ಬೆಂಗಳೂರು ಮೆಟ್ರೋ ಹಳದಿ ಮಾರ್ಗ ಸಂಚಾರ ಆರಂಭಕ್ಕೆ ತಿಂಗಳಷ್ಟೇ ಬಾಕಿ!

ಬೆಂಗಳೂರು ಮೆಟ್ರೋದ ಹಳದಿ ಮಾರ್ಗದಲ್ಲಿ ಮುಂದಿನ ಹತ್ತು ದಿನಗಳ ಕಾಲ ಪ್ರಾಯೋಗಿಕ ಸಂಚಾರ ನಡೆಯಲಿದ್ದು, ಈ ವರ್ಷದ ಅಂತ್ಯದಲ್ಲಿ ವಾಣಿಜ್ಯ ಸಂಚಾರ ಆರಂಭವಾಗುವ ನಿರೀಕ್ಷೆಯಿದೆ.

Bengaluru namma metro yellow line opening soon Weight Capacity Brake Testing on going  gow

 ಬೆಂಗಳೂರು (ಸೆ.11): ನಮ್ಮ ಮೆಟ್ರೊ ಹಳದಿ ಮಾರ್ಗದ ಬೊಮ್ಮಸಂದ್ರ ಆರ್.ವಿ.ರಸ್ತೆ ನಡುವೆ ತೂಕ ಸಾಮರ್ಥ್ಯದ ಸಂಬಂಧಿತ ಆಸಿಲೇಷನ್ ಮತ್ತು ಎಲೆಕ್ಟ್ರಾನಿಕ್ ಬ್ರೇಕರ್ಸ್ ಡಿಸ್ಟ್ರಿಬೂಷನ್ (ಇಬಿಡಿ) ಪ್ರಾಯೋಗಿಕ ಸಂಚಾರ ಮುಂದಿನ ಹತ್ತು ದಿನ ನಡೆಯಲಿದೆ.

ಲಕ್ನೋ ಮೂಲದ ಸಂಶೋಧನಾ ವಿನ್ಯಾಸ ಮತ್ತು ಗುಣಮಟ್ಟ ಸಂಸ್ಥೆ (ಆರ್‌ಡಿಎಸ್‌ಒ) ಅಧಿಕಾರಿಗಳು ಈ ತಪಾಸಣೆ ನಡೆಸುತ್ತಿದ್ದಾರೆ. ಈ ಸಂಸ್ಥೆ ಪ್ರಾಯೋಗಿಕ ವರದಿ ಸಲ್ಲಿಸಿದ ಬಳಿಕ ರೈಲ್ವೆ ಮಂಡಳಿಯಿಂದ ತಾಂತ್ರಿಕ ಮಂಜೂರಾತಿ ಪಡೆಯಲಾಗುವುದು ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ತಿಳಿಸಿದೆ.

ರಾಜಸ್ಥಾನದ ನಿಗೂಢ ಭೂತದ ಕೋಟೆ ಹೊಕ್ಕ ಸಹೋದರರು ಕಣ್ಮರೆ, 10 ದಿನದಿಂದ ಹುಡುಕಾಟ, ಓರ್ವನ ಶವ ಪತ್ತೆ!

ಹೀಗೆ ಪ್ರಯೋಗ:
ಆಸಿಲೇಷನ್ ಮತ್ತು ಇಬಿಡಿ ಪ್ರಾಯೋಗಿಕ ಸಂಚಾರದ ಭಾಗವಾಗಿ ಮೆಟ್ರೋ ರೈಲಿನಲ್ಲಿ ಮರಳು ಮೂಟೆ ತುಂಬಿಸಿ ಭಾರ ಪರೀಕ್ಷೆ, ಬೋಗಿಯಲ್ಲಿ ನೀರನ್ನು ತುಂಬಿಸಿ ನಿಯಂತ್ರಣ ಪರೀಕ್ಷೆ ಮಾಡಲಾಗುತ್ತದೆ. ರೈಲು ವೇಗವಾಗಿ ಮತ್ತು ನಿಧಾನಕ್ಕೆ ಹೋಗುವಾಗ ನಿಯಂತ್ರಣಕ್ಕೆ ತರುವುದನ್ನು ಪರೀಕ್ಷಿಸಲಾಗುತ್ತದೆ. ಈ ವೇಳೆ ಬ್ರೇಕ್ ಪರೀಕ್ಷೆ ಕೂಡ ನಡೆಯಲಿದೆ.

19 ಕಿ.ಮೀ. ಉದ್ದ ಈ ಮಾರ್ಗ ಹೊಂದಿದ್ದು, 16 ನಿಲ್ದಾಣ ಒಳಗೊಂಡಿದೆ. ಚಾಲಕ ರಹಿತವಾಗಿ ಮೆಟ್ರೊ ರೈಲು ಇಲ್ಲಿ ಸಂಚರಿಸಲಿದೆ. ಸದ್ಯ ಆರು ಸೆಟ್‌ಗಳ ಒಂದು ರೈಲು ಪ್ರಾಯೋಗಿಕ ಸಂಚಾರ ನಡೆಸುತ್ತಿದ್ದು, ಇನ್ನಷ್ಟು ರೈಲುಗಳು ಬರಬೇಕಿದೆ. ಈ ವರ್ಷದ ಅಂತ್ಯದಲ್ಲಿ ಈ ಮಾರ್ಗದಲ್ಲಿ ವಾಣಿಜ್ಯ ಸಂಚಾರ ಆರಂಭವಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಳದಿ ಮಾರ್ಗದಲ್ಲಿ ಒಟ್ಟು 16 ಮೆಟ್ರೋ ಸ್ಟೇಷನ್‌ಗಳು ಇದ್ದು, ಆರ್‌.ವಿ. ರಸ್ತೆಯಿಂದ ಬೊಮ್ಮಸಂದ್ರವನ್ನು ಸಂಪರ್ಕಿಸಲಿದೆ. 18.82 ಕಿ.ಮೀ. ಉದ್ದದ ಈ ಮೆಟ್ರೋ ಮಾರ್ಗದಲ್ಲಿ ಹೊಸ ಮಾದರಿಯ ಚಾಲಕ ರಹಿತ ರೈಲು ಸಂಚಾರ ನಡೆಯಲಿರುವ ಕಾರಣ 37 ಬಗೆಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.  ಸಿಎಂಆರ್‌ಎಸ್‌ ಹಸಿರು ನಿಶಾನೆ ಬಳಿಕ ವರ್ಷಾಂತ್ಯಕ್ಕೆ ಹಳದಿ ಮಾರ್ಗದಲ್ಲಿ ರೈಲುಗಳ ವಾಣಿಜ್ಯ ಸೇವೆ ಆರಂಭವಾಗುವ ನಿರೀಕ್ಷೆಯಿದೆ. ಹೀಗಾಗಿ ಈ ವರ್ಷದ ಡಿಸೆಂಬರ್ ಅಥವಾ ಮುಂದಿನ ವರ್ಷದ ಜನವರಿಯಲ್ಲಿ ಓಡಾಡಲು ರೆಡಿಯಾಗಿ. 

ಜಗತ್ತಿನ ನಾಲ್ಕನೇ ಅತಿದೊಡ್ಡ ರೈಲು ಜಾಲ ಹೊಂದಿದ ಭಾರತದ ರೈಲ್ವೆ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು!

ಹೊಸೂರಿಗೆ ಮೆಟ್ರೋ:
ತೀವ್ರ ವಿರೋಧ ಹೊರತಾಗಿಯೂ ದಕ್ಷಿಣ ಭಾರತದ ಮೊದಲ ಅಂತಾರಾಜ್ಯ ಮೆಟ್ರೋ ಯೋಜನೆಯಾದ ಬೊಮ್ಮಸಂದ್ರದಿಂದ ತಮಿಳುನಾಡಿನ ಹೊಸೂರಿನವರೆಗೆ 23 ಕಿ.ಮೀ. ವಿಸ್ತರಣೆ ಯೋಜನೆಯೂ ಇದೆ.  23 ಕಿ.ಮೀ. ಉದ್ದದ ಈ ಯೋಜನೆ ಪೈಕಿ 12 ಕಿ.ಮೀ. ಕರ್ನಾಟಕದಲ್ಲಿ ಮತ್ತು 11 ಕಿ.ಮೀ. ತಮಿಳುನಾಡಿನಲ್ಲಿರಲಿದೆ. 

ಎಲೆಕ್ಟ್ರಾನಿಕ್‌ ಸಿಟಿ ಮೂಲಕ ಹಾದುಹೋಗುವ ಆರ್‌.ವಿ.ರಸ್ತೆ - ಬೊಮ್ಮಸಂದ್ರದ ಹಳದಿ ಮಾರ್ಗ ವಿಸ್ತರಿಸಿ ಹೊಸೂರಿನವರೆಗೆ ಕೊಂಡೊಯ್ಯುವ ಯೋಜನೆ ಇದು. ಪ್ರಾಥಮಿಕ ಹಂತದಲ್ಲಿ 12 ನಿಲ್ದಾಣ ನಿರ್ಮಾಣಕ್ಕಾಗಿ ಸ್ಥಳಗಳನ್ನು ಗುರುತಿಸಿಕೊಳ್ಳಲಾಗಿದೆ. ಬೊಮ್ಮಸಂದ್ರ, ನಾರಾಯಣ ಹಾಸ್ಪಿಟಲ್‌, ಅತ್ತಿಬೆಲೆ ಇಂಡಸ್ಟ್ರಿಯಲ್ ಏರಿಯಾ, ಅತ್ತಿಬೆಲೆ, ಸಿಪ್‌ಕಾಟ್‌ ಇಂಡಸ್ಟ್ರಿಯಲ್‌ ಪಾರ್ಕ್‌, ಹೊಸೂರು ಬಸ್‌ ಟರ್ಮಿನಲ್‌ಗಳಲ್ಲಿ ಮೆಟ್ರೋ ನಿಲ್ದಾಣ ನಿರ್ಮಿಸುವ ಸಾಧ್ಯತೆ ಇದೆ.

ತೀವ್ರ ವಿರೋಧ: 
ಇನ್ನು ನಮ್ಮ ಮೆಟ್ರೋವನ್ನು ಹೊಸೂರಿಗೆ ವಿಸ್ತರಿಸುವ ಬಗ್ಗೆ ರಾಜ್ಯದ ನಗರ ಸಾರಿಗೆ ತಜ್ಞರು, ಕನ್ನಡಪರ ಸಂಘಟನೆಗಳು ಹಿಂದೆಯೇ ತೀವ್ರ ವಿರೋಧ ವ್ಯಕ್ತಪಡಿಸಿವೆ. ಈ ವಿಸ್ತರಣೆಯಿಂದ ಬೆಂಗಳೂರಿಗೆ ನಯಾಪೈಸೆ ಪ್ರಯೋಜನ ಇಲ್ಲ. ಬದಲಾಗಿ ಇಲ್ಲಿನ ಇಂಡಸ್ಟ್ರಿಗಳು, ಉದ್ಯಮಿಗಳಿಗೆ ತೊಂದರೆಯೇ ಆಗಲಿದೆ. ಅಲ್ಲಿನ ಕಡಿಮೆ ಬೆಲೆಯ ಭೂಮಿ ಸೇರಿ ಇತರ ವಿಚಾರಗಳಿಂದ ಸಣ್ಣ, ಅತಿ ಸಣ್ಣ ಉದ್ಯಮಗಳು, ಸ್ಟಾರ್ಟ್‌ ಅಪ್‌ಗಳು ಎಲೆಕ್ಟ್ರಾನಿಕ್ ಸಿಟಿಯಿಂದ ಹೊಸೂರು ಕಡೆ ಸಾಗಬಹುದು ಎಂಬ ಆತಂಕವಿದೆ.

Latest Videos
Follow Us:
Download App:
  • android
  • ios