ಫೆಬ್ರವರಿ 20 ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 12 ಗಂಟೆಗಳ ಕಾಲ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮಾರತ್ತಹಳ್ಳಿ ಸಮೀಪದ ಕಾಮಗಾರಿಯಿಂದಾಗಿ ಈ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನೀರನ್ನು ಮುಂಚಿತವಾಗಿ ಶೇಖರಿಸಿಟ್ಟುಕೊಳ್ಳುವಂತೆ ಜಲಮಂಡಳಿ ಸೂಚಿಸಿದೆ.
ಬೆಂಗಳೂರು (ಫೆ.18) : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾವೇರಿ 4ನೇ ಹಂತ 2ನೇ ಘಟ್ಟದ ಕಾನಿಅ(ಪೂರ್ವ )-1 ರ ವ್ಯಾಪ್ತಿಗೆ ಒಳಪಡುವ ಮಾರತ್ತಹಳ್ಳಿ, ಜೀವಿಕಾ ಆಸ್ಪತ್ರೆ ಸಮೀಪ 800 ಮಿ.ಮೀ. ವ್ಯಾಸದ ಹೂಡಿ ಜಿ.ಎಲ್.ಆರ್ ಒಳ ಹರಿವು ಮಾರ್ಗವನ್ನು ಸ್ಥಗಿತಗೊಳಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಫೆ.20ರ ಬೆಳಿಗ್ಗೆ 09ರಿಂದ ರಾತ್ರಿ 09ರವರೆಗೆ ಸುಮಾರು 12 ಗಂಟೆಗಳ ಕಾಲ ಈ ಕೆಳಕಂಡ ಪ್ರದೇಶಗಳಲ್ಲಿ ಕಾವೇರಿ ನೀರುಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿರುವ ಪ್ರದೇಶಗಳು: ಮಾರತ್ತಹಳ್ಳಿ, ದೊಡ್ಡನ್ನೆಕುಂದಿ, ಮುನ್ನೆಕೊಳಲು, ಓ.ಎಂ.ಬಿ.ಆರ್. ಲೇಔಟ್, ಹೆಚ್.ಆರ್.ಬಿ.ಆರ್ ಲೇಔಟ್, ಸಿಗೇಹಳ್ಳಿ, ಬಟ್ಟರಹಳ್ಳಿ, ಮೇಡೆಹಳ್ಳಿ, ಟಿ.ಸಿ.ಪಾಳ್ಯ, ವಿಜಿನಪುರ , ಬೆಳಂದೂರು, ಯಮಲೂರು, ಮುರುಗೇಶ್ ಪಾಳ್ಯ, ಕೋಣೆನಅಗ್ರಹಾರ, ಸಿ.ವಿ.ರಾಮನ್ ನಗರ, ಇಂದ್ರನಗರ, ತಿಪ್ಪಸಂದ್ರ, ಜೀವನ್ ಭೀಮಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಸರಬರಾಜು ವ್ಯತ್ಯಯ ಉಂಟಾಗಲಿದೆ.
ಇದನ್ನೂ ಓದಿ: ಬೆಂಗಳೂರಿಗೆ ಜಲಕ್ಷಾಮ ಆರಂಭ: ಈ 6 ಚಟುವಟಿಕೆಗೆ ಕಾವೇರಿ ನೀರು ಬಳಕೆ ನಿಷೇಧಿಸಿದ ಜಲಮಂಡಳಿ!
ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಲು ಹಾಗೂ ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
