ರಾಯಚೂರು(ಜೂ.25): ಮಗನನ್ನು ಎಸ್​ಎಸ್​ಎಲ್​ಸಿ ಪರೀಕ್ಷೆ ಕೇಂದ್ರಕ್ಕೆ ಬೈಕ್‌ನಲ್ಲಿ ಕರೆದುಕೊಂಡು ಹೋಗುವ ವೇಳೆ ಬೈಕ್​ ಸ್ಕಿಡ್​ ಆದ ಪರಿಣಾಮ ತಂದೆ ಸಾವು ಸಾವನ್ನಪ್ಪಿದ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಮಿಯ್ಯಾಪುರ ಗ್ರಾಮದ ಬಳಿ ಘಟನೆ ಇಂದು(ಗುರುವಾರ) ನಡೆದಿದೆ.

ನಾಗಾರೆಡ್ಡಿ(53) ಎಂಬುವರೇ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇಂದು ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದೆ. ಹೀಗಾಗಿ ನಾಗಾರೆಡ್ಡಿ ಅವರು ತಮ್ಮ ಮಗನನ್ನ ಬೈಕ್‌ನಲ್ಲಿ ಕರೆದುಕೊಂಡು ಗಬ್ಬೂರು ಪರೀಕ್ಷಾ ಕೇಂದ್ರಕ್ಕೆ ಬಿಡಲು ಹೋಗುತ್ತಿದ್ದರು. 

ಚೀನಾ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಅವಕಾಶ ಕೊಡಿ: ರಕ್ತದಲ್ಲಿ ಪತ್ರ ಬರೆದ ಹೋಮ್ ಗಾರ್ಡ್

ಮಗನನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗುವ ವೇಳೆ ಆಕಳು ಅಡ್ಡ ಬಂಬ ಪರಿಣಾಮ ಬೈಕ್​ ಸ್ಕಿಡ್​ ಆಗಿ ತಂದೆ ನಾಗಾರೆಡ್ಡಿ ತಲೆಗೆ ಗಂಭೀರ ಗಾಯವಾಗಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ವಿದ್ಯಾರ್ಥಿಗೂ ಕೂಡ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಮೃತ ನಾಗಾರೆಡ್ಡಿ ಅವರು ಸುಕೇಶ್ವರಹಾಳ ಗ್ರಾಮದ ಶಾಲೆಯಲ್ಲಿ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ದುರ್ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

"