Asianet Suvarna News Asianet Suvarna News

ಗಣೇಶ ಹಬ್ಬದಲ್ಲಿ ರೌಡಿಶೀಟರ್‌ಗಳಿಗೆ ಬಾಲ ಬಿಚ್ಚದಂತೆ ಎಚ್ಚರಿಕೆ ಕೊಟ್ಟ ಪೊಲೀಸ್ ಕಮಿಷನರ್!

ಬೆಂಗಳೂರಿನಲ್ಲಿ ಶಾಂತಿಯುತ ಗಣೇಶ ಹಬ್ಬ ಆಚರಣೆ ಮಾಡಬೇಕು. ಈ ವೇಳೆ ರೌಡಿ ಶೀಟರ್‌ಗಳ ಮೇಲೂ ಹದ್ದಿನ ಕಣ್ಣಿಡಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಎಚ್ಚರಿಕೆ ನೀಡಿದ್ದಾರೆ. 

Bengaluru police commissioner warned rowdies do not do trouble to Ganesh festival sat
Author
First Published Aug 21, 2024, 7:01 PM IST | Last Updated Aug 21, 2024, 7:01 PM IST

ಬೆಂಗಳೂರು (ಆ.21): ನಗರದಲ್ಲಿ ಎಲ್ಲರೂ ಪ್ರತಿ ವರ್ಷದಂತೆ ಶಾಂತಿ ಸೌಹಾರ್ದತೆಯಿಂದ ಗಣೇಶ ಹಬ್ಬವನ್ನು ಆಚರಿಸಬೇಕು. ಈಗಾಗಲೇ ಎಲ್ಲಾ ಕಡೆ ಶಾಂತಿ ಸಭೆಗಳನ್ನು ನಡೆಸಲಾಗಿದೆ. ಈ ಬಾರಿ ಯಾವುದೇ ರೀತಿಯ ಅನಾನುಕೂಲವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಗಣೇಶ ಹಬ್ಬದಲ್ಲಿ ರೌಡಿಶೀಟರ್‌ಗಳ ಮೇಲೂ ಕಣ್ಣಿಡಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದರು.

ಗಣೇಶ ಚತುರ್ಥಿ ಆಚರಣೆ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬಿಬಿಎಂಪಿ ಮತ್ತು ಬೆಂಗಳೂರು ನಗರ ಪೊಲೀಸ್ ಜಂಟಿ ಸಹಯೋಗದಲ್ಲಿ ಬುಧವಾರ ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದಲ್ಲಿ ನಡೆದ 'ಶಾಂತಿ ಸೌಹಾರ್ದತೆ ಸಭೆ'ಯನ್ನು ಉದ್ದೇಶಿಸಿ  ಮಾತನಾಡಿದರು. ಪಾಲಿಕೆ, ಪೊಲೀಸ್ ಇಲಾಖೆಯಿಂದ ಬರುವ ಸಲಹೆ, ಸೂಚನೆಗಳನ್ನು ಎಲ್ಲರೂ ತಪ್ಪದೆ ಪಾಲಿಸಬೇಕು. ಮೆರವಣಿಗೆ, ಮೆರವಣಿಗೆಯ ಮಾರ್ಗಕ್ಕೆ ಎಲ್ಲರೂ ಸಹಕಾರ ನೀಡಬೇಕು. ಹಬ್ಬದ ವೇಳೆ ಅನಾನುಕೂಲ, ಅಚಾತುರ್ಯ ನಡೆಯದಂತೆ ನೋಡಿಕೋಳ್ಳಲಾಗುವುದು. ಎಲ್ಲಿಯೂ ಸಂಚಾರ ದಟ್ಟಣೆಯಾಗದಂತೆ ಪೊಲೀಸ್ ಅಧಿಕರಿಗಳು ಸೂಕ್ರ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ 'ಗಲ್ಲಿ ಗಣೇಶ ಕೂರಿಸಲು 63 ಸಿಂಗಲ್ ವಿಂಡೋ ವ್ಯವಸ್ಥೆ' ಮಾಡಿದ ಬಿಬಿಎಂಪಿ!

ಗಣೇಶ ಮೂರ್ತಿಗಳನ್ನು ಕೂರಿಸಲು ಅನುಮತಿ ಪಡೆದುಕೊಂಡವರು ರಸ್ತೆಗಳ ನಡುವೆ ಗಣೇಶ ಮೂರ್ತಿಗಳನ್ನಿಡುವುದನ್ನು ನಿಯಂತ್ರಿಸಿ ಸೂಕ್ತವಾದ ಜಾಗವನ್ನು ಗುರುತಿಸಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಬೇಕು. ಇದರಿಂದ ನಾಗರೀಕರ ಸಂಚಾರಕ್ಕೂ ಅನುಕೂಲವಾಗಲಿದೆ. ಕಾನೂನು ವ್ಯವಸ್ಥೆಯಲ್ಲಿ ಯಾವುದೇ ರೀತಿಯ ದಕ್ಕೆಯಾಗದಂತೆ ಸಂಭ್ರಮದಿಂದ, ಶಾಂತಿ ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸೋಣ. ಇನ್ನು ಎಲ್ಲಾ ಸೂಕ್ಷ್ಮ ಪ್ರದೇಶಗಳಲ್ಲಿ ಎಚ್ಚರವಹಿಸೊ ಕೆಲಸ ಮಾಡಲಾಗುತ್ತಿದೆ. ಇದೇ ವೇಳೆ ರೌಡಿಶೀಟರ್‌ಗಳ ಬಗ್ಗೆಯೂ ಗಮನವಹರಿಸಲಾಗುತ್ತಿದೆ ಎಂದು ಎಚ್ಚರಿಕೆ ರವಾನಿಸಿದ್ದಾರೆ. 

ಗಣೇಶ ಪ್ರತಿಷ್ಠಾನದ ಆಯೋಜನಕರಿಂದ ಪೊಲೀಸ್ ಇಲಾಖೆ, ಬಿಬಿಎಂಪಿಗೆ ಬಂದ ಮನವಿಗಳು:

  • * ಗಣಪತಿ ವಿಸರ್ಜನೆ ಮಾಡಲು ಸೂಕ್ತವಾದ ಸ್ಥಳ ನಿಗಧಿಪಡಿಸಬೇಕು.
  • * ಗಣೇಶ ವಿಸರ್ಜನೆಗೆ ಹೋಗಲು ಮೆರವಣಿಗೆಗೆ ಅವಕಾಶ ಮಾಡಿಕೊಡಬೇಕು.
  • * ಸೂಕ್ಷ್ಮ ಪ್ರದೇಶಗಳಲ್ಲಿ ಸರಿಯಾದ ಪೊಲೀಸ್ ಭದ್ರತೆ ನೀಡಬೇಕು.
  • * ಧಾರ್ಮಿಕ ಆಚರಣೆಗಳು ನಡೆಸುವಾಗ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಮನವಿ.
  • * ಪಿಒಪಿ ಗಣೇಶ ಮೂರ್ತಿಗಳನ್ನು ಕಡ್ಡಾಯವಾಗಿ ನಿಷೇಧಿಸಲು ನಮ್ಮ ಒಪ್ಪಿಗೆಯಿದೆ.
  • * ಏಕ ಗವಾಕ್ಷಿ ಪದ್ದತಿಯನ್ನು ಸರಿಯಾಗಿ ಜಾರಿಗೊಳಿಸಿ.
  • * ಗಣೇಶ ವಿಸರ್ಜನೆಯ ಮೆರವಣಿಗೆಯ ವೇಳೆ ಸಂಚಾರದಟ್ಟಣೆ ಉಂಟಾಗದಂತೆ ಕ್ರಮವಹಿಸಲು ಮನವಿ.

ಗಂಡನ 2ನೇ ಮದುವೆ ನಿಲ್ಲಿಸಿದ ಮೊದಲ ಹೆಂಡತಿ; ನಾನವನಲ್ಲ ಎಂದ ಪತಿರಾಯ!

  • * ಗಣೇಶ ವಿಸರ್ಜನಾ ಸಮಯದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಿ.
  • * ಗಣೇಶ ಪ್ರತಿಷ್ಠಾಪನೆಯ ಸ್ಥಳದಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಸಲು ಅನುಮತಿ ಕೊಡಿ.
  • * ಮೊಬೈಲ್ ಟ್ಯಾಂಕರ್‌ಗಳನ್ನು ಹೆಚ್ಚಾಗಿ ನಿಯೋಜನೆ ಮಾಡಿ.
  • * ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ವಿದ್ಯುತ್ ಅವಘಡ ನಡೆಯದಂತೆ ಬೆಸ್ಕಾಂ ಕ್ರಮವಹಿಸಬೇಕು.
  • * ಎಲ್ಲ ಬಡಾವಣೆಗಳಲ್ಲಿ ಹೆಚ್ಚೆಚ್ಚು ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶ ನೀಡಬಾರದು.
  • * ಕೆರೆಗಳ ಬಳಿಯಿರುವ ಕಲ್ಯಾಣಿಗಳಲ್ಲಿ ವಿಸರ್ಜನೆ ಮಾಡುವ ವೇಳೆ ಸುಗಮ ವ್ಯವಸ್ಥೆ ಮಾಡಿ. ರಸ್ತೆ ಬದಿ ಗಣೇಶ ಮೂರ್ತಿ ಇಟ್ಟುಹೋಗಲು ಅವಕಾಶ ಕೊಡಬೇಡಿ.
  • * ಮೆರವಣಿಗೆ ಹೋಗುವ ರಸ್ತೆಗಳನ್ನು ಸರಿಯಾಗಿ ದುರಸ್ತಿಪಡಿಸಿಕೊಡಲು ಮನವಿ.
Latest Videos
Follow Us:
Download App:
  • android
  • ios