ಯಾದಗಿರಿ‌: ಅನ್ನಭಾಗ್ಯ ಅಕ್ಕಿ ಕಳ್ಳತನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!

ಮಣಿಕಂಠ ರಾಠೋಡ್ ಸಹೋದರ ರಾಜು ರಾಠೋಡ್‌ಗೆ ಸೇರಿದ ರೈಸ್ ಮಿಲ್ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಯಾದಗಿರಿ ಜಿಲ್ಲೆಯ ಗುರುಮಠಕಲ್ ನಲ್ಲಿರುವ ಲಕ್ಷ್ಮೀ ವೆಂಕಟೇಶ್ವರ ರೈಸ್ ಮಿಲ್ ನಿಂದ 700 ಕ್ವಿಂಟಾಲ್ ಅಕ್ಕಿ ವಶಪಡಿಸಿಕೊಳ್ಳಲಾಗಿದೆ. 

Big Twist on Annabhagya Rice Theft Case in Yadgir grg

ಯಾದಗಿರಿ(ಡಿ.30):  ಯಾದಗಿರಿ‌ ಜಿಲ್ಲೆಯ ಶಹಾಪುರದಲ್ಲಿ ನಡೆದಿದ್ದ ಅನ್ನಭಾಗ್ಯ ಪಡಿತರ ಅಕ್ಕಿ ಕಳ್ಳತನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರನ ರೈಸ್ ಮಿಲ್ ಮೇಲೆ ಪೋಲಿಸರು ದಾಳಿ ಮಾಡಿದ್ದಾರೆ. ದಾಳಿ ವೇಳೆ ರಾಜು ರಾಠೋಡ್ ರೈಸ್ ಮಿಲ್‌ನಲ್ಲಿ ಬರೋಬ್ಬರಿ 700 ಕ್ವಿಂಟಾಲ್ ಅಕ್ಕಿಯನ್ನ  ಪೋಲಿಸರು ವಶಪಡಿಸಿಕೊಂಡಿದ್ದಾರೆ. 

ಮಣಿಕಂಠ ರಾಠೋಡ್ ಸಹೋದರ ರಾಜು ರಾಠೋಡ್‌ಗೆ ಸೇರಿದ ರೈಸ್ ಮಿಲ್ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಯಾದಗಿರಿ ಜಿಲ್ಲೆಯ ಗುರುಮಠಕಲ್ ನಲ್ಲಿರುವ ಲಕ್ಷ್ಮೀ ವೆಂಕಟೇಶ್ವರ ರೈಸ್ ಮಿಲ್ ನಿಂದ 700 ಕ್ವಿಂಟಾಲ್ ಅಕ್ಕಿ ವಶಪಡಿಸಿಕೊಳ್ಳಲಾಗಿದೆ. 

ಯಾದಗಿರಿ: ರಾಜಕೀಯ ಪ್ರಭಾವದಿಂದ ದಿಕ್ಕುತಪ್ಪುತ್ತಿದೆ ಅಕ್ಕಿ ಅಕ್ರಮ ತನಿಖೆ

ಸುರಪುರ ಡಿವೈಎಸ್ಪಿ ಜಾವೇದ್ ಇನಾಮ್ದಾರ್ ನೇತೃತ್ವದಲ್ಲಿ ದಾಳಿ ನಡೆದಿದೆ. ದಾಳಿ ವೇಳೆ ಪಾಲಿಶ್ ಮಾಡಿದ್ದ 630 ಕ್ವಿಂಟಾಲ್, ಜೊತೆಗೆ ಪಾಲಿಶ್ ಮಾಡಲು ರೆಡಿ ಮಾಡಿಟ್ಟುಕೊಂಡಿದ್ದ 70 ಕ್ವಿಂಟಾಲ್ ಅಕ್ಕಿಯನ್ನ ವಶಪಡಿಸಿಕೊಂಡಿದ್ದಾರೆ. 
ಸದ್ಯ ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳು ರಾಜು ರಾಠೋಡ್‌ಗೆ ಅಕ್ಕಿ ಮಾರಾಟ ಮಾಡಿರೋದಾಗಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ಕಳೆದ 15 ದಿನಗಳಿಂದ ರಾಜು ರಾಠೋಡ್ ತಲೆಮರಿಸಿಕೊಂಡಿದ್ದಾರೆ. ರಾಜು ರಾಠೋಡ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. 

Latest Videos
Follow Us:
Download App:
  • android
  • ios