'ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಬೇಕೆಂದರೆ ಅಭ್ಯರ್ಥಿ ಬದಲಾವಣೆ ಆಗಲೇಬೇಕು'

ಸಿಂದಗಿ ಉಪ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಹೊಸಬರನ್ನು ಆಯ್ಕೆ ಮಾಡಬೇಕಿದೆ| ಅಭ್ಯರ್ಥಿ ಬದಲಾವಣೆಗೆ ಪಟ್ಟು ಹಿಡಿದ ಜನರು| ಕೆಲವು ತಿಂಗಳುಗಳ ಬಳಿಕ ಸಿಂದಗಿ ಉಪ ಚುನಾವಣೆ ಘೋಷಣೆ: ಚಂದ್ರಶೇಖರ ನಾಗೂರ| 

BJP Candidate Must be Change in Sindagi Byelection Says Chandrashekhar Nagur grg

ಸಿಂದಗಿ(ಮೇ.03): ಈಚೆಗೆ ನಡೆದ ಉಪ ಚುನಾವಣೆಯಲ್ಲಿ ಬಸವಕಲ್ಯಾಣದಲ್ಲಿ ಬಿಜೆಪಿಯ ಶರಣು ಸಲಗರ ಮತ್ತು ಬೆಳಗಾವಿಯಲ್ಲಿ ಮಂಗಲ ಅಂಗಡಿ ಆಯ್ಕೆಯಾಗಿರುವುದು ಸಂತಸ ತಂದಿದೆ. ರಾಜ್ಯ ಸರ್ಕಾರದ ಸಾಧನೆ ಮತ್ತು ಪ್ರಗತಿಪರವಾದ ಯೋಜನೆಗಳೇ ಗೆಲುವಿಗೆ ಕಾರಣವಾಗಿದೆ. ಸಿಂದಗಿ ಉಪ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಗೆಲ್ಲಬೇಕಾದಲ್ಲಿ ಅಭ್ಯರ್ಥಿಯ ಬದಲಾವಣೆ ಆಗಲೇಬೇಕು ಎಂದು ಸಿಂದಗಿ ಉಪ ಚುನಾವಣೆಯ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಚಂದ್ರಶೇಖರ ನಾಗೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿಂದಗಿ ಉಪ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಹೊಸಬರನ್ನು ಆಯ್ಕೆ ಮಾಡಬೇಕಿದೆ. ಈ ಬಾರಿ ಜನಗಳು ಅಭ್ಯರ್ಥಿ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ ಎಂದು ಹೇಳಿದ್ದಾರೆ.

ಚುನಾವಣೆ ಘೋಷಣೆಗೂ ಮುನ್ನ ಟಿಕೆಟ್‌: ಕಾಂಗ್ರೆಸ್ಸಿನಲ್ಲಿ ಆಕ್ರೋಶ

ಕೆಲವು ತಿಂಗಳುಗಳ ಬಳಿಕ ಸಿಂದಗಿ ಉಪ ಚುನಾವಣೆ ಘೋಷಣೆಯಾಗಲಿದೆ. ರಾಜ್ಯ ನಾಯಕರು ಬಿಜೆಪಿ ಅಭ್ಯರ್ಥಿಯ ಬದಲಾವಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಚಂದ್ರಶೇಖರ ನಾಗೂರ ಮನವಿ ಮಾಡಿಕೊಂಡಿದ್ದಾರೆ.
 

Latest Videos
Follow Us:
Download App:
  • android
  • ios