Asianet Suvarna News Asianet Suvarna News

ಬಿಜೆಪಿ ಸಾಧನೆ ಮನೆ - ಮನಕ್ಕೆ ತಿಳಿಸಿ: ಸಚಿವ

ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ನಡೆಯುತ್ತಿರುವ ಬೂತ್‌ ವಿಜಯ್‌ ಅಭಿಯಾನಕ್ಕೆ ಶಾಸಕ ಮಸಾಲಾ ಜಯರಾಮ್‌ ತಾಲೂಕಿನ ಅರಳೀಕೆರೆ ಗ್ರಾಮದಲ್ಲಿ ಬಿಜೆಪಿ ಧ್ವಜವನ್ನು ಮನೆಯೊಂದರ ಮೇಲೆ ಹಾರಿಸುವ ಮೂಲಕ ಚಾಲನೆ ನೀಡಿದರು.

BJP Achievement House - Tell Mana: Minister snr
Author
First Published Jan 6, 2023, 5:37 AM IST

  ತುರುವೇಕೆರೆ :  ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ನಡೆಯುತ್ತಿರುವ ಬೂತ್‌ ವಿಜಯ್‌ ಅಭಿಯಾನಕ್ಕೆ ಶಾಸಕ ಮಸಾಲಾ ಜಯರಾಮ್‌ ತಾಲೂಕಿನ ಅರಳೀಕೆರೆ ಗ್ರಾಮದಲ್ಲಿ ಬಿಜೆಪಿ ಧ್ವಜವನ್ನು ಮನೆಯೊಂದರ ಮೇಲೆ ಹಾರಿಸುವ ಮೂಲಕ ಚಾಲನೆ ನೀಡಿದರು.

ಬೂತ್‌ ವಿಜಯ್‌ ಅಭಿಯಾನಕ್ಕೆ ಚಾಲನೆ ನೀಡಿದ ಕೇಂದ್ರ ಸಚಿವ ನಾರಾಯಣ ಸ್ವಾಮಿ ಪ್ರತಿ ಬೂತ್‌ನಲ್ಲಿ ಬಿಜೆಪಿಯ ಸದಸ್ಯರ ಸಂಖ್ಯೆ ಹೆಚ್ಚಿದರೆ ಗೆಲುವು ಖಚಿತ. ಪ್ರತಿ ಬೂತ್‌ನ ಪ್ರಮುಖರು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡಿರುವ ಸಾಧನೆಯ ಕುರಿತು ಮನೆ ಮನಕ್ಕೆ ತಲುಪಿಸುವ ಪ್ರಯತ್ನ ಮಾಡಬೇಕು. ಈ ಪ್ರಯತ್ನವನ್ನು ತಮ್ಮ ಪಕ್ಷ ಹಲವು ರಾಜ್ಯಗಳಲ್ಲಿ ಮಾಡಿ ಯಶಸ್ಸುಗಳಿಸಿರುವ ಹಿನ್ನೆಲೆಯಲ್ಲಿ ಈ ಕ್ರಮವನ್ನು ರಾಜ್ಯದಲ್ಲಿ ಪ್ರಯೋಗ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಎಂ.ಡಿ.ಲಕ್ಷ್ಮೇನಾರಾಯಣ್‌ ಬಿಜೆಪಿ ಮುಂಬರುವ ಚುನಾವಣೆಯಲ್ಲಿ ಗೆದ್ದು ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯುವುದು ಶತಃಸ್ಸಿದ್ದ. ಹಾಗೆಯೇ ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲೂ ಬಿಜೆಪಿ ದಿಗ್ವಿಜಯ ಸಾಧಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಶಾಸಕ ಮಸಾಲಾ ಜಯರಾಮ್‌ ಮಾತನಾಡಿ, ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟುಅಭಿವೃದ್ಧಿ ಕಾರ್ಯಗಳು ಆಗಿವೆ. ಇದನ್ನು ಪ್ರತಿ ಮನೆಗೆ ತಿಳಿಸಿ. ತಮಗೆ ಸಿಕ್ಕಿರುವ ಕೇವಲ ಒಂದೆರೆಡು ವರ್ಷಗಳ ಅವಧಿಯಲ್ಲಿ ನಿರೀಕ್ಷೆಗೂ ಮೀರಿ ಅಭಿವೃದ್ಧಿಯನ್ನು ಮಾಡಲಾಗಿದೆ. ಪ್ರತಿಯೊಂದು ಗ್ರಾಮಕ್ಕೂ ಸರ್ಕಾರದ ಸವಲತ್ತನ್ನು ನೀಡಲಾಗಿದೆ. ಹಾಗಾಗಿ ಈ ಬಾರಿ ಜನರು ಬಿಜೆಪಿಯನ್ನು ಗೆಲ್ಲಿಸಿಯೇ ತೀರುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ತಾಲೂಕು ಮಂಡಲ ಅಧ್ಯಕ್ಷ ಕಲ್ಕರೆ ಮೃತ್ಯುಂಜಯ ಮಾತನಾಡಿ ಪ್ರತಿ ಬೂತ್‌ಗಳಲ್ಲಿ ಬಿಜೆಪಿ ಕಾರ್ಯಕರ್ತರು ಬಿಜೆಪಿಯ ಗೆಲುವಿಗೆ ಕಟಿಬದ್ಧರಾಗಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳೇ ಬಿಜೆಪಿ ಗೆಲುವಿಗೆ ಕಾರಣಗಳಾಗಿವೆ. ಪಕ್ಷದ ಕಾರ್ಯಕರ್ತರು ಶಿಸ್ತಿನಿಂದ ಪಕ್ಷವನ್ನು ಬಲಪಡಿಸಬೇಕಾಗಿ ಕಾರ್ಯಕರ್ತರಿಗೆ ಕರೆ ನೀಡಿದರು.

ಪಕ್ಷದ ಕಾರ್ಯದರ್ಶಿಗಳಾದ ಡೊಂಕಿಹಳ್ಳಿ ಪ್ರಕಾಶ್‌, ಬಡಗರಹಳ್ಳಿ ರಾಮೇಗೌಡ, ಎಪಿಎಂಸಿ ಮಾಜಿ ಸದಸ್ಯ ಕೊಂಡಜ್ಜಿ ವಿಶ್ವನಾಥ್‌, ಎಂ.ಡಿ.ಮೂರ್ತಿ, ಮಾದಿಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯರಾದ ಬೊಮ್ಮಲಿಂಗೇಗೌಡ, ಸಂಗಲಾಪುರ ಗಿರೀಶ್‌, ಅನಿತಾ ನಂಜುಂಡಯ್ಯ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

ಕೇಂದ್ರ ಸಚಿವ ನಾರಾಯಣ ಸ್ವಾಮಿಯವರೂ ಸಹ ಬಿಜಿಪಿ ಪಕ್ಷದ ಕಾರ್ಯಕರ್ತರ ಮನೆ ಮೇಲೆ ತೆರಳಿ ಬಿಜೆಪಿಯ ಧ್ವಜವನ್ನು ಹಾರಿಸಿದರು.

ಬೂತ್‌ ಮಟ್ಟದ ಪ್ರಮುಖರೇ ತಮ್ಮ ಶಕ್ತಿ. ಅವರನ್ನು ಪಕ್ಷದ ಅಧ್ಯಕ್ಷರು, ಶಾಸಕರು ಸೇರಿದಂತೆ ಇತರೆ ಮುಖಂಡರು ಅವರ ನಿರ್ದೇಶನದಂತೆ ನಡೆಯಬೇಕು. ಅವರು ಮಾಡುವ ಸಾಧನೆಯೇ ಪಕ್ಷದ ಗೆಲುವಿಗೆ ಸಹಕಾರಿಯಾಗಲಿದೆ. ಜನವರಿ 2 ರಿಂದ 12 ರವರೆಗೆ ಪ್ರತಿ ಬೂತ್‌ನಲ್ಲಿ ಕನಿಷ್ಠ 50 ಮನೆಗಳ ಮೇಲೆ ಬಿಜೆಪಿಯ ಧ್ವಜವನ್ನು ಹಾರಿಸಲೇಬೇಕು. ಇದು ಪಕ್ಷದ ಆದೇಶವಾಗಿದೆ. ಧ್ವಜ ಹಾರಾಡಿದ ಮನೆ ನಮ್ಮ ಪಕ್ಷದ ಆಸ್ತಿ. ಅವರಿಗೆ ತಮ್ಮ ಪಕ್ಷದ ಸಾಧನೆ ಮತ್ತು ಮುಂದೆ ಮಾಡಬಯಸಿರುವ ಸಾಧನೆಗಳ ಬಗ್ಗೆ ವಿವರ ನೀಡಬೇಕು.

ನಾರಾಯಣ ಸ್ವಾಮಿ ಕೇಂದ್ರ ಸಚಿವ

ಸಾಧನೆ ಬಗ್ಗೆ ಮನೆ ಬಾಗಿಲಿಗೆ ತಲುಪಿಸಿ

ಮೂಡಲಗಿ(ಜ.05):  ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಈಗಿನಿಂದಲೇ ಬೂತ್‌ ಮಟ್ಟದಿಂದ ದುಡಿಯುವಂತೆ ಶಾಸಕ ಹಾಗೂ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಅರಬಾವಿ ಮಂಡಲದ ಬೂತ್‌ ವಿಜಯ ಅಭಿಯಾನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಕ್ಷದ ಹಿತದೃಷ್ಟಿಯಿಂದ ಕಾರ್ಯಕರ್ತರು ಒಗ್ಗಟ್ಟಿನ ನಾಮಬಲದೊಂದಿಗೆ ಪಕ್ಷದ ಸಾಧನೆಗಳನ್ನು ಮತದಾರರ ಮನೆ ಬಾಗಿಲಿಗೆ ಮುಟ್ಟಿಸುವ ಕೆಲಸ ಮಾಡುವಂತೆ ಹೇಳಿದರು.

ಬಿಜೆಪಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪ್ರಿಯ ಕಾರ್ಯಕ್ರಮಗಳನ್ನು ಕಾರ್ಯಕರ್ತರು ಪ್ರಚಾರ ಮಾಡಬೇಕು. ಶಿಸ್ತಿನಿಂದ ಬೂತ್‌ ಮಟ್ಟದಿಂದ ಕೆಲಸವನ್ನು ನಿರ್ವಹಿಸಬೇಕು ಎಂದು ತಿಳಿಸಿದರು.

ಕೆಪಿಟಿಸಿಎಲ್‌ ಅಕ್ರಮ: ಮತ್ತೆ ಮೂವರ ಬಂಧನ

ಪ್ರತಿಯೊಂದು ಮತಗಟ್ಟೆಗಳಲ್ಲಿ ವಾಟ್ಸ್‌ಅಪ್‌ ಗುಂಪುಗಳನ್ನು ರಚಿಸಬೇಕು. ಸಾಧ್ಯವಾದಷ್ಟು ಹೆಚ್ಚಿನ ಜನರನ್ನು ಸಾಮಾಜಿಕ ಜಾಲತಾಣಗಳ ಮೂಲಕ ಸಂಪರ್ಕಿಸಲು ಪ್ರಯತ್ನಿಸಬೇಕು. ಈ ಮೂಲಕ ಸರ್ಕಾರದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಬೇಕು. ಅಲ್ಲದೇ, ಚುನಾವಣೆ ತಾಯಾರಿ ಹಿನ್ನೆಲೆಯಲ್ಲಿ ಬಿಜೆಪಿಯ ಎಲ್ಲ ಪೂರ್ವನಿಗದಿತ ಕಾರ್ಯಕ್ರಮಗಳನ್ನು ತಪ್ಪದೇ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು

Follow Us:
Download App:
  • android
  • ios