ನಾಡಪ್ರಭು ಕೆಂಪೇಗೌಡ ಅವರು ಕಟ್ಟಿದ ವಿಶ್ವಮಾನ್ಯನಗರ ಬೆಂಗಳೂರಿಗೆ ಪಿಂಚಣಿದಾರರ ಊರು, ಉದ್ಯಾನ ನಗರ, ಸಿಲಿಕಾನ್‌ ವ್ಯಾಲಿ ಎಂದೆಲ್ಲಾ ಹೆಸರುಗಳಿದ್ದವು. ಈಗ ಅವು ಗುಂಡಿಗಳೂರು, ಅಧ್ವಾನ ನಗರ, ಗುಂಡಿಗಳ ವ್ಯಾಲಿ ಎಂದಾಗಿದೆ. ಕಾಮಗಾರಿಗಳಲ್ಲಿ ಪರ್ಸಂಟೇಜ್‌ ವ್ಯವಸ್ಥೆಯೇ ಇಂತಹ ಕುಖ್ಯಾತಿಗೆ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಪಾದಿಸಿದ್ದಾರೆ.

ಬೆಂಗಳೂರು (ಅ.20): ನಾಡಪ್ರಭು ಕೆಂಪೇಗೌಡ ಅವರು ಕಟ್ಟಿದ ವಿಶ್ವಮಾನ್ಯನಗರ ಬೆಂಗಳೂರಿಗೆ ಪಿಂಚಣಿದಾರರ ಊರು, ಉದ್ಯಾನ ನಗರ, ಸಿಲಿಕಾನ್‌ ವ್ಯಾಲಿ ಎಂದೆಲ್ಲಾ ಹೆಸರುಗಳಿದ್ದವು. ಈಗ ಅವು ಗುಂಡಿಗಳೂರು, ಅಧ್ವಾನ ನಗರ, ಗುಂಡಿಗಳ ವ್ಯಾಲಿ ಎಂದಾಗಿದೆ. ಕಾಮಗಾರಿಗಳಲ್ಲಿ ಪರ್ಸಂಟೇಜ್‌ ವ್ಯವಸ್ಥೆಯೇ ಇಂತಹ ಕುಖ್ಯಾತಿಗೆ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಪಾದಿಸಿದ್ದಾರೆ.

ಈ ಸಂಬಂಧ ಸರಣಿ ಟ್ವಿಟ್‌ ಮಾಡಿರುವ ಅವರು, ರಸ್ತೆಗುಂಡಿಗಳು ಸಾವಿನ ಗುಂಡಿಗಳಾಗಿವೆ. ನಗರದ ಲುಲೂಮಾಲ್‌ ಎದುರಿನ ರಸ್ತೆಯಲ್ಲಿ ಗುಂಡಿಗೆ ಇನ್ನೊಂದು ಜೀವ ಬಲಿಯಾದ ಮೇಲೆ ಎಚ್ಚೆತ್ತುಕೊಳ್ಳುವ ನಾಟಕ ನಡೆದಿದೆ. ಶಾಶ್ವತ ಪರಿಹಾರ ಎಲ್ಲಿ? ಬೆಂಗಳೂರಿನಲ್ಲಿ ಕೊಲೆಪಾತಕ ಗುಂಡಿ ಕೂಪಗಳು ಸರಣಿ ಸಾವುಗಳಿಗೆ ಕಾರಣವಾಗಿದ್ದರೆ, ಅದೇ ಗುಂಡಿಗಳು ಕೆಲವರಿಗೆ ಕಲ್ಪವೃಕ್ಷವಾಗಿವೆ. ರಾಜ್ಯ ಬಿಜೆಪಿ ಸರ್ಕಾರಕ್ಕೆ ರಸ್ತೆ ಗುಂಡಿಗಳು ಎಂದರೆ ಬಲು ಇಷ್ಟ. ಗುಂಡಿಗಳು ಬಿದ್ದಷ್ಟೂ ಕಿಸೆಗೆ ಹರಿದು ಬರಲಿದೆ ದುಡ್ಡು. ಇವರಿಗೆ ಹೈಕೋರ್ಚ್‌ ಛೀಮಾರಿ ಹಾಕಿದರೂ ನಾಚಿಕೆ, ಸಂಕೋಚ ಎನ್ನುವುದಿಲ್ಲ. ಜೈಲಿಗೆ ಅಟ್ಟುವುದಾಗಿ ಎಚ್ಚರಿಕೆ ಕೊಟ್ಟರೂ ಅಧಿಕಾರಿಗಳು ಭಂಡತನ ಬಿಡುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಜೆಡಿಎಸ್‌ 30-40 ಸ್ಥಾನ ಗೆದ್ರೆ ನಾನು ಸಿಎಂ ಆಗಲ್ಲ: ಹೆಚ್‌.ಡಿ.ಕುಮಾರಸ್ವಾಮಿ

ಗುಂಡಿ ಬಿದ್ದ ರಸ್ತೆಗಳು ರಾಜ್ಯದ ಗೌರವವನ್ನು ಮೂರಾಬಟ್ಟೆ ಮಾಡುತ್ತಿರುವುದು ಒಂದೆಡೆಯಾದರೆ, ಇನ್ನೊಂದೆಡೆ ಸರ್ಕಾರ ಜಾಗತಿಕ ಹೂಡಿಕೆದಾರರ ಸಮಾವೇಶ, ಜಾಗತಿಕ ತಂತ್ರಜ್ಞಾನ ಶೃಂಗ ನಡೆಸುತ್ತಿದೆ. ‘ರಸ್ತೆಗುಂಡಿಗಳ ಶೃಂಗ’ವನ್ನೂ ನಡೆಸಿದರೂ ಇನ್ನೂ ಚೆನ್ನಾಗಿರುತ್ತದೆ. ರಸ್ತೆ ಗುಂಡಿಗಳ ಸರಣಿ ಸಾವುಗಳಿಗೆ ರಾಜ್ಯ ಬಿಜೆಪಿ ಸರ್ಕಾರವೇ ನೇರ ಕಾರಣ. ಮುಗ್ಧ ಜನರ ಸಾವು ನೋವುಗಳಿಗೆ ಬಿಬಿಎಂಪಿಯೇ ಸಂಪೂರ್ಣ ಹೊಣೆ. ಸಂಬಂಧಪಟ್ಟ ಸಚಿವರು, ಅಧಿಕಾರಿಗಳೇ ಇದಕ್ಕೆ ಉತ್ತರದಾಯಿಗಳು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೆಡಿ​ಎಸ್‌ ಅಧಿ​ಕಾ​ರಕ್ಕೆ ಬರು​ವು​ದನ್ನು ತಪ್ಪಿ​ಸಲು ಯಾರಿಗೂ ಸಾಧ್ಯ​ವಿಲ್ಲ: ಹೆಚ್‌.ಡಿ.ಕುಮಾರಸ್ವಾಮಿ

ಪಾಲಿಕೆ ಮಾಡಿದ ಪಾಪಕ್ಕೆ ನತದೃಷ್ಟ ಮಹಿಳೆ ಉಮಾದೇವಿ ಅವರು ಬಲಿಯಾಗಿದ್ದಾರೆ. ಅವರಿಗೆ ಪರಿಹಾರ ಕೊಟ್ಟು ಕೈ ತೊಳೆದುಕೊಳ್ಳುವುದಲ್ಲ. ಇನ್ನಾದರೂ ಗುಂಡಿಗಳನ್ನು ಮುಚ್ಚಬೇಕು ಮತ್ತು ರಸ್ತೆಗಳನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡಬೇಕು. ಮೃತ ಮಹಿಳೆ ಉಮಾದೇಶಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ನಿಡಲಿ. ರಾಜ್ಯ ಸರ್ಕಾರ ಅವರಿಗೆ ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.