ಮದ್ದೂರು(ಝೂ.14): ಮುಂದಿನ ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಮನ್ಮುಲ… ನಿರ್ದೇಶಕ ಎಸ್‌.ಪಿ. ಸ್ವಾಮಿ ಹೇಳಿದರು.

ತಾಲೂಕಿನ ಸೋಮನಹಳ್ಳಿ ಜಿಪಂ ವ್ಯಾಪ್ತಿಯ ಕೆ.ಹೊನ್ನಲಗೆರೆ ಹಾಗೂ ಸೋಮನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕೇಂದ್ರದ ಬಿಜೆಪಿ ಸರ್ಕಾರದ ಎರಡನೇ ಅವಧಿಯ ಮೊದಲ ವರ್ಷದ ಸಾಧನೆಗಳನ್ನು ಜನಸಾಮಾನ್ಯರಿಗೆ ತಿಳಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಮನೆ ಮನೆ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮದುವೆ ಮಾಡದ್ದಕ್ಕೆ ತಂದೆಯನ್ನೇ ಕೊಂದ ಭೂಪ!

ಕಳೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಜಿಲ್ಲೆಯಲ್ಲಿ ಖಾತೆ ತೆರೆದಿದೆ. ಇದರಿಂದ ಪಕ್ಷಕ್ಕೆ ಹೆಚ್ಚಿನ ಬಲ ಬಂದಿದೆ. ಪ್ರಮುಖ ನಾಯಕರು ಬಿಜೆಪಿ ಪರ ಒಲವು ತೋರಿಸಿದ್ದಾರೆ. ಜಿಲ್ಲೆಯಲ್ಲಿ ಇದು ಉತ್ತಮ ಬೆಳವಣಿಗೆಯಾಗಿದೆ. ಮುಂಬರುವ ಜಿಲ್ಲಾ, ತಾಲೂಕು ಹಾಗೂ ಗ್ರಾಪಂ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನನ್ನ ನೇತೃತ್ವದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಅವರ ಗೆಲುವಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.

ದುಬೈನಲ್ಲಿ ಸಿಲುಕಿದ್ದ 184 ಜನರು ಭಟ್ಕಳಕ್ಕೆ ಆಗಮನ

ಈ ವೇಳೆ ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಪಣ್ಣೇದೊಡ್ಡಿ ರಘು, ಅಭಿಯಾನದ ಕಾರ್ಯಕ್ರಮ ಉಸ್ತುವಾರಿ ಸಿ.ಕೆ.ಸ್ವಾಮಿಗೌಡ, ರೈತಮೋರ್ಚಾ ಅಧ್ಯಕ್ಷ ಶಿವದಾಸ್‌ ಸತೀಶ್‌, ಮಹಿಳಾ ಘಟಕದ ಅಧ್ಯಕ್ಷ ತ್ರಿವೇಣಿ, ಎಪಿಎಂಸಿ ಅಧ್ಯಕ್ಷ ಬಿ.ಸಿ.ಮಹೇಂದ್ರ, ಉಪಾಧ್ಯಕ್ಷ ಹೊನ್ನಲಗೆರೆ ಸ್ವಾಮಿ, ಡಿಸಿಸಿ ಬ್ಯಾಂಕ್‌ ಮಾಜಿ ನಿರ್ದೇಶಕ ಎನ್‌.ಆರ್‌. ಪ್ರಕಾಶ್‌, ಸಿಪಾಯಿ ಶ್ರೀನಿವಾಸ್‌, ಗ್ರಾಪಂ ಸದಸ್ಯ ಪ್ರೀತಂ ಇದ್ದರು.