ಚಿಕ್ಕಮಗಳೂರು (ಸೆ.01):  ಭದ್ರಾ ಮೇಲ್ದಂಡೆಯಿಂದ ವೇದಾವತಿ ನದಿಯ ಮೂಲಕ ವಾಣಿವಿಲಾಸ ಸಾಗರಕ್ಕೆ ಸೆಪ್ಟಂಬರ್‌ 2ರಂದು ಅಧಿಕೃತವಾಗಿ ನೀರು ಹರಿಸಲಾಗುವುದು.

ಈಗಾಗಲೇ ಪ್ರಾಯೋಗಿಕವಾಗಿ ಮೂರು ಬಾರಿ ನೀರು ಹರಿಸಲಾಗಿದೆ. ಯಶಸ್ವಿಯಾದ ನಂತರ ಇದೇ ಮೊದಲ ಬಾರಿಗೆ ಅಧಿಕೃತವಾಗಿ ಸೆ.2ರಂದು ನೀರು ಹರಿಸಲಾಗುತ್ತದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಆನ್‌ಲೈನ್‌ ಮೂಲಕ ನೀರು ಹರಿಸುವಿಕೆಗೆ ಚಾಲನೆ ನೀಡಲಿದ್ದಾರೆ.

ಸಿದ್ಧಾರ್ಥ ಹೆಗ್ಡೆ ಸಮಾಧಿಗೆ ಮಂತ್ರಾಕ್ಷತೆ ಹಾಕಿ ಬೋದಿ ವೃಕ್ಷ ನೆಟ್ಟ ವಿನಯ್ ಗುರೂಜಿ

ವಿಶ್ವೇಶ್ವರಯ್ಯ ಜಲ ನಿಗಮದ ಅಡಿಯಲ್ಲಿ ಬರುವ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯು ಭದ್ರಾ ಜಲಾಶಯದಿಂದ ಪ್ರಾರಂಭವಾಗಿ ಜಿಲ್ಲೆಯ ತರೀಕೆರೆ ತಾಲೂಕಿನ ಶಾಂತಿಪುರ ಪಂಪ್‌ಹೌಸ್‌-1ರಿಂದ ಲಕ್ಕವಳ್ಳಿ, ಲಿಂಗದಹಳ್ಳಿ, ತರೀಕೆರೆ ಕಸಬಾ, ಅಮೃತಾಪುರ, ಅಜ್ಜಂಪುರ ಗ್ರಾಪಂ ಮೂಲಕ ನೀರು ಹಾದು ಹೋಗಲಿದೆ.

ಚಿಕ್ಕಮಗಳೂರು ಜಿಲ್ಲಾ ಪ್ರವಾಸಕ್ಕೆ ತೆರಳಲು ಇದೆ ಮುಕ್ತ ಅವಕಾಶ...

ಅಲ್ಲಿಂದ ಜಂಭದಹಳ್ಳ, ಅಕ್ವೆಡಕ್ಟ್, ತರೀಕೆರೆ ರೈಲು ಸೇತುವೆ ಬೆಟ್ಟತಾವರೆಕೆರೆ ಪಂಪ್‌ಹೌಸ್‌-2, ಅಜ್ಜಂಪುರ ಸುರಂಗದ ಮಾರ್ಗವಾಗಿ ಹೆಬ್ಬೂರು ಗ್ರಾಮದ ಹತ್ತಿವಿರುವ ವೈ ಜಕ್ಷನ್‌ನಿಂದ ಹಳ್ಳದ ಮುಖಾಂತರ ಕಡೂರು ತಾಲೂಕಿನ ಕುಕ್ಕೆ ಸಮುದ್ರ ಕೆರೆಗೆ ತಲುಪಿ ಅಲ್ಲಿಂದ ವೇದಾವತಿ ನದಿಯ ಮುಖಾಂತರ ವಾಣಿವಿಲಾಸ ಸಾಗರಕ್ಕೆ ನೀರು ಹರಿಸಲಾಗುವುದು ಎಂದು ಭದ್ರಾ ಮೇಲ್ದಂಡೆ ಯೋಜನೆಯ ಕಾರ್ಯಪಾಲಕ ಅಭಿಯಂತರರಾದ ಎಫ್‌.ಎಚ್‌.ಲಮಾಣಿ ಅವರು ತಿಳಿಸಿದ್ದಾರೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಮುಂಜಾಗ್ರತಾ ಕ್ರಮವಾಗಿ ಕಾಲುವೆ, ಹಳ್ಳ ಹಾಗೂ ನದಿ ಪಾತ್ರಗಳಲ್ಲಿ ಸಾರ್ವಜನಿಕರು ತಿರುಗಾಡುವುದು, ಜನ-ಜಾನುವಾರುಗಳನ್ನು ಕಾಲುವೆ ಒಳಗಡೆ ಬಿಡುವುದು ಹಾಗೂ ಇತರೆ ದೈನಂದಿನ ಚಟುವಟಿಕೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಅನಧಿಕೃತವಾಗಿ ಪಂಪ್‌ಸೆಟ್‌ಗಳನ್ನು ಅಳವಡಿಸಿ ನೀರು ಎತ್ತುವುದು ನೀರಾವರಿ ಕಾಯ್ದೆಯ ವಿವಿಧ ನಿಯಮಗಳ ಪ್ರಕಾರ ಕಾನೂನು ಬಾಹಿರವಾಗುತ್ತದೆ ಎಂದು ತಿಳಿಸಿದ್ದಾರೆ.