Asianet Suvarna News Asianet Suvarna News

ಬೆಂಗಳೂರು ಮಾಲ್‌ನಲ್ಲಿ ಲೈಂಗಿಕ ಕಿರುಕುಳ ವಿಡಿಯೋ ವೈರಲ್: ಪೊಲೀಸರ ಕೈಗೂ ಸಿಗದ ಕಾಮುಕ ಎಲ್ಲಿದ್ದಾನೆ?

ಬೆಂಗಳೂರಿನ ಪ್ರತಿಷ್ಠಿತ ಮಾಲ್‌ನಲ್ಲಿ ನಡೆದ ಲೈಂಗಿಕ ಕಿರುಕುಳದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

Bengaluru Woman Sexually Harassed in Shopping Mall Police Begin Probe After Video Goes Viral sat
Author
First Published Oct 30, 2023, 7:01 PM IST

ಬೆಂಗಳೂರು (ಅ.30): ಬೆಂಗಳೂರಿನ ಪ್ರತಿಷ್ಠಿತ ಮಾಲ್‌ನಲ್ಲಿ ನಡೆದ ಲೈಂಗಿಕ ಕಿರುಕುಳದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ಘಟನೆಯ ವಿಡಯೋವನ್ನು ನಿನ್ನೆ (ಭಾನುವಾರ) ಸಂಜೆ ಮಾಲ್‌ನಲ್ಲಿ ಸೆರೆಹಿಡಿಯಲಾಗಿದೆ.

ಬೆಂಗಳೂರಿನ ಮಾಲ್‌ವೊಂದರಲ್ಲಿ ವಯಸ್ಸಾದ ವ್ಯಕ್ತಿ ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮಾಲ್‌ನಲ್ಲಿ ಯುವತಿಯೊಬ್ಬಳು ನಡೆದು ಬರುವಾಗ ಬೇಕಂತಲೇ ಹಿಂದಿನಿಂದ ಹೋಗಿ ಆಕೆಯ ಹಿಂಭಾಗಕ್ಕೆ ಡಿಕ್ಕಿ ಹೊಡೆಯುತ್ತಾನೆ. ಜೊತೆಗೆ ಆಕೆಯ ಹಿಂಭಾಗವನ್ನು ಅಶ್ಲೀಲವಾಗಿ ಮುಟ್ಟಿ ಆನಂದಿಸಿದ್ದಾನೆ. ಇದಾದ ಬಳಿಕ ಯುವತಿ ಆತನ್ನನು ನೋಡಿದರೆ ತನಗೇನೂ ತಿಳಿದಿಲ್ಲ ಎಂಬಂತೆ ಆಲ್ಲಿಂದ ಮುಂದಕ್ಕೆ ಹೋಗಿದ್ದಾನೆ. ಈ ವೀಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಶಕ್ತಿ ಯೋಜನೆ ಬೆನ್ನಲ್ಲೇ ಸಾರಿಗೆ ನೌಕರರಿಗೆ ಸಿಹಿಸುದ್ದಿ ಕೊಟ್ಟ ಕೆಎಸ್‌ಆರ್‌ಟಿಸಿ

ವಿಡಿಯೋ ಹಂಚಿಕೊಂಡಿರುವ ವ್ಯಕ್ತಿ ಬರೆದುಕೊಂಡ ಮಾಹಿತಿ: ಬೆಂಗಳೂರಿನ ಶಾಪಿಂಗ್‌ ಮಾಲ್‌ನಲ್ಲಿ ಭಾನುವಾರ ಅಂದರೆ ಅ. 29ರ ಸಂಜೆ 6.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ವಿಡಿಯೊದಲ್ಲಿ ಕಾಣುತ್ತಿರುವ ಈ ವ್ಯಕ್ತಿ ಮಾಲ್‌ಗೆ ಬಂದ ಮಹಿಳೆಯರು ಮತ್ತು ಹುಡುಗಿಯರ ಹಿಂದೆ ಓಡಾಡುತ್ತಿದ್ದಾನೆ. ಮೊದಲಿಗೆ ಅವನು ಜನರು ಹೆಚ್ಚಾಗಿರುವ ಪ್ರದೇಶದಲ್ಲಿ ಇದ್ದುದನ್ನು ನೋಡಿದ ನಾನು ಅನುಮಾನಗೊಂಡು ವಿಡಿಯೊ ರೆಕಾರ್ಡ್ ಮಾಡುತ್ತಾ ಹಿಂಬಾಲಿಸಿದೆ. ಈ ವೇಳೆ ಹುಡುಗಿಯೊಬ್ಬಳ ಹಿಂಭಾಗ ಮುಟ್ಟುವುದು ಮಾಡುತ್ತಿದ್ದನು. ಕೂಡಲೇ ಈ ಬಗ್ಗೆ ಸೆಕ್ಯುರಿಟಿಗೆ ಹೋಗಿ ದೂರು ನೀಡಿದ್ದು, ಆತನನ್ನು ಹುಡುಕಿಕೊಂಡು ಬಂದಾಗ ತಪ್ಪಿಸಿಕೊಂಡಿದ್ದ. ಸದ್ಯ ಮಾಲ್ ಆಡಳಿತ ಮಂಡಳಿ ಮತ್ತು ಸೆಕ್ಯೂರಿಟಿಗೆ ಮಾಹಿತಿ ನೀಡಿದ್ದು, ಆ ವ್ಯಕ್ತಿಯನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಆತ ಬರೆದುಕೊಂಡಿದ್ದಾರೆ.

ಬೆಂಗಳೂರಿಗೆ ಬೆಂಕಿ ಕಾಟ: 50ಕ್ಕೂ ಅಧಿಕ ಐಷಾರಾಮಿ ಖಾಸಗಿ ಬಸ್‌ಗಳು ಬೆಂಕಿಗಾಹುತಿ

ಮಾಗಡಿ ರಸ್ತೆ ಪೊಲೀಸರಿಂದ ವಿಡಿಯೋ ಆಧರಿಸಿ ಆರೋಪಿ ಪತ್ತೆಗೆ ಶೋಧ: ಈ ಕುರಿತು ಮಾಗಡಿ ರಸ್ತೆ ಪೊಲೀಸರು ಸೇರಿದಂತೆ ಸ್ಥಳೀಯ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಔಪಚಾರಿಕ ಲಿಖಿತ ದೂರು ದಾಖಲಾಗಿಲ್ಲ. ವಿಡಿಯೋ ದೃಶ್ಯಾವಳಿ ಆಧರಿಸಿ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. ಈ ಘಟನೆ ನಡೆದ ಬೆಂಗಳೂರು ಮಾಲ್‌ನಲ್ಲಿ ನಿಖರವಾದ ಸ್ಥಳವನ್ನು ಖಚಿತಪಡಿಸಲಾಗಿಲ್ಲ. ಆದರೆ, ಆಪಾದಿತ ಲೈಂಗಿಕ ಕಿರುಕುಳದ ವಿವರಗಳನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ವೀಡಿಯೊವನ್ನು ಪರಿಶೀಲಿಸುತ್ತಿದ್ದಾರೆ.

 

Follow Us:
Download App:
  • android
  • ios