Bharat Jodo Yatra: ಸ್ವಾತಂತ್ರ್ಯ ನಂತರ ನಡೆಯುತ್ತಿರುವ ಅತಿ ದೊಡ್ಡ ಪಾದಯಾತ್ರೆ
ಭಾರತ ಐಕ್ಯತಾ ಯಾತ್ರೆ ದೇಶದ 12 ರಾಜ್ಯಗಳ ಮೂಲಕ ಸುಮಾರು 3570 ಕಿ.ಮೀ. ಹಾದು ಹೋಗುತ್ತದೆ. ಸ್ವಾತಂತ್ರ್ಯ ನಂತರದ ಇತಿಹಾಸದಲ್ಲಿ ಅತಿ ದೊಡ್ಡ ಪಾದಯಾತ್ರೆಯಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.
ಶಿರಾ (ಸೆ.19) : ಭಾರತ ಐಕ್ಯತಾ ಯಾತ್ರೆ ದೇಶದ 12 ರಾಜ್ಯಗಳ ಮೂಲಕ ಸುಮಾರು 3570 ಕಿ.ಮೀ. ಹಾದು ಹೋಗುತ್ತದೆ. ರಾಹುಲ್ ಗಾಂಧಿಯವರು ಭಾರತ ಐಕ್ಯತಾ ಯಾತ್ರೆಯಲ್ಲಿ 150 ದಿವಸಗಳು ಸತತವಾಗಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ. ದೇಶದಲ್ಲಿ ಸ್ವಾತಂತ್ರ್ಯ ನಂತರದ ಇತಿಹಾಸದಲ್ಲಿ ಅತಿ ದೊಡ್ಡ ಪಾದಯಾತ್ರೆಯಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.
Bharat Jodo Yatra Strict rules: 4 ಗಂಟೆಗೆ ಏಳ್ಬೇಕು, 5ನೇ ನಿಮಿಷದಲ್ಲಿ ಸ್ನಾನ ಆಗ್ಬೇಕು!
ಭಾರತ ಐಕ್ಯತಾ ಯಾತ್ರೆ(Bharat jodo yatra) ಶಿರಾ ತಾಲೂಕಿನಲ್ಲಿ ಹಾದು ಹೋಗುವ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿ ನಗರದ ಶ್ರೇಯಸ್ ಕಂಫಟ್ಸ್‌ರ್‍ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಭಾರತದಲ್ಲಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದೆ. ಬಡತನ ಸಂಪೂರ್ಣ ನಿವಾರಣೆಯಾಗಿಲ್ಲ, ಯುವಕರಿಗೆ ಉದ್ಯೋಗ ಕೊಡಲು ಸಾಧ್ಯವಾಗಿಲ್ಲ. ಈ ದೇಶದ ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡುವ ಯೋಜನೆಗಳನ್ನು ಸರ್ಕಾರಗಳು ಜಾರಿಗೆ ತರುತ್ತಿವೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಬದಲಾವಣೆ ತರಲು ರಾಹುಲ್ ಗಾಂಧಿಯವರ ಭಾರತ ಐಕ್ಯತಾ ಯಾತ್ರೆಯನ್ನು ಯಶಸ್ವಿಗೊಳಿಸಿ ಎಂದರು.
ಮಾಜಿ ಸಚಿವ ಟಿ.ಬಿ.ಜಯಚಂದ್ರ(T.B.Jayachandra) ಮಾತನಾಡಿ, ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಲು ಒಡೆದು ಹೋಗಿರುವ ಮನಸ್ಸುಗಳನ್ನು ಒಂದು ಮಾಡಬೇಕು ಎಂಬ ಉದ್ದೇಶದಿಂದ ರಾಹುಲ್ ಗಾಂಧಿಯವರು ಹಮ್ಮಿಕೊಂಡಿರುವ ಭಾರತ ಐಕ್ಯತಾ ಯಾತ್ರೆಯಲ್ಲಿ ಶಿರಾ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ಎಂದರು.
ಮತ್ತೆ ಅಸಮಾಧಾನ ಸ್ಫೋಟ: ಭಾರತ್ ಜೋಡೋ ಸಭೆಗೆ ತೆರಳಲು ಸಿದ್ದರಾಮಯ್ಯ ನಿರಾಕರಣೆ
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ.ಷಡಕ್ಷರಿ(K.Shadakshari), ಡಾ.ರಫೀಕ್ ಅಹ್ಮದ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಆರ್.ಮಂಜುನಾಥ್, ನಟರಾಜ್ ಬರಗೂರು, ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾರೋಗೆರೆ ಮಹೇಶ್, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸುನಿಲ್, ರಂಗನಾಥ್, ಕಲ್ಲಿಗಾನಹಟ್ಟಿಶಿವಕುಮಾರ್, ಯಶವಂತ್ ಗೌಡ, ಬಿಲಾಲ್ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.