ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇ ವಾಹನ ಸವಾರರಿಗೆ ಮತ್ತೆ ಬರೆ: ಟೋಲ್ ದರ ಭಾರೀ ಹೆಚ್ಚಳ..!

ನಾಳೆಯಿಂದ(ಏ.01) ಶೇಕಡಾ 22ರಷ್ಟು ಟೋಲ್ ದರ ಹೆಚ್ಚಳ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮ 2008ರ ಪ್ರಕಾರ ದರ ಹೆಚ್ಚಳ ಮಾಡಲಾಗಿದೆ.

Bengaluru Mysuru Expressway Toll Rate Again Increase grg

ಬೆಂಗಳೂರು(ಮಾ.31):  ಟೋಲ್ ಸಂಗ್ರಹ ಆರಂಭವಾದ 17 ದಿನಗಳಲ್ಲೇ ಮತ್ತೆ ಟೋಲ್ ದರ ಹೆಚ್ಚಳವಾಗುವ ಮೂಲಕ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ವಾಹನ ಸವಾರರಿಗೆ ಮತ್ತೆ ಬರೆ ಬಿದ್ದಿದೆ. ಹೌದು, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಸಂಚಾರ ಇದೀಗ ಮತ್ತಷ್ಟು ದುಬಾರಿಯಾಗಿದೆ. 

ನಾಳೆಯಿಂದ(ಏ.01) ಶೇಕಡಾ 22ರಷ್ಟು ಟೋಲ್ ದರ ಹೆಚ್ಚಳ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮ 2008ರ ಪ್ರಕಾರ ದರ ಹೆಚ್ಚಳ ಮಾಡಲಾಗಿದೆ.

 

Bengaluru-Mysuru expressway: ಈಗಾಗ್ಲೆ ಕಿತ್ತೋಗಿದೆ ; ಇದು 40 % ಅಲ್ಲ, 60 % : ಬಿಕೆ ಹರಿಪ್ರಸಾದ್

ಟೋಲ್ ದರ ಹೆಚ್ಚಳಕ್ಕೆ ಸಾರ್ವಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಹೆದ್ದಾರಿ ಪ್ರಾಧಿಕಾರ ಜನಸಾಮಾನ್ಯರನ್ನ ಲೂಟಿ ಮಾಡ್ತಿದೆ ಅಂತ ಕಿಡಿಕಾರಿದ್ದಾರೆ. 

ಹೀಗಿರಲಿದೆ ಪರಿಷ್ಕೃತ ದರ: 

ಕಾರು/ವ್ಯಾನ್/ಜೀಪ್: 

ಏಕಮುಖ ಸಂಚಾರ 165 ರೂ(30ರೂ ಹೆಚ್ಚಳ). ದ್ವಿಮುಖ ಸಂಚಾರ - 250 ರೂ(45ರೂ ಹೆಚ್ಚಳ). 

ಲಘು ವಾಹನಗಳು/ಮಿನಿ ಬಸ್: 

270 ರೂ.(50ರೂ ಹೆಚ್ಚಳ) ದ್ವಿಮುಖ ಸಂಚಾರ -405 ರೂ.(75 ರೂ. ಹೆಚ್ಚಳ)

ಟ್ರಕ್/ ಬಸ್/ಎರಡು ಆಕ್ಸೆಲ್ ವಾಹನ: 

565 ರೂ(165 ರೂ ಹೆಚ್ಚಳ), ದ್ವಿಮುಖ ಸಂಚಾರ - 850 ರೂ(160 ರೂ.ಹೆಚ್ಚಳ)

ತ್ರಿ ಆಕ್ಸೆಲ್ ವಾಣಿಜ್ಯ ವಾಹನಗಳು: 

ಏಕ‌ಮುಖ ಸಂಚಾರ 615 ರೂ.(115ರೂ ಹೆಚ್ಚಳ), ದ್ವಿ ಮುಖಸಂಚಾರ - 925 ರೂ.( 225 ರೂ.ಹೆಚ್ಚಳ)

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ಗಲಾಟೆ, NHAIಗೆ ಮಹತ್ವದ ಸೂಚನೆ ನೀಡಿದ ಹೈಕೋರ್ಟ್!

ಭಾರೀ ಕಟ್ಟಡ ನಿರ್ಮಾಣ ವಾಹಗನಳು/ಅರ್ಥ್ ಮೂವರ್ಸ್‌/4-6 ಆಕ್ಸೆಲ್ ವಾಹನಗಳು: 

885 ರೂ.(165ರೂ ಹೆಚ್ಚಳ) ದ್ವಿಮುಖ ಸಂಚಾರ - 1,330 ರೂ. ಹೆಚ್ಚಳ(250ರೂ ಹೆಚ್ಚಳ)

7 ಅಥವಾ ಅದಕ್ಕಿಂತ ಎಕ್ಸೆಲ್ ವಾಹನಗಳು: 

1,080 ರೂ.(200ರೂ ಹೆಚ್ಚಳ) ದ್ವಿಮುಖ ಸಂಚಾರ - 1,620 ರೂ.( 305 ರೂ.ಹೆಚ್ಚಳ)

ಟೋಲ್ ದರ ಹೆಚ್ಚಿಸೋದು ಸಾಮಾನ್ಯ

ದಶಪಥ ಹೆದ್ದಾರಿ ಟೋಲ್ ದರ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿಂತೆ ಮೈಸೂರು-ಕೊಡಗು ಬಿಜೆಪಿ ಸಂಸದ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದು,  ಹೈವೇ ಅಥಾರಿಟಿ ಪ್ರತಿ ವರ್ಷ ಟೋಲ್ ದರ ಹೆಚ್ಚಿಸೋದು ಸಾಮಾನ್ಯ. ದೇಶದ ಎಲ್ಲ ಟೋಲ್ ದರಗಳಲ್ಲೂ ಹೆಚ್ಚಳ ಆಗಿದೆ. ಆದರೆ ಮೈಸೂರು-ಬೆಂಗಳೂರು ಹೆದ್ದಾರಿ ಮಾರ್ಚ್ 14 ರಂದು ಪ್ರಾರಂಭ ಆಗಿದೆ. ನಾನು ಈಗಾಗಲೇ ಹೈವೇ ಅಥಾರಿಟಿಯ ಹಿರಿಯ ಅಧಿಕಾರಿಗಳ ಜತೆ ಮಾತಾಡಿದ್ದೇನೆ. ಹೀಗಾಗಿ ಈ ಹೆದ್ದಾರಿಗೆ ಟೋಲ್ ದರ ಹೆಚ್ಚಳ ನಿರ್ಧಾರ ಪರಾಮರ್ಶೆ ಮಾಡಬೇಕೆಂದು ವಿನಂತಿಸಿಕೊಂಡಿದ್ದೇನೆ.ಟೋಲ್ ದರ ಯಥಾಸ್ಥಿತಿ ಮುಂದುವರೆಸುವಂತೆ ಮನವಿ ಮಾಡಿದ್ದೇನೆ. ಇವತ್ತು ಸಂಜೆಯೊಳಗೆ ಹೈವೇ ಅಥಾರಿಟಿಯವರು ತಮ್ಮ ನಿರ್ಣಯವನ್ನ ತಿಳಿಸುತ್ತಾರೆ ಅಂತ ಹೇಳಿದ್ದಾರೆ. 

Latest Videos
Follow Us:
Download App:
  • android
  • ios