ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಶೌಚಾಲಯಕ್ಕೆ ಬೀಗ
KSRTC ಬಸ್ ನಿಲ್ದಾಣದ ಶೌಚಾಲಯವನ್ನು ಪೌರಾಯುಕ್ತರು ಮುಚ್ಚಿದ್ದಾರೆ. ಕಾರಣ ನೈರ್ಮಲ್ಯದ ಕೊರೆತ. ಸ್ವಚ್ಛತೆ ಇಲ್ಲದ ಹಿನ್ನೆಲೆ ಇಲ್ಲಿಗೆ ಆಗಮಿಸುವ ಪ್ರಯಾಣಿಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದು ಈ ನಿಟ್ಟಿನ್ನಿ ಬೀಗ್ ಹಾಕಲಾಗಿದೆ.
ಭದ್ರಾವತಿ [ಜ.04]: ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿರುವ ಶೌಚಾಲಯ ದುರ್ವಾಸನೆಯಿಂದ ಕೂಡಿದ್ದು, ಇದರಿಂದ ಪ್ರಯಾಣಿಕರು ಹಾಗೂ ನಿಲ್ದಾಣಕ್ಕೆ ಬರುವವರು ತೊಂದರೆ ಅನುಭವಿಸುವಂತಾಗಿದೆ. ಸೂಕ್ತ ಕ್ರಮ ಕೈಗೊಳ್ಳುವಂತೆ ನಗರಸಭೆಗೆ ದೂರು ಬಂದ ಹಿನ್ನಲೆಯಲ್ಲಿ ಪೌರಾಯುಕ್ತ ಮನೋಹರ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಳೆದ 5-6 ತಿಂಗಳಿನಿಂದ ಬಸ್ ನಿಲ್ದಾಣದಲ್ಲಿ ಶೌಚಾಲಯ ಸ್ವಚ್ಛತೆ ಇಲ್ಲದೆ ದುರ್ವಾಸನೆ ಬೀರುತ್ತಿದೆ. ನಿಲ್ದಾಣದ ಹಿಂಭಾಗದಲ್ಲಿರುವ ಭದ್ರಾನದಿಗೆ ಶೌಚಾಲಯದ ಕೊಳವೆ ನೀರು ಸೇರ್ಪಡೆಗೊಳ್ಳುತ್ತಿದ್ದು, ಇದರಿಂದ ನದಿ ನೀರು ಮಲಿನಗೊಳ್ಳುತ್ತಿದೆ. ಸುತ್ತಮುತ್ತಲ ಪರಿಸರ ಹಾಳಾಗುತ್ತಿದೆ ಎಂದು ನಿಲ್ದಾಣದ ಸರ್ ಎಂ. ವಿಶ್ವೇಶ್ವರಾಯ ಆಟೋ ಚಾಲಕರ ಸಂಘದ ಆಟೋ ಚಾಲಕರು ಪೌರಾಯುಕ್ತರಿಗೆ ದೂರಿದರು. ಅಲ್ಲದೆ ಈ ಸಂಬಂಧ ನಿಲ್ದಾಣದ ವ್ಯವಸ್ಥಾಪಕರಿಗೆ ಹಲವರು ಬಾರಿ ಮನವಿ ಮಾಡಲಾಗಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ದೂರಿದರು.
ಜ.8ರಂದು ಬಂದ್ ಆಗಲಿದೆ ಕರ್ನಾಟಕ ? ಏನಾಗಲಿದೆ ಎಫೆಕ್ಟ್...
ದೂರು ಆಲಿಸಿದ ಪೌರಾಯುಕ್ತ ಮನೋಹರ್, ಶೌಚಾಲಯದಿಂದ ಉಂಟಾಗುತ್ತಿರುವ ಸಮಸ್ಯೆ ಬಗೆಹರಿಯುವವರೆಗೂ ಶೌಚಾಲಯ ಬಳಸದಂತೆ ಬೀಗ ಜಡಿದರು. ತಾತ್ಕಾಲಿಕವಾಗಿ ನಿಲ್ದಾಣದಲ್ಲಿ ಸಂಚಾರಿ ಶೌಚಾಲಯದ ಸೌಲಭ್ಯ ಕಲ್ಪಿಸಲಾಗುವುದು. ಈ ಹಿಂದೆಯೇ ನಿಲ್ದಾಣದ ಸಂಬಂಧಿಸಿದ ಅಧಿಕಾರಿಗಳಿಗೆ ಸ್ವಚ್ಛತೆ ಕಾಪಾಡುವುದರ ಜೊತೆಗೆ ದುರ್ವಾಸನೆ ಬಾರದ ರೀತಿಯಲ್ಲಿ ಸೆಪ್ಟಿಕ್ ಟ್ಯಾಂಕ್ ನಿರ್ಮಾಣ ಮಾಡಿ ಸ್ವಚ್ಛತೆ ಕಾಪಾಡುವಂತೆ ಸೂಚಿಸಿದರು.
ಮತ್ತೆ ಕಾಣಿಸಿಕೊಂಡಿದೆ ಮಹಾಮಾರಿ ಮಂಗನ ಕಾಯಿಲೆ : ಎಚ್ಚರ!...
ಈ ಕುರಿತು ಘಟಕದ ಮೇಲಾಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಕೂಡಲೇ ಸರಿಪಡಿಸುವಂತೆ ತಿಳಿಸಲಾಗಿದೆ. ಅಧಿಕಾರಿಗಳು ಇನ್ನೊಂದು ವಾರದೊಳಗೆ ಕ್ರಮ ಕೈಗೊಳ್ಳದಿದ್ದಲ್ಲಿ ಪರಿಸರ ಇಲಾಖೆಗೆ ಮಾಹಿತಿ ರವಾನಿಸಿ ನಗರಸಭೆಯಿಂದ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳುವ ಕ್ರಮಕ್ಕೆ ಮುಂದಾಗುವುದಾಗಿ ಎಚ್ಚರಿಸಿದರು.