* ಮೈಸೂರು ರಸ್ತೆಯಿಂದ ಕೆಂಗೇರಿ ಮೆಟ್ರೋ ಮಾರ್ಗ ಲೋಕಾರ್ಪಣೆಗೆ ದಿನಾಂಕ ನಿಗದಿ * 75 ಸಾವಿರಕ್ಕೂ ಅಧಿಕ ಪ್ರಯಾಣಿಕರಿಗೆ ಅನುಕೂಲ* ಮೈಸೂರು ರಸ್ತೆ- ಕೆಂಗೇರಿ ಮೆಟ್ರೋ ಮಾರ್ಗ 1,560 ಕೋಟಿ ವೆಚ್ಚದಲ್ಲಿ ನಿರ್ಮಾಣ

ಬೆಂಗಳೂರು, (ಆ.21): ಬಹು ನಿರೀಕ್ಷಿತ ಮೈಸೂರು ರಸ್ತೆಯಿಂದ ಕೆಂಗೇರಿ ಮೆಟ್ರೋ ಮಾರ್ಗ ಲೋಕಾರ್ಪಣೆಗೆ ದಿನಾಂಕ ನಿಗದಿಯಾಗಿದೆ.

ಇದೇ ಆಗಸ್ಟ್ 29 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಚಾಲನೆ ನೀಡಲಿದ್ದು, ಅಂದೇ ಮಧ್ಯಾಹ್ನ 12ಕ್ಕೆ ಜನರ ಸೇವೆಗೆ ಈಮಾರ್ಗ ಲಭ್ಯವಾಗಲಿದೆ.

 ಆಗಸ್ಟ್ 29 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಚಾಲನೆ ನೀಡಿದ್ದಾರೆ.

ಮೈಸೂರಲ್ಲಿ ಮೆಟ್ರೋ ಲೈಟ್‌ ಯೋಜನೆ ಬಗ್ಗೆ ಅಧ್ಯಯನ!

ಒಟ್ಟು 7.53 ಕೀಮಿ ಉದ್ದದ ಇರುವ ಮೈಸೂರು ರಸ್ತೆ- ಕೆಂಗೇರಿ ಮೆಟ್ರೋ ಮಾರ್ಗವ 1,560 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಬಿಎಂಆರ್ಸಿಎಲ್ ಕಳೆದ ಮೂರು ತಿಂಗಳಿನಿಂದ ಟ್ರಯಲ್ ರನ್ ನಡೆಸಿದೆ.

Scroll to load tweet…

ನೇರಳೆ ಮಾರ್ಗದ ವಿಸ್ತರಿತ ಮಾರ್ಗದಲ್ಲಿ ರೈಲು ಸಂಚಾರ ನಡೆಸುವುದರಿಂದ 75 ಸಾವಿರಕ್ಕೂ ಅಧಿಕ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿದೆ. ಆರ್. ಆರ್. ನಗರ ಸೇರಿದಂತೆ ಸುತ್ತಮತ್ತಲಿನ ಬಡಾವಣೆಗಳ ಜನರಿಗೆ ಮೆಟ್ರೋ ಸಂಪರ್ಕ ಸಿಗಲಿದೆ.

ಈ ವಿಸ್ತರಿತ ನೇರಳೆ ಮಾರ್ಗದಲ್ಲಿ ನಾಯಂಡಹಳ್ಳಿ, ರಾಜರಾಜೇಶ್ವರಿ ನಗರ, ಜ್ಞಾನ ಭಾರತಿ, ಪಟ್ಟಣಗೆರೆ, ಮೈಲಸಂದ್ರ ಮತ್ತು ಕೆಂಗೇರಿ ಬಸ್ ನಿಲ್ದಾಣ ಸೇರಿದಂತೆ ಒಟ್ಟು ಆರು ಮೆಟ್ರೋ ನಿಲ್ದಾಣಗಳು ಬರುತ್ತವೆ.