Asianet Suvarna News Asianet Suvarna News

ಬೆಂಗಳೂರು ನಗರ ಸೇರಿ 15 ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್‌’, ಜೋರು ಮಳೆ ಎಚ್ಚರ

* ಅ.29, 30ಕ್ಕೆ 15 ಜಿಲ್ಲೆಗಳಲ್ಲಿ ಮಳೆಯ ‘ಯೆಲ್ಲೋ ಅಲರ್ಟ್‌’
* ಕಳೆದ ಒಂದು ವಾರದಿಂದ ಅಬ್ಬರಿಸುತ್ತಿರುವ ಮಳೆರಾಯ
* ಮಲೆನಾಡು ಭಾಗದಲ್ಲಿಯೂ ಮಳೆ ಅಬ್ಬರ
* ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರಲ್ಲಿ ಮಳೆ

Bengaluru on yellow alert several parts of Karnataka to witness heavy rain mah
Author
Bengaluru, First Published Oct 27, 2021, 2:23 AM IST

ಬೆಂಗಳೂರು (ಅ. 27)  ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಅಕ್ಟೋಬರ್‌ 29 ಮತ್ತು 30ರಂದು ಹಿಂಗಾರು ಮಾರುತಗಳು ಪ್ರಬಲವಾಗಲಿದ್ದು, ಗುಡುಗು ಸಹಿತ ಮಳೆಯಾಗಲಿದೆ. 

ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ. ಅ.29ಕ್ಕೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ದಾವಣಗೆರೆ, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯಲ್ಲಿ ‘ಯೆಲ್ಲೋ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ.

 ಅ.30ಕ್ಕೆ ಈ ಜಿಲ್ಲೆಗಳ ಜೊತೆಗೆ ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೂ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ. ಅ.27 ಮತ್ತು ಅ.28ರಂದು ಮಳೆಯ ಅಬ್ಬರ ಇರುವುದಿಲ್ಲ. ಉತ್ತರ ಕರ್ನಾಟಕದಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಲಾಗಿದೆ.

ಉತ್ತರಾಖಂಡ ಮೇಘಸ್ಫೋಟ್ ಆರ್ಭಟ ಹೇಗಿತ್ತು?

ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ಗಂಟೆ ಅವಧಿಯಲ್ಲಿ ಬೀದರ್‌ನಲ್ಲಿ ಕನಿಷ್ಠ 12 ಡಿಗ್ರಿ ಸೆಲ್ಸಿಯಸ್‌ ಮತ್ತು ಶಿರಾಲಿಯಲ್ಲಿ ಗರಿಷ್ಠ 33.7 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಉಷ್ಣತೆ ವರದಿಯಾಗುತ್ತಿದ್ದು ಚಳಿಯ ವಾತಾವರಣ ಇದೆ.

ಬೆಳಗಾವಿಯ ಲೋಂಡಾ, ಶಿವಮೊಗ್ಗದ ಆಗುಂಬೆಯಲ್ಲಿ ತಲಾ 5 ಸೆಂ.ಮಿ. ಉತ್ತರ ಕನ್ನಡದ ಜಗಲ್‌ಬೆಟ್‌, ಮೈಸೂರಿನ ಕೆಆರ್‌ ನಗರ ತಲಾ 4, ದಕ್ಷಿಣ ಕನ್ನಡದ ಪುತ್ತೂರು, ಮೈಸೂರಿನ ಬಿಳಿಕೆರೆ, ಕೊಡಗಿನ ನಾಪೊಕ್ಲು, ಚಿಕ್ಕಮಗಳೂರಿನ ಕಳಸದಲ್ಲಿ ತಲಾ 3 ಸೆಂಮೀ ಮಳೆಯಾಗಿದೆ.

 

Follow Us:
Download App:
  • android
  • ios