Asianet Suvarna News Asianet Suvarna News

ಬೀದರ್‌ ಜಿಲ್ಲೆಗೆ ಅನು​ದಾನ ಕೊಡಿ: ಕೇಂದ್ರ ಸಚಿವರಿಗೆ ಖೂಬಾ ಮನವಿ

ಬೀದರ್‌ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಈ ಎಲ್ಲಾ ಕಾಮಗಾರಿಗಳಿಗೆ ಅನುದಾನ ಬಿಡುಗಡೆಗೊಳಿಸಲು ರಾಜ್ಯದ ಮುಖ್ಯಮಂತ್ರಿ ಸಮ್ಮುಖದಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್‌ ಶೇಖಾವತ್‌ಗೆ ಮನವಿ ಮಾಡಿದ ಕೇಂದ್ರ ಸಚಿವ ಭಗವಂತ ಖೂಬಾ 

Bhagwanth Khuba Request to Union Minister Gajendra Singh Shekhawat for Give Grant to Bidar grg
Author
First Published Dec 2, 2022, 2:15 PM IST

ಬೀದರ್‌(ಡಿ.02): ಜಿಲ್ಲೆಯಲ್ಲಿ ಕೆರೆಗಳ ನಿರ್ಮಾಣ, ಬಂದಾರಾ, ಬ್ರೀಡ್ಜ್‌ ಕಂ ಬ್ಯಾರೇಜ್‌ಗಳ ನಿರ್ಮಾಣಕ್ಕಾಗಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯ ಸರ್ಫೆಸ್‌ ಮೈನರ್‌ ಇರಿಗೇಷನ್‌ ಅಡಿಯಲ್ಲಿ ಬೀದರ್‌ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಈ ಎಲ್ಲಾ ಕಾಮಗಾರಿಗಳಿಗೆ ಅನುದಾನ ಬಿಡುಗಡೆಗೊಳಿಸಲು ಕೇಂದ್ರ ಸಚಿವ ಭಗವಂತ ಖೂಬಾ ಅವರು ರಾಜ್ಯದ ಮುಖ್ಯಮಂತ್ರಿ ಸಮ್ಮುಖದಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್‌ ಶೇಖಾವತ್‌ಗೆ ಮನವಿ ಮಾಡಿಕೊಂಡರು.

ಈ ಕುರಿತು ಬುಧವಾರ ನವದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿ, ರಾಜ್ಯದ ನೀರಾವರಿ ವಿಷಯಗಳ ಕುರಿತು ಚರ್ಚಿಸಿ ಜಿಲ್ಲೆಯಲ್ಲಿ ರು. 114.61 ಕೋಟಿಯ ಒಟ್ಟು 50 ಕಾಮಗಾರಿಗಳ ಡಿಪಿಆರ್‌ ಮತ್ತು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯ ಆರ್‌ಆರ್‌ಆರ್‌. (ರಿಪೇರ್‌, ರಿಸ್ಟೋರ್‌ ಮತ್ತು ರೆಜುವಿನೇಟ್‌) ಅಡಿಯಲ್ಲಿ ರು. 114 ಕೋಟಿಯ ಒಟ್ಟು 73 ಕಾಮಗಾರಿಗಳ ಡಿಪಿಆರ್‌ ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ಸಲ್ಲಿಕೆಯಾಗಿರುತ್ತದೆ. ಕೂಡಲೆ ನಮ್ಮ ಜಿಲ್ಲೆಯ ಕಾಮಗಾರಿಗಳಿಗೆ ಪ್ರಾತಿನಿಧ್ಯ ನೀಡಿ, ಈ ಎಲ್ಲಾ ಕಾಮಗಾರಿಗಳಿಗೆ ಅನುದಾನ ಬಿಡುಗಡೆಗೊಳಿಸಬೇಕೆಂದು ಮನವಿ ಮಾಡಿದರು.

ಬೀದರ್ ಶಾಸಕ ರಹೀಂ ಖಾನ್‌ಗೆ ಗ್ರಾಮಸ್ಥರಿಂದ ಫುಲ್ ಕ್ಲಾಸ್

ಬೀದರ ಕ್ಷೇತ್ರವು ಕೃಷಿ ಪ್ರಧಾನವಾದ ಕ್ಷೇತ್ರವಾಗಿದ್ದು, ನಮ್ಮಲ್ಲಿ ಶೇ 60ಕ್ಕಿಂತ ಹೆಚ್ಚು ಜನ ಕೃಷಿಯನ್ನೆ ಅವಲಂಬಿಸಿದ್ದಾರೆ. ಈ ಕಾಮಗಾರಿಗಳ ಪ್ರಾರಂಭದಿಂದ ಬೀದರ ಕ್ಷೇತ್ರದ ನೀರಾವರಿಗೆ ಅನುಕೂಲವಾಗಲಿದೆ ಹಾಗೂ ರೈತರಿಗೆ ಸಹಾಯವಾಗಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಇದಕ್ಕೆ ಜಲಸಂಪನ್ಮೂಲ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ.

ನಂತರ ಮುಖ್ಯಮಂತ್ರಿ ಹಾಗೂ ಎಲ್ಲಾ ಸಚಿವರು, ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವರಾದ ನೀತಿನ ಗಡ್ಕರಿ ಅವ​ರ​ನ್ನು ಭೇಟಿ ಮಾಡಿ, ರಾಜ್ಯದಲ್ಲಿ ಉತ್ತಮವಾಗಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿಗಳ ಬಗ್ಗೆ ಸಂತೋಷ ವ್ಯಕ್ತಪಡಿಸಿದರು. ಇನ್ನು ಉಳಿದಿರುವ ಎಲ್ಲಾ ಹೆದ್ದಾರಿಗಳನ್ನು ಸಹ ಮಂಜೂರಾತಿ ಮಾಡಬೇಕೆಂಬ ಕೋರಿಕೆ ಸೇರಿ​ದಂತೆ ಇಲಾಖೆಯ ಹಲವಾರು ವಿಷಯಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಲ್ಹಾದ ಜೋಷಿ, ರಾಜ್ಯದ ಬೃಹತ್‌ ಮತ್ತು ಜಲಸಂಪನ್ಮೂಲ ಸಚಿವ ಗೋವಿಂದ ಎಮ್‌. ಕಾರಜೋಳ, ಕೈಮಗ್ಗ ಮತ್ತು ಜವಳಿ ಇಲಾಖೆ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಪಾಟೀಲ್‌ ಮುನೇನಕೋಪ್ಪ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.
 

Follow Us:
Download App:
  • android
  • ios