26ರಿಂದ ಬೆಂಗಳೂರಿನಲ್ಲಿ ಮಹಾ ಧರಣಿ
ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಈ ಹಿಂದಿನ ರಾಜ್ಯ ಸರ್ಕಾರ ತಂದಿದ್ದ ರೈತ ವಿರೋಧಿ ಕಾಯ್ದೆಗಳನ್ನ ರದ್ದುಗೊಳಿಸಿ, ಪರ್ಯಾಯ ಜನಪರ ನೀತಿಗಳನ್ನ ಜಾರಿ ಮಾಡುವಂತೆ ಒತ್ತಾಯಿಸಿ ನವೆಂಬರ್ 26ರಿಂದ 28ರ ವರೆಗೆ ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 72 ಗಂಟೆಗಳ ಮಹಾ ಧರಣಿ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೋರಾಟ ಸಮಿತಿ ಕರ್ನಾಟಕ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.
ಚಿಕ್ಕಬಳ್ಳಾಪುರ : ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಈ ಹಿಂದಿನ ರಾಜ್ಯ ಸರ್ಕಾರ ತಂದಿದ್ದ ರೈತ ವಿರೋಧಿ ಕಾಯ್ದೆಗಳನ್ನ ರದ್ದುಗೊಳಿಸಿ, ಪರ್ಯಾಯ ಜನಪರ ನೀತಿಗಳನ್ನ ಜಾರಿ ಮಾಡುವಂತೆ ಒತ್ತಾಯಿಸಿ ನವೆಂಬರ್ 26ರಿಂದ 28ರ ವರೆಗೆ ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 72 ಗಂಟೆಗಳ ಮಹಾ ಧರಣಿ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೋರಾಟ ಸಮಿತಿ ಕರ್ನಾಟಕ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.
ಶನಿವಾರ ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೆಹಲಿಯಲ್ಲಿ ಸತತ 13 ತಿಂಗಳ ಕಾಲ ರೈತರು ಐತಿಹಾಸಿಕ ಹೋರಾಟ ನಡೆಸಿದ ಪರಿಣಾಮ ಮೋದಿ ಸರ್ಕಾರ ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನ ವಾಪಸ್ ಪಡೆಯಿತು, ಆದರೂ ಕನಿಷ್ಠ ಬೆಂಬಲ ಬೆಲೆ ( ಎಂ ಎಸ್ ಪಿ) ಕಾಯ್ದೆ ಜಾರಿ ವಿದ್ಯುತ್ ತಿದ್ದುಪಡಿ ಮಸೂದೆ ರದ್ದತಿ ಮುಂತಾದ ವಿಷಯಗಳಲ್ಲಿ ರೈತರಿಗೆ ನೀಡಿದ್ದ ಲಿಖಿತ ಭರವಸೆಗಳನ್ನು ಈಡೇರಿಸಿಲ್ಲ. ಅಲ್ಲದೆ ಸಾರ್ವಜನಿಕ ಪಡಿತರ ವ್ಯವಸ್ಥೆಯನ್ನು ದುರ್ಬಲಗೊಳಿಸಲಾಗುತ್ತಿದ್ದು ಇವು ಎಲ್ಲದರ ಪ್ರಣಾಮ ಕೃಷಿ ಆರ್ಥಿಕತೆ ಬಿಕ್ಕಟಿನಲ್ಲಿ ಸಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದರು.
ಆಹಾರ ಭದ್ರತೆ ಖಾತರಿಪಡಿಸಿ
72 ಗಂಟೆಗಳ ಕಾಲ ಮಹಾಧರಣಿಯಲ್ಲಿ ಆಹಾರ ಭದ್ರತೆ ಪೋಷಕಾಂಶ ಸುರಕ್ಷತೆಯನ್ನು ಖಾತರಿಸಿ ಪಡಿಸುವುದು ಸೇರಿದಂತೆ ಸಾರ್ವತ್ರಿಕ ಪಡಿತರ ವ್ಯವಸ್ಥೆ ಜಾರಿಗೊಳಿಸುವುದು, ಜೀವನಾವಶ್ಯಕ ಅಗತ್ಯ ವಸ್ತುಗಳನ್ನ ಸಾರ್ವಜನಿಕ ವಿತರಣಾ ವ್ಯವಸ್ಥೆ ಮೂಲಕ ವಿತರಿಸುವುದು, ನೇರ ನಗದು ವರ್ಗಾವಣೆ ರದ್ದುಪಡಿಸುವುದು ಸೇರಿದಂತೆ ಸುಮಾರು 24 ಬೇಡಿಕೆಗಳನ್ನ ಮುಂದಿಟ್ಟು ರಾಜ್ಯದ ನಾನಾ ಭಾಗಗಳಿಂದ ರಾಜಧಾನಿಗೆ ಹರಿದು ಬರುವ ಮಹಾಜನತೆಯ ಪರವಾಗಿ ಈ ಮಹಾ ಧರಣಿಯನ್ನ ಹಮ್ಮಿಕೊಳ್ಳಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಲಕ್ಷ್ಮಿನಾರಾಯಣರೆಡ್ಡಿ, ವಿಭಾಗೀಯ ಉಪಾಧ್ಯಕ್ಷ ಮಲ್ಲಯ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಜಿಲ್ಲಾ ಉಪಾಧ್ಯಕ್ಷ ಅರುಣ್ ಕುಮಾರ್, ರಾಜ್ಯ ಕಾರ್ಯದರ್ಶಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯದರ್ಶಿ ಬಿ.ಎನ್.ಮುನಿಕೃಷ್ಣಪ್ಪ, ಗೋಪಾಲ್, ಜಿಲ್ಲಾ ಗೌರವಾಧ್ಯಕ್ಷ ಕೋಟೆ ಚನ್ನೇಗೌಡ, ಕೋಲಾರ ಯುವ ಘಟಕ ಅಧ್ಯಕ್ಷ ಮಂಜುನಾಥ್, ಕೋಲಾರ ಜಿಲ್ಲೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷ ರತ್ನಮ್ಮ, ಎಸ್.ಎಂ.ರವಿಪ್ರಕಾಶ್ ಮತ್ತಿತರ ರೈತ ಮುಖಂಡರು ಇದ್ದರು.