Asianet Suvarna News Asianet Suvarna News

ನಾಗಸಂದ್ರ-ಯಲಚೇನಹಳ್ಳಿ ಮಾರ್ಗದ RV ರಸ್ತೆ ಮೆಟ್ರೋ ನಿಲ್ದಾಣ ಬಂದ್

ಬೆಂಗಳೂರಿನ ನಾಗಸಂದ್ರ-ಯಲಚೇನಹಳ್ಳಿ ಮಾರ್ಗದ  ಆರ್‌ವಿ ರಸ್ತೆ ಮೆಟ್ರೋ ನಿಲ್ದಾಣ 1 ವರ್ಷ ಬಂದ್ ಆಗಲಿದೆ ಎಂದು ತಿಳಿದುಬಂದಿದೆ. ಅದಕ್ಕೆ ಕಾರಣ ಇಲ್ಲಿದೆ.

Bengaluru RV Road Metro station likely to be closed for a year
Author
Bengaluru, First Published Jun 23, 2019, 2:59 PM IST

ಬೆಂಗಳೂರು, (ಜೂ. 23):  ರಾಷ್ಟ್ರೀಯ ವಿದ್ಯಾಲಯ ರಸ್ತೆ ಮೆಟ್ರೋ ನಿಲ್ದಾಣವನ್ನು ಒಂದು ವರ್ಷಗಳ ಕಾಲ ಬಂದ್ ಆಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. 

ಆರ್‌ವಿ ರಸ್ತೆ ನಿಲ್ದಾಣದಲ್ಲಿ ಹಳದಿ ಮಾರ್ಗದ ಮೆಟ್ರೋ ಯೋಜನೆ ಕಾರ್ಯ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ನಾಗಸಂದ್ರ-ಯಲಚೇನಹಳ್ಳಿ ಹಸಿರು ಮಾರ್ಗದಲ್ಲಿ ಬರುವ ಆರ್‌ವಿ ರಸ್ತೆ ಮೆಟ್ರೋ ನಿಲ್ದಾಣವನ್ನು ಬಂದ್ ಮಾಡಲಾಗುತ್ತಿದೆ. ಆದ್ರೆ ಈ ಬಗ್ಗೆ ಬಿಎಂಆರ್‌ಸಿಎಲ್‌ನಿಂದ ಯಾವುದೇ ಅಧಿಕೃತ ಆದೇಶ ಹೊರಬಿದ್ದಿಲ್ಲ.

ಪ್ರಯಾಣಿಕರ ಒತ್ತಾಯಕ್ಕೆ ಮಣಿದ BMRCL: 6 ಬೋಗಿಯ ಮತ್ತೊಂದು ಮೆಟ್ರೋ

ಹಸಿರು ಮಾರ್ಗ 2017ರಲ್ಲಿ ಕಾರ್ಯಾಚರಣೆ ಆರಂಭಿಸಿದ್ದು, ಪ್ರತಿನಿತ್ಯವೂ 5 ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಈ ಮೆಟ್ರೋ ನಿಲ್ದಾಣದ ಮೂಲಕ ಪ್ರಯಾಣಿಸುತ್ತಿದ್ದರು. 

ಆರ್‌ವಿ ರಸ್ತೆ ಮೆಟ್ರೋ ನಿಲ್ದಾಣ ಬಂದ್ ಆಗುವುದರಿಂದ ಪ್ರಯಾಣಿಕರು ಜಯನಗರ ಅಥವಾ ಬನಶಂಕರಿ ಮೆಟ್ರೋ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ಮೆಟ್ರೋ ಹತ್ತಬೇಕಿದೆ.

 ಮರಗಳನ್ನು ಉಳಿಸುವ ನಿಟ್ಟಿನಲ್ಲಿ ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರಕ್ಕೆ ತೆರಳುವ ನಿಲ್ದಾಣದಕ್ಕೆ ಆರ್‌ವಿ ನಿಲ್ದಾಣವನ್ನೇ ವಿಸ್ತರಿಸಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ. ಈ ಮೂಲಕ ವೆಚ್ಚ ಕೂಡ ಕಡಿಮೆಯಾಗಲಿದೆ.  

ಇನ್ನು ಆರ್‌ವಿ ರಸ್ತೆಯಿಂದ ಸಿಲ್ಕ್‌ ಬೋರ್ಡ್‌ ಹಳದಿ ಮಾರ್ಗ ಮೆಟ್ರೋ ಕಾಮಾಗಾರಿ 2021ಕ್ಕೆ ಮುಕ್ತಾಯಗೊಳ್ಳಲಿದೆ. 

Click here to read in English-ಇದೇ ಸುದ್ದಿಯನ್ನು ಇಂಗ್ಲೀಷ್‌ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us:
Download App:
  • android
  • ios