Asianet Suvarna News Asianet Suvarna News

ಬೆಂಗಳೂರಿನ ಪೀಪಲ್ಸ್‌ ಮ್ಯಾನ್‌ ಖ್ಯಾತಿಯ ಇನ್ಸ್‌ಪೆಕ್ಟರ್‌ ಮಂಜುನಾಥ್‌ ಲಿವರ್‌ ಕ್ಯಾನ್ಸರ್‌ಗೆ ಬಲಿ

ಬೆಂಗಳೂರಿನಲ್ಲಿ ಕುಟುಂಬ, ಸಂಸಾರಕ್ಕಿಂತಲೂ ಹೆಚ್ಚಾಗಿ ವೃತ್ತಿಯನ್ನೇ ಪ್ರೀತಿಸುತ್ತಿದ್ದ ಪೊಲೀಸ್‌ ಇನ್ಸ್‌ಪೆಕ್ಟರ್‌ ಮಂಜುನಾಥ್‌ ಲಿವರ್‌ ಕ್ಯಾನ್ಸರ್‌ನಿಂದ ಸಾವನ್ನಪ್ಪಿದ್ದಾರೆ.

Bengaluru inspector Manjunath succumbed to liver cancer sat
Author
First Published Jun 4, 2023, 10:09 PM IST

ಬೆಂಗಳೂರು (ಜೂ.04): ಸಿಲಿಕಾನ್‌ ಸಿಟಿ, ಟ್ರಾಫಿಕ್‌ ಸಿಟಿ ಎಂದು ಖ್ಯಾತವಾದ ಬೆಂಗಳೂರಿನಲ್ಲಿ ಕುಟುಂಬ, ಸಂಸಾರಕ್ಕಿಂತಲೂ ಹೆಚ್ಚಾಗಿ ವೃತ್ತಿಯನ್ನೇ ಪ್ರೀತಿಸುತ್ತಿದ್ದ ಪೊಲೀಸ್‌ ಇನ್ಸ್‌ಪೆಕ್ಟರ್‌ ಮಂಜುನಾಥ್‌ ಲಿವರ್‌ ಕ್ಯಾನ್ಸರ್‌ನಿಂದ ಸಾವನ್ನಪ್ಪಿದ್ದಾರೆ.

ಇನ್ಸ್‌ಪೆಕ್ಟರ್‌ ಮಂಜುನಾಥ್‌ ಇತ್ತೀಚೆಗೆ ಬೆಂಗಳೂರಿನ ಜಯನಗರ ಪೊಲೀಸ್‌ ಠಾಣೆಯಲ್ಲಿ ವೃತ್ತಿ ಮಾಡುತ್ತಿದ್ದರು. ಆದರೆ, ಕಾರ್ಯದಕ್ಷತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಮಂಜುನಾಥ್‌ ಆರೋಗ್ಯದ ಕಡೆಗೆ ಹೆಚ್ಚಾಗಿ ಗಮನ ಹರಿಸಿರಲಿಲ್ಲ. ಹೀಗಾಗಿ, ಆಹಾರ ಮತ್ತು ದಿನನಿತ್ಯದ ದೈಹಿಕ ಚಟುವಟಿಕೆಗಳಿಂದ ಲಿವರ್‌ ಕ್ಯಾನ್ಸರ್‌ ಉಂಟಾಗಿದೆ. ಇನ್ನು ಅದು ಕೊನೆಯ ಹಂತದಲ್ಲಿರುವಾಗ ಕಳೆದ ಜನವರಿಯಿಂದ ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿರುವುದು ತಿಳಿದಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಚಿಕಿತ್ಸೆ ಫಲಿಸದೇ ಮಂಜುನಾಥ್‌ ಸಾವನ್ನಪ್ಪಿದ್ದಾರೆ. ಹುಟ್ಟೂರು ಹಾಸನಕ್ಕೆ ಇನ್ಸ್ಪೆಕ್ಟರ್ ಮಂಜುನಾಥ್ ಮೃತದೇಹ ರವಾನೆ ಮಾಡಲು ಕುಟುಂಬಸ್ಥರ ಸಿದ್ಧತೆ ನಡೆಸಿದ್ದು, ಹಾಸನದಲ್ಲಿ ಅಂತಿಮ ಸಂಸ್ಕಾರ ನಡೆಸಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ. 

ಬೆಂಗಳೂರು - ಹಾಸನ ಹೆದ್ದಾರಿಯಲ್ಲಿ ಲಾರಿ ಹಿಂಭಾಗಕ್ಕೆ ಗುದ್ದಿದ ಕಾರು: ನೆಲಮಂಗಲ ಯುವಕರು ಸಾವು

ಪೀಪಲ್ಸ್‌ ಮ್ಯಾನ್‌ ಎಂದು ಖ್ಯಾತಿ: ಹಾಸನ ಮೂಲದವರಾದ ಮಂಜುನಾಥ್ ಯುಆರ್ 2007ನೇ ಬ್ಯಾಚ್ ನ ಪೊಲೀಸ್ ಇನ್ಸ್ಪೆಕ್ಟರ್ ಆಗಿ ವೃತ್ತಿಗೆ ಸೇರಿಕೊಂಡಿದ್ದರು. ಕಳೆದ 2021 ರಲ್ಲಿ ಮುಖ್ಯಮಂತ್ರಿ ಪದಕಕ್ಕೂ ಭಾಜನರಾಗಿದ್ದರು. ರಾಜ್ಯದ ಮೈಸೂರು ಪೊಲೀಸ್ ಅಕಾಡೆಮಿಯಲ್ಲಿ ತಮ್ಮ ಮೊದಲ ಕೆಲಸವನ್ನು ಪ್ರಾರಂಭಿಸಿದರು. ಪೊಲೀಸ್ ಅಕಾಡೆಮಿಯಲ್ಲಿ ಯಶಸ್ವಿಯಾದ ನಂತರ ಬೆಳಗಾವಿ, ಚಾಮರಾಜನಗರ, ಬೇಲೂರು ಮತ್ತು ಕರ್ನಾಟಕದ ಹಲವಾರು ಭಾಗಗಳಲ್ಲಿ ಕೆಲಸ ಮಾಡಿದರು. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ತಮ್ಮ 15 ವರ್ಷಗಳ ಸೇವೆಯಲ್ಲಿ ಹಲವಾರು ಪ್ರಕರಣಗಳನ್ನು ಪರಿಹರಿಸಿ ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದಾರೆ. ಅವರನ್ನು ಕೆಲವೆಡೆ ಪೀಪಲ್ಸ್ ಮ್ಯಾನ್ ಎಂದು ಕರೆಯಲಾಗುತ್ತಿತ್ತು. ಜೊತೆಗೆ, ರಾಜ್ಯದ ಹಲವಾರು ಸಂಸ್ಥೆಗಳಿಂದ ಗುರುತಿಸಿ ಸನ್ಮಾನಿಸಲಾಗಿತ್ತು.

ಪತ್ನಿ, ಮಗುವಿನಿಂದ ಅಗಲಿಕೆ: ಇನ್ನು ಮೃತ ಇನ್ಸ್‌ಪೆಕ್ಟರ್ ಮಂಜುನಾಥ್‌ ಅವರಿಗೆ ಕೆಲವು ವರ್ಷಗಳ ಹಿಂದೆ ಮದುವೆಯಾಗಿದ್ದು, ಪತ್ನಿ ಹಾಗೂ ಚಿಕ್ಕ ಮಗನಿದ್ದಾನೆ. ದಕ್ಷ ಹಾಗೂ ಪ್ರಾಮಾಣಿಕ ಸೇವೆಯನ್ನು ಸಲ್ಲಿಸುವ ಮೂಲಕ ಹಂತ ಹಂತವಾಗಿ ಉನ್ನತ ಸ್ಥಾನಗಳನ್ನು ಅಲಂಕರಿಸುತ್ತಾ ಬಂದಿದ್ದರು. ಅವರ ದಕ್ಷ ಕಾರ್ಯ ನಿರ್ವಹಣೆಯಿಂದ ಬೆಂಗಳೂರಿನ ಜಯನಗರ ಠಾಣೆಗೆ ವರ್ಗಾವಣೆಯಾಗಿ ಬಂದಿದ್ದರು. ಆದರೆ, ವಿಧಿಯ ಆಟವೇ ಬೇರೆಯಾಗಿದ್ದು, ಈಗ ಗುಣಪಡಿಸಲಾಗದ ಮಾರಕ ರೋಗದಿಂದ ಎಲ್ಲರನ್ನು ಬಿಟ್ಟು ಅಗಲಿದ್ದಾರೆ.

ಕರೆಂಟ್‌ ಹೊಡೆದು ಕಂಬದಲ್ಲೇ ಒದ್ದಾಡಿ ಪ್ರಾಣಬಿಟ್ಟ ಜೆಸ್ಕಾಂ ಲೈನ್‌ಮ್ಯಾನ್‌!

ಬೆಂಗಳೂರು ಪೊಲೀಸ್‌ ಸಹಾಯವಾಣಿ 112 ರಲ್ಲಿ ತಾಂತ್ರಿಕ ಸಮಸ್ಯೆ: ರಾಜ್ಯ ರಾಜಧಾನಿ ಬೆಂಗಳೂರಿನ ನಿವಾಸಿಗಳು ಯಾವುದೇ ಅಪರಾಧ ಸಂಬಂಧಿತ ವಿಚಾರಗಳಿಗೆ ಪೊಲೀಸರನ್ನು ಸಂಪರ್ಕ ಮಾಡಲು ಬಳಸುತ್ತಿದ್ದ 112 ಸಹಾಯವಾಣಿ ಸಂಖ್ಯೆಯಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಬದಲಿ ದೂರವಾಣಿ ಸಂಖ್ಯೆಯನ್ನು ನೀಡಲಾಗಿದೆ. ಬೆಂಗಳೂರು ಪೊಲೀಸ್ ಇಲಾಖೆಯ 112 ಸಂಖ್ಯೆಗೆ ತಾಂತ್ರಿಕ ಸಮಸ್ಯೆ ಎದುರಾಗಿದೆ. ಈ ಬಗ್ಗೆ ಟ್ವಿಟರ್ ಮೂಲಕ ಬೆಂಗಳೂರು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ಪರ್ಯಾಯ ನಂಬರ್ 080-22943000 ಬಳಸುವಂತೆ ಸೂಚನೆ ನೀಡಿದ್ದಾರೆ. ಯಾವುದೇ ಅಪರಾಧ ಸಂಬಂಧಿತ ವಿಚಾರಗಳಿಗೆ ಪರ್ಯಾಯ ನಂಬರ್ ಬಳಸುವಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.

Follow Us:
Download App:
  • android
  • ios