೆ. ಈಗಾಗಲೇ ಮಾಲೀಕ ಯಾರು? ಕಾಂಟ್ರಾಕ್ಟರ್ ಯಾರು? ಅನ್ನೋ ಮಾಹಿತಿ ಪಡೆಯಲಾಗ್ತಿದೆ. ಸಂಬಂಧಪಟ್ಟವರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಬಿಬಿಎಂಪಿಯಿಂದ ಮಾಲೀಕರು ಎನೆಲ್ಲಾ ಪರ್ಮಿಷನ್ ತಗೊಂಡಿದ್ದಾರೆ ಅನ್ನೋ ಮಾಹಿತಿ ಪಡೆಯಲಾಗ್ತಿದೆ ಎಂದು ತಿಳಿಸಿದರು.