ನೆಲಮಂಗಲ[ ಆ. 07]  ರೌಡಿಶೀರ್ ಗಳ ಮೇಲೆ ಫೈರಿಂಗ್ ಮಾಡಲಾಗಿದೆ.  ಕೊಲೆ ಆರೋಪಿಗಳ ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿದ್ದಾರೆ. ಮಾದನಾಯಕನಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರ.

ಸಿಪಿಐ ಸತ್ಯನಾರಾಯಣ್ ಫೈರಿಂಗ್ ಮಾಡಿದ್ದಾರೆ. ಚಂದನ್ ಮತ್ತು ಶರಣ್ ಎಂಬ ಕೊಲೆ ಆರೋಪಿಗಳ ಮೇಲೆ ಫೈರಿಂಗ್ ಮಾಡಲಾಗಿದೆ. ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್ ಗಳ ಪಟ್ಟಿಯಲ್ಲಿದ್ದ ಆರೋಪಿಗಳ ಕಾಲಿಗೆ ಫೈರಿಂಗ್ ಮಾಡಲಾಗಿದೆ.

ಕಳೆದ ಜುಲೈ 23 ರಂದು ಮಂಜುನಾಥ್ ಎಂಬುವವರನ್ನ ಕಿಡ್ನಾಪ್ ಮಾಡಿ ಕೊಲೆ ಮಾಡಿದ್ದ ಆರೋಪದಡಿ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಕಿಡ್ನಾಪ್ ಮಾಡಿದ 6 ಮಂದಿ ತಂಡ ಹಣಕ್ಕೆ ಬೇಡಿಕೆ ಇಟ್ಟಿತ್ತು. ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿ ಫಾರೆಸ್ಟ್ ಗೇಟ್ ಬಳಿ ಆರೋಪಿಗಳ ಮಾಹಿತಿ ಮೇರೆಗೆ ಪೊಲೀಸರ ದಾಳಿ ನಡೆಸಿದ್ದಾರೆ.

ಈ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಆರೋಪಿಗಳು ಹಲ್ಲೆಗೆ ಮುಂದಾಗಿದ್ದಾರೆ. ಪೊಲೀಸ್ ಪೇದೆ ಮನಗುಂಡಿ ಹಾಗೂ ಪಿ.ಎಸ್.ಐ ಮುರಳಿ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಪೊಲೀಸರು ಫೈರ್ ಮಾಡಿದ್ದಾರೆ.

ಆರೋಪಿ ಹಾಗೂ ಗಾಯಾಳು ಪೊಲೀಸರನ್ನು ಮಾಗಡಿ ರಸ್ತೆಯ ಅನುಪಮ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.