ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ 2.90 ಕೋಟಿ ರೂ. ದಾಖಲೆಗಳಿಲ್ಲದ ಹಣ ಜಪ್ತಿ

ಬೆಂಗಳೂರು ಗ್ರಾಮಾಂತರ ಲೋಕಸಭಾ ವ್ಯಾಪ್ತಿಯಲ್ಲಿ ದಾಖಲೆಗಳಿಲ್ಲದೇ ಸಾಗಣೆ ಮಾಡುತ್ತಿದ್ದ 2.90 ಕೋಟಿ ರೂ. ಮೌಲ್ಯದ ಹಣವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

Bengaluru Rural Lok Sabha constituency Rs 2 crore 90 Lakh undocumented money seized sat

ಬೆಂಗಳೂರು (ಏ.15): ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹೆಬ್ಬಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ದಾಖಲೆಗಳಿಲ್ಲದೇ ಕಪ್ಪು ಬ್ಯಾಗ್‌ನಲ್ಲಿ ಸಾಗಿಸುತ್ತಿದ್ದ 2.90 ಕೋಟಿ ರೂ. ಹಣವನ್ನು ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

ಇಡೀ ದೇಶದಲ್ಲಿ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾದಾಗಿನಿಂದ ಬರೋಬ್ಬರಿ 4,500 ಕೋಟಿ ರೂ.ಗಿಂತ ಅಧಿಕ ಕಪ್ಪು ಹಣವನ್ನು ಜಪ್ತಿ ಮಾಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಇದರ ಬೆನ್ನಲ್ಲಿಯೇ ಬೊಮ್ಮಸಂದ್ರ ಇಂಡಸ್ಟ್ರೀಯಲ್ ಏರಿಯಾ ಚುನಾವಣೆ ಚೆಕ್‌ ಪೋಸ್ಟ್‌ನಲ್ಲಿ ಯಾವುದೇ ದಾಖಲೆಗಳಿಲ್ಲದೇ ಟೆಂಪೋ ಮಾದರಿಯ ವಾಹನದಲ್ಲಿ ಸಾಗಿಸುತ್ತಿದ್ದ 2.90 ಕೋಟಿ ರೂ. ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ. 

ಬೆಂಗಳೂರಿನ ಖಾಸಗಿ ಟ್ರಸ್ಟ್‌ಗಳಿಗೆ ಹಂಚಲು ತೋರಿಸುತ್ತಿದ್ದ 30 ಕೋಟಿ ರೂ. ಮೌಲ್ಯದ ನೋಟುಗಳು ಪತ್ತೆ

ಸಿ.ಎಮ್.ಎಸ್ ಏಜೆನ್ಸಿಗೆ ಸೇರಿದ ವಾಹನದಲ್ಲಿ ಹಣವನ್ನು ಸಾಗಾಟ ಮಾಡಲಾಗುತ್ತಿತ್ತು. ಬೊಮ್ಮಸಂದ್ರದ ಬಳಿಯ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ಮಾಡಿದ ವೇಳೆ ನಾಲ್ಕು ಬೃಹತ್ ಬ್ಯಾಗ್‌ಗಳಲ್ಲಿ ಕಂತೆ ಕಂತೆ ಹಣವನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಕೂಡಲೇ ಚೆಕ್‌ಪೋಸ್ಟ್ ಸಿಬ್ಬಂದಿ ಮೇಲಧಿಕಾರಿಗಳಿಗೆ ಮಾಹಿತಿ ರವಾನಿಸಿ ಹಣವನ್ನು ಸೀಜ್ ಮಾಡಿದ್ದಾರೆ. ಒಟ್ಟು 2.90 ಕೋಟಿ ರೂ. ಹಣವನ್ನು ಸಾಗಾಟ ಮಾಡುತ್ತಿದ್ದರೂ ಅದಕ್ಕೆ ದಾಖಲೆಗಳನ್ನು ಮಾತ್ರ ಇಟ್ಟುಕೊಂಡಿರಲಿಲ್ಲ. ಆದ್ದರಿಂದ ಚುನಾವಣಾಧಿಕಾರಿಗಳು ಹಾಗೂ ಪೊಲೀಸರ ತಂಡವು ದಾಖಲೆಯಿಲ್ಲದ ಹಣವನ್ನು ಹಾಗೂ ವಾಹನ ಚಾಲಕರನ್ನು ವಶಕ್ಕೆ ಪಡೆದಿದ್ದಾರೆ. ವಾಹನವನ್ನು ಹೆಬ್ಬಗೋಡಿ ಪೊಲೀಸ್ ಠಾಣೆಗೆ ತರಲಾಗಿದೆ.

Latest Videos
Follow Us:
Download App:
  • android
  • ios