Breaking : ಮಾಜಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ವಶಕ್ಕೆ ಪಡೆದ ರಾಮನಗರ ಪೊಲೀಸರು
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಗಡಿ ಶಾಸಕ ಎ. ಮಂಜುನಾಥ್ ಅವರನ್ನು ರಾಮನಗರ ಜಿಲ್ಲಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು (ಮಾ.16): ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ರಾಮನಗರ ಜಿಲ್ಲಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅವರೊಂದಿಗೆ ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಎ. ಮಂಜುನಾಥ್ ಕೂಡ ಪೊಲೀಸರ ವಶಕ್ಕೆ ಒಳಪಟ್ಟಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಿರ್ಮಿಸಲಾದ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಕಳಪೆ ಕಾಮಗಾರಿ ಮಾಡಲಾಗಿದೆ. ಇನ್ನು ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಇರುವ ಸರ್ವಿಸ್ ರಸ್ತೆಯನ್ನು ಸಮರ್ಪಕವಾಗಿ ಅಭಿವೃದ್ಧಿ ಮಾಡದಿದ್ದರೂ ಟೋಲ್ ಸಂಗ್ರಹಣೆ ಮಾಡುತ್ತಿರುವುದು ರಾಜ್ಯ ಸಾರ್ವಜನಿಕರಿಗೆ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಕಣಿಮಿಣಿಕೆ ಟೋಲ್ ಬಳಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಟೋಲ್ ಸಂಗ್ರಹಕ್ಕೆ ವಿರೋಧಿಸಿದ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹೆದ್ದಾರಿ ಪೂರ್ಣಗೊಳ್ಳದೇ ಸುಂಕ ವಸೂಲಿ ಸರಿಯಲ್ಲ: ಸಿದ್ದರಾಮಯ್ಯ
ನಿನ್ನೆ ಕಾಂಗ್ರೆಸ್ ಇಂದು ಇಂದು ಜೆಡಿಎಸ್ ಪ್ರತಿಭಟನೆ: ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯ ಟೋಲ್ ರಗಳೆ ಹಾಗೂ ಟೋಲ್ ಸಂಗ್ರಹದ ವಿರುದ್ಧ ಸ್ಥಳೀಯರು ಹಾಗೂ ವಿವಿಧ ವಿಪಕ್ಷಗಳ ನಾಯಕರಿಂದ ಪ್ರತಿಭಟನೆ ಮಾಡಲಾಗುತ್ತಿದೆ. ಹೆದ್ದಾರಿ ಪ್ರಾಧಿಕಾರದ ಟೋಲ್ ಸಂಗ್ರಹದ ವಿರುದ್ಧ ದಿನೇ ದಿನೇ ಒಂದಲ್ಲ ಒಂದು ಪ್ರತಿಭಟನೆಗಳು ನಡೆಯುತ್ತಿವೆ. ಈಗ ಟೋಲ್ ಸಂಗ್ರಹ ವಿಚಾರದಲ್ಲಿ ರಾಜಕೀಯ ತಿರುವು ಪಡೆದುಕೊಂಡಿದೆ. ನಿನ್ನೆ ಕಾಂಗ್ರೆಸ್ ಪ್ರತಿಭಟನೆ ಬೆನ್ನಲ್ಲೇ, ಇಂದು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಲಾಗುತ್ತಿತ್ತು.
ಟೋಲ್ ಸಂಗ್ರಹಕ್ಕೆ ಅಡ್ಡಿ: ಹೆಜ್ಜಾಲ ಬಳಿಯ ಕಣಮಿಣಕಿ ಟೋಲ್ ಸಮೀಪ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ರಸ್ತೆಗೆ ಅಡ್ಡಬಂದು ಟೋಲ್ ಸಂಗ್ರಹ ಮಾಡದಂತೆ ತಡೆಯಲು ಮುಂದಾದ ನಿಖಿಲ್ ಕುಮಾರಸ್ವಾಮಿ ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಮತ್ತು ಟೋಲ್ ಸಂಗ್ರಹಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.
ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ಗಲಾಟೆ, NHAIಗೆ ಮಹತ್ವದ ಸೂಚನೆ ನೀಡಿದ ಹೈಕೋರ್ಟ್!
ಪ್ರತಿಭಟನಾ ಸ್ಥಳಕ್ಕೆ ಬಾರದ ಪ್ರಾಧಿಕಾರ ನಿರ್ದೇಶಕ: ಹೆಜ್ಜಾಲ ಬಳಿಯ ಕಣಿಮಿಣಿಕೆ ಟೋಲ್ ಸಂಗ್ರಹ ಕೇಂದ್ರ ಬಳಿ ಸುಮಾರು ಎರಡು ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್ ಅವರ ಬರುವಿಕೆಗಾಗಿ ನಿಖಿಲ್ ಕುಮಾರಸ್ವಾಮಿ ಕಾಯುತ್ತಾ ಶಾಂತವಾಗಿ ಪ್ರತಿಭಟನೆ ಮಾಡುತ್ತಿದ್ದರು. ಆದರೆ, ನಿರ್ದೇಶಕರು ಸ್ಥಳಕ್ಕೆ ಆಗಮಿಸದ ಹಿನ್ನೆಲೆಯಲ್ಲಿ ಟೋಲ್ ಸಂಗ್ರಹ ಮಾಡುವುದನ್ನು ತಡೆದು ವಾಹನಗಳು ಟೋಲ್‌ನಿಂದ ಬರದಂತೆ ಅಡ್ಡಿಪಡಿಸಿದರು. ಈ ಹಿನ್ನೆಲೆಯಲ್ಲಿ ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಹಾಗೂ ಎ.ಮಂಜುನಾಥ್ ಪೊಲೀಸರ ವಶಕ್ಕೆ ಪಡೆದಿದ್ದಾರೆ.
ಟೋಲ್ ಸಂಗ್ರಹದ ಕುರಿತು ಹೈಕೋರ್ಟ್ ಪ್ರವೇಶ: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆಗೊಂಡಿದ್ದರು ಸರ್ವೀಸ್ ರಸ್ತೆ ಆಗಿಲ್ಲ. ಫಾಸ್ಟಾಗ್ ಕಾರ್ಯ ನಿರ್ವಹಿಸುತ್ತಿಲ್ಲ. ಟೋಲ್ ಸಂಗ್ರಹದ ಮೂಲಕ ಹಗಲು ದರೋಡೆ ನಡೆಯುತ್ತಿದೆ ಅನ್ನೋ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡಿದೆ. ಜನರ ಪ್ರತಿಭಟಟನೆ, ವಿಪಕ್ಷಗಳ ಆರೋಪ ಕುರಿತು ಉಲ್ಲೇಖಿಸಿದ ಹೈಕೋರ್ಟ್, ಟೋಲ್ ಸಂಗ್ರಹ ಕುರಿತು 3 ವಾರಗಳಲ್ಲಿ ಉತ್ತರ ನೀಡುವಂತೆ ಹೈಕೋರ್ಟ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡಿದೆ.