ಹಣ ದರ್ಬಳಕೆ: ಬಿಡದಿ ಇನ್ಸ್‌ಪೆಕ್ಟರ್ ಶಂಕರ್ ನಾಯಕ್ ಸಸ್ಪೆಂಡ್
ಇನ್ನೊಂದೆಡೆ ಇದೇ ಪ್ರಕರಣದಲ್ಲಿ ಡೀಲ್ ಕುದುರಿಸಲು ಇನ್‌ಸ್ಪೆಕ್ಟರ್ ಮಧ್ಯವರ್ತಿಯಾಗಿದ್ದ ಮಾಗಡಿ ತಾಲೂಕು ಕುದೂರಿನ ಲೋಕನಾಥ್ ಸಿಂಗ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಬೆಳವಣಿಗೆ ಬೆನ್ನಲೆ ಅಮಾನತುಗೊಂಡಿರುವ ಇನ್‌ಸ್ಪೆಕ್ಟರ್‌ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.
ಬೆಂಗಳೂರು(ಡಿ.16): ಸುಳ್ಳು ಕಳ್ಳತನ ಪ್ರಕರಣ ದಾಖಲಿಸಿ ಉದ್ಯಮಿಯೊಬ್ಬರ ಕಾರು ಚಾಲಕನಿಂದ ವಶಪಡಿಸಿಕೊಂಡ ₹72 ಲಕ್ಷವನ್ನು ದುರ್ಬಳಕೆ ಮಾಡಿಕೊಂಡ ಆರೋಪ ಹೊತ್ತಿದ್ದ ರಾಮನಗರ ಜಿಲ್ಲೆ ಬಿಡದಿ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಶಂಕರ್ ನಾಯಕ್ ಅಮಾನತುಗೊಂಡಿದ್ದಾರೆ.
ಇನ್ನೊಂದೆಡೆ ಇದೇ ಪ್ರಕರಣದಲ್ಲಿ ಡೀಲ್ ಕುದುರಿಸಲು ಇನ್‌ಸ್ಪೆಕ್ಟರ್ ಮಧ್ಯವರ್ತಿಯಾಗಿದ್ದ ಮಾಗಡಿ ತಾಲೂಕು ಕುದೂರಿನ ಲೋಕನಾಥ್ ಸಿಂಗ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಬೆಳವಣಿಗೆ ಬೆನ್ನಲೆ ಅಮಾನತುಗೊಂಡಿರುವ ಇನ್‌ಸ್ಪೆಕ್ಟರ್‌ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಕಳೆದ ವರ್ಷ ಬೆಂಗಳೂರಿನ ಬ್ಯಾಟರಾಯನಪುರ ಠಾಣೆಯಲ್ಲಿ ಪಿಐ ಆಗಿದ್ದಾಗ ಶಂಕರ್ ನಾಯಕ ಈ ಕೃತ್ಯ ಎಸಗಿದ್ದರು. ಈ ಬಗ್ಗೆ ಬೆಂಗಳೂರು ನಗರ ಪೊಲೀಸರ ವರದಿ ಆಧರಿಸಿ ಬಿಡದಿ ಠಾಣೆ ಪಿಐ ಶಂಕರ್ ನಾಯಕ್ ಅವರನ್ನು ಕೇಂದ್ರ ವಲಯ ಐಜಿಪಿ ಡಾ। ಬಿ.ಆರ್.ರವಿಕಾಂತೇಗೌಡ ಬುಧವಾರ ಅಮಾನತುಗೊಳಿಸಿದ್ದಾರೆ.
ದಲಿತ ಸಿಎಂಗೆ ಜಾತಿ ವ್ಯವಸ್ಥೆಯೇ ಅಡ್ಡಗಾಲು: ಡಾ.ಪಿ.ಮೂರ್ತಿ ಬೇಸರ
ಏನಿದು ಪ್ರಕರಣ?
2022ರಲ್ಲಿ ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಕಳ್ಳತನ ಪ್ರಕರಣದಲ್ಲಿ ಉದ್ಯಮಿ ಹರೀಶ್ ಎಂಬುವರ ಕಾರು ಚಾಲಕ ಸಂತೋಷ್‌ನನ್ನು ಬಂಧಿಸಿ ₹72 ಲಕ್ಷವನ್ನು ಶಂಕರ್ ನಾಯಕ್ ಜಪ್ತಿ ಮಾಡಿದ್ದರು. ಆದರೆ ಈ ಹಣವನ್ನು ಸರ್ಕಾರದ ಖಜಾನೆ ಅಥವಾ ಠಾಣೆಯ ಸುಪರ್ದಿಗೆ ಕೊಡದೆ ಅವರು ಸ್ವಂತಕ್ಕೆ ಬಳಸಿಕೊಂಡ ಆರೋಪ ಕೇಳಿ ಬಂದಿತ್ತು. ಈ ಹಣ ಸಂಬಂಧ ಹಿರಿಯ ಅಧಿಕಾರಿಗಳು ನೋಟಿಸ್ ನೀಡಿದ ಬಳಿಕ ಚೀಲದಲ್ಲಿ ಹಣವನ್ನು ತುಂಬಿ ಠಾಣೆಗೆ ತಂದಿಟ್ಟು ಶಂಕರ್ ತೆರಳಿದ್ದರು.
ಕನಕಪುರ: ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು, ಆನೆಯನ್ನು ಹೂತು ಹಾಕಿದವನ ಮೇಲೆ ಕೇಸ್
ಕೊನೆಗೆ ಬ್ಯಾಟರಾಯನಪುರ ಠಾಣೆಯಲ್ಲಿ ಶಂಕರ್ ಹಾಗೂ ಅವರ ಮಧ್ಯವರ್ತಿ ಲೋಕನಾಥ್ ವಿರುದ್ಧ ಕೆಂಗೇರಿ ಗೇಟ್ ಉಪ ವಿಭಾಗದ ಎಸಿಪಿ ಭರತ್ ರೆಡ್ಡಿ ದೂರು ಆಧರಿಸಿ ಎಫ್‌ಐಆರ್ ದಾಖಲಾಯಿತು. ಈ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದರು. ಈ ಬಗ್ಗೆ ತನಿಖೆಗಿಳಿದ ಸಿಸಿಬಿ ಪೊಲೀಸರು, ಮಧ್ಯವರ್ತಿ ಲೋಕನಾಥ್ ಸಿಂಗ್‌ನನ್ನು ಬುಧವಾರ ರಾತ್ರಿ ಬಂಧಿಸಿದ್ದಾರೆ.
ರಿಯಲ್ ಎಸ್ಟೇಟ್ ಏಜೆಂಟ್ ಸಿಂಗ್
ಕುದೂರಿನ ಲೋಕನಾಥ್ ಸಿಂಗ್ ರಿಯಲ್ ಎಸ್ಟೇಟ್ ಏಜೆಂಟ್ ಆಗಿದ್ದು, ಹಲವು ವರ್ಷಗಳಿಂದ ಶಂಕರ್ ನಾಯಕ್‌ನ ಅಕ್ರಮ ಚಟುವಟಿಕೆಗಳಿಗೆ ಡೀಲ್ ಮಾಸ್ಟರ್ ಆಗಿದ್ದ ಎಂಬ ಮಾತುಗಳು ಕೇಳಿ ಬಂದಿವೆ. ಈ ಹಿಂದೆ ಕುದೂರು ಹಾಗೂ ತಾವರೆಕೆರೆ ಠಾಣೆಯಲ್ಲಿ ಪಿಎಸ್‌ಐ ಶಂಕರ್ ನಾಯಕ್ ಕರ್ತವ್ಯ ನಿರ್ವಹಿಸಿದ್ದರು. ಆಗ ಶಂಕರ್ ನಾಯಕ್ ಸೂಚನೆ ಮೇರೆಗೆ ಕೆಲವು ಕಾನೂನು ಬಾಹಿರ ಹಣಕಾಸು ವ್ಯವಹಾರದಲ್ಲಿ ಲೋಕನಾಥ್ ಸಿಂಗ್ ಪಾತ್ರವಹಿಸಿದ್ದ ಎನ್ನಲಾಗಿದೆ.