ಅಥಣಿ(ಡಿ.05): ಬಿಜೆಪಿ ಚಿಹ್ನೆವುಳ್ಳ ಮತದಾರರ ಚೀಟಿಗಳನ್ನು ಬಿಜೆಪಿ ಕಾರ್ಯಕರ್ತರು ಹಂಚುತ್ತಿದ್ದ ಹಿನ್ನೆಲೆಯಲ್ಲಿ ಕೆಲಹೊತ್ತು ಗೊಂದಲದ ವಾತಾವರಣ ನಿರ್ಮಾಣವಾದ ಘಟನೆ ತಾಲೂಕಿನ ದರೂರ ಗ್ರಾಮದಲ್ಲಿ ಇಂದು(ಗುರುವಾರ) ನಡೆದಿದೆ. 

ದರೂರ ಗ್ರಾಮದ ಮತಗಟ್ಟೆ ಹೊರಗೆ ಬಿಜೆಪಿ ಕಾರ್ಯಕರ್ತರು ಕಮಲದ ಚಿಹ್ನೆವುಳ್ಳ ಚೀಟಿ ನೀಡುತ್ತಿದ್ದರು. ಇದನ್ನ ಕಾಂಗ್ರೆಸ್ ಕಾರ್ಯಕರ್ತರು ವಿರೋಧಿಸಿದ್ದಾರೆ. ಮಾತಿಗೆ ಮಾತು ಬೆಳೆದು ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದಿದೆ. ಇದರಿಂದ ಕೆಲ ಸಮಯ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಪರಿಸ್ಥಿತಿ ಕೈಮೀರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಚುನಾವಣಾಧಿಕಾರಿಗಳು ಕಮಲದ ಚಿಹ್ನೆವುಳ್ಳ ಮತದಾರರ ಚೀಟಿಗಳನ್ನು ಜಪ್ತಿ ಮಾಡಿದ್ದಾರೆ. ಬಳಿಕ ಪೊಲೀಸರ ಮಧ್ಯಸ್ಥಿಕೆ ಬಳಿಕ ಪರಿಸ್ಥಿತಿ ತಿಳಿಯಾಗಿದೆ.
ಅಥಣಿ ಮತಕ್ಷೇತ್ರದಲ್ಲಿ ಬಿಜೆಪಿ ಅರ್ಭರ್ಥಿಯಾಗಿ ಮಹೇಶ್ ಕುಮಟಳ್ಳಿ ಹಾಗೂ ಕಾಂಗ್ರೆಸ್ ಅರ್ಭರ್ಥಿಯಾಗಿ ಗಜಾನನ ಮಂಗಸೂಳಿ ಅವರು ಕಣದಲ್ಲಿದ್ದಾರೆ. ಮತದಾರ ಯಾರಿಗೆ ಒಲೊಯಲಿದ್ದಾನೆ ಎಂಬುದನ್ನು ಡಿ. 9 ರ ವರೆಗೆ ಕಾದು ನೋಡಬೇಕಿದೆ. 

ಇಂದು ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, 9ರಂದು ಫಲಿತಾಂಶ ಪ್ರಕಟವಾಗಲಿದೆ.