ಬೆಂಗಳೂರು ಕ್ರೀಡಾಪಟುಗಳಿಗೆ ಸಿಹಿ ಸುದ್ದಿ: ಅ.6ರಂದು ದಸರಾ ಕ್ರೀಡಾಕೂಟ ಆಯೋಜನೆ
ಬೆಂಗಳೂರು ಜಿಲ್ಲೆಯಲ್ಲಿ 2023-24ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಅಕ್ಟೋಬರ್ 6 ರಂದು ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.
ಬೆಂಗಳೂರು (ಸೆ.14): ಬೆಂಗಳೂರು ಜಿಲ್ಲೆಯಲ್ಲಿ 2023-24ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಅಕ್ಟೋಬರ್ 6 ರಂದು ನಡೆಸಲು ದಿನಾಂಕ ನಿಗದಿಪಡಿಸಲಾಗಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳಲು ಬೆಂಗಳೂರು ನಗರ ಜಿಲ್ಲೆ ಅಪರ ಜಿಲ್ಲಾಧಿಕಾರಿ ಕೆ.ಕೃಷ್ಣಮೂರ್ತಿ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕರೆದಿದ್ದ ಬೆಂಗಳೂರು ನಗರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಆಯೋಜಿಸುವ ಸಲುವಾಗಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟವನ್ನು ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟಿಸಲಿದ್ದಾರೆ. ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕ್ರಮವಹಿಸಿ ಎಂದು ಹೇಳಿದರು.
ಕಾಲಜ್ಞಾನದ 'ಕಟ್ಟಿಗೆ ಹಾಡ್ತದೆ, ಕಬ್ಬಿಣ ಓಡ್ತದೆ, ಗಾಳಿ ಮಾತನಾಡ್ತದೆ' ಭವಿಷ್ಯ ನಿಜವಾಗಿದೆ! ಕೋಡಿಶ್ರೀ
ಜಿಲ್ಲಾ ಮಟ್ಟದಲ್ಲಿ ಆಯೋಜಿಸಿರುವ ಕ್ರೀಡೆಗಳಾದ ಬ್ಯಾಸ್ಕೆಟ್‌ಬಾಲ್, ಕುಸ್ತಿ, ಷೆಟಲ್ ಬ್ಯಾಡ್ಮಿಂಟನ್, ಬಾಲ್‌ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್‌ಬಾಲ್, ಟೆಬಲ್‌ಟೆನ್ನಿಸ್, ಯೋಗ, ಫುಟ್‌ಬಾಲ್, ಟೆನ್ನಿಸ್, ನೆಟ್‌ಬಾಲ್, ಈಜು, ಅಥ್ಲೆಟಿಕ್ಸ್, ವಾಲಿಬಾಲ್, ಖೋ-ಖೋ, ಕಬ್ಬಡಿ, ಪುಟ್ಬಾಲ್, ಥ್ರೋಬಾಲ್, ಯೋಗ, ಸ್ಪರ್ಧೆಗಳಲ್ಲಿ ವಿಜೇತರಾದವರು ಮಾತ್ರ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಬಹುದು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಶಶಿಕಲಾ ಅವರು ಮಾತನಾಡಿ ಆಯಾ ಜಿಲ್ಲೆಯ ಕ್ರೀಡಾಪಟುಗಳು ಆಯಾ ಜಿಲ್ಲೆಯಲ್ಲಿ ಮಾತ್ರ ಭಾಗವಹಿಸಲು ಅರ್ಹತೆ ಹೊಂದಿರುತ್ತಾರೆ. ಭಾಗವಹಿಸುವ ಸಮಯದಲ್ಲಿ ಆಧಾರ ಕಾರ್ಡ್ / ಶಾಲಾ ಕಾಲೇಜು ಮುಖ್ಯಸ್ಥರಿಂದ ಪತ್ರ ಹಾಗೂ ಬ್ಯಾಂಕ್ ಪಾಸ್ ಬುಕ್ ದೃಢೀಕೃತ ನಕಲು ಪತ್ರ ತರುವುದು ಕಡ್ಡಾಯವಾಗಿರುತ್ತದೆ ಎಂದು ತಿಳಿಸಿದರು.
ಹಿಂದಿ ಹೇರಿಕೆ ನಿಲ್ಲಿಸಿ ಅಭಿಯಾನ ಆರಂಭಿಸಿದ ಕನ್ನಡಿಗರು! ಇಲ್ಲಿವೆ ವಿವಿಧ ಪೋಸ್ಟರ್‌ಗಳು
ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಇಚ್ಛಿಸುವ ಸಂಘ-ಸಂಸ್ಥೆಗಳು ಹಾಗೂ ಕಾಲೇಜುಗಳಿಂದ ತಮ್ಮ ಸಂಸ್ಥೆಯ ಕ್ರೀಡಾಪಟುಗಳನ್ನು ಕಳುಹಿಸಲು ಕೋರಲಾಗಿದೆ. ಸ್ಪರ್ಧೆಗಳಲ್ಲಿ ಪ್ರತಿ ಸಂಘ/ಸಂಸ್ಥೆ/ಕಾಲೇಜುಗಳಿಂದ ಒಂದು ತಂಡವು ಮಾತ್ರ ಭಾಗವಹಿಸಬಹುದು. ವಿಜೇತರಾದವರು ಮೈಸೂರಿನಲ್ಲಿ ಅ.10 ರಿಂದ 15 ರವರೆಗೆ ನಡೆಯುವ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಹೆಚ್ಚಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕರು, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಶ್ರೀ ಕಂಠೀರವ ಕ್ರೀಡಾಂಗಣ, ಬೆಂಗಳೂರು ಇಲ್ಲಿ ಖುದ್ದಾಗಿ ಅಥವಾ ದೂರವಾಣಿ: 080-22239771 ಅಥವಾ ಮೊಬೈಲ್ ಸಂಖ್ಯೆ: 9480886545, 7204266766 ಮೂಲಕ ಸಂಪರ್ಕಿಸಬಹುದು ಎಂದು ತಿಳಿಸಿದರು.