ರೈತರ ವಿರೋಧದ ನಡುವೆಯೂ ಬಿಡದಿ ಟೌನ್‌ಶಿಪ್ ಯೋಜನೆ ಮುಂದುವರಿಸಲು ರಾಜ್ಯ ಸರ್ಕಾರ ಮುಂದಾಗಿರುವುದನ್ನು ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಆರಂಭಿಸಿದ ಯೋಜನೆಯ ಮೇಲೆ ಡಿಸಿಎಂ ಡಿಕೆಶಿಗೆ ಏಕಿಷ್ಟು ಪ್ರೀತಿ, ಇದರ ಹಿಂದೆ ಗುಪ್ತ ಕನಸಿದೆಯೇ? ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.
ಹಾವೇರಿ(ಜು.17): ರೈತರ ವಿರೋಧದ ನಡುವೆಯೂ ಬಿಡದಿ ಟೌನ್‌ಶಿಪ್ ಯೋಜನೆ(Bidadi Township project) ಮುಂದುವರಿಸಲು ರಾಜ್ಯ ಸರ್ಕಾರದ ಆಂತರಿಕ ಕಾರ್ಯಸೂಚಿ ಕಾರಣ. ರೈತರ ಫಲವತ್ತಾದ ಜಮೀನಿನ ಬದಲು ಸರ್ಕಾರದ ಜಮೀನಿನಲ್ಲೇ ಟೌನ್‌ಶಿಪ್ ನಿರ್ಮಿಸಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹೆಚ್‌ಡಿಕೆ ಪ್ರಾರಂಭಿಸಿದ್ದರೆ ಡಿಕೆಶಿಗೆ ಈ ಯೋಜನೆ ಮೇಲೆ ಏಕಿಷ್ಟು ಪ್ರೀತಿ?
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಡದಿ ಟೌನ್‌ಶಿಪ್ ಯೋಜನೆಯನ್ನು ಎಚ್.ಡಿ.ಕುಮಾರಸ್ವಾಮಿ ಪ್ರಾರಂಭಿಸಿದ್ದು, ಆ ನಂತರ ಯಡಿಯೂರಪ್ಪ ಅವರ ಅವಧಿಯಲ್ಲಿ ಈ ಬಗ್ಗೆ ಯಾವುದೇ ಪ್ರಗತಿಯಾಗಿಲ್ಲ ಎಂ ಸಿಎಂ ಡಿ.ಕೆ.ಶಿವಕುಮಾರ್(DK Shivakumar) ಹೇಳಿದ್ದಾರೆ. ಒಂದು ವೇಳೆ ಕುಮಾರಸ್ವಾಮಿ ಅವರು ಇದನ್ನು ಪ್ರಾರಂಭಿಸಿದ್ದರೆ, ಡಿಕೆಶಿಗೆ ಈ ಯೋಜನೆ ಮೇಲೆ ಏಕಿಷ್ಟು ಪ್ರೀತಿ? ಎಂದು ಪ್ರಶ್ನಿಸಿದರು.
ಇದನ್ನೂ ಓದಿ: ಕಲಬುರಗಿ: ಮಳೆಗಾಗಿ ಪ್ರಾರ್ಥಿಸಿ ಮೂರು ದಿನದಲ್ಲಿ ಬರೋಬ್ಬರಿ 45 ಕಿ.ಮೀ ಉರುಳುಸೇವೆ ಮಾಡಿದ ಮಹಿಳೆ!
ಎಲ್ಲದಕ್ಕೂ ಕುಮಾರಸ್ವಾಮಿ ಟೀಕಿಸುವ ಡಿಕೆಶಿ ಇದರಲ್ಲೇಕೆ ಆಸಕ್ತಿ?
ಎಲ್ಲ ವಿಷಯಗಳಲ್ಲೂ ಕುಮಾರಸ್ವಾಮಿ ಅವರನ್ನು ಟೀಕಿಸುವ ಶಿವಕುಮಾರ್, ಈ ಟೌನ್‌ಶಿಪ್ ಯೋಜನೆಯಲ್ಲಿ ಮಾತ್ರ ಅವರನ್ನು ಏಕೆ ಅನುಸರಿಸುತ್ತಿದ್ದಾರೆ. ಟೌನ್‌ಶಿಪ್ ಯೋಜನೆಯಲ್ಲಿ ಡಿಕೆಶಿಗೆ ಹಿತಾಸಕ್ತಿ ಏನಿದೆ? ಈ ಕನಸಿನ ಹಿಂದೆ ಸಿಎಂಗೆ ಮತ್ತೊಂದು ಗುಪ್ತ ಕನಸಿದೆಯೇ? ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.
ಇದನ್ನೂ ಓದಿ: Yettinahole water: 10 ವರ್ಷಗಳ ಬಳಿಕ ಕೊನೆಗೂ ತುಮಕೂರಿಗೆ ಬಂತು ಎತ್ತಿನಹೊಳೆ ನೀರು!


