Karnataka MLC Election: ಹೆಚ್ಚು ಸ್ಥಾನ ಗೆಲ್ಲಲು ಬಿಜೆಪಿ ತಂತ್ರ!

*ಪಕ್ಷದ ನಾಯಕರಿಗೆ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ಸಂದೇಶ
*ಪರಿಷತ್‌ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಲು ಸೂಚನೆ‌
*ಸಭೆಯಲ್ಲಿ ಬಿ.ಎಲ್‌.ಸಂತೋಷ್‌ ಸೇರಿದಂತೆ ಹಲವು ಬಿಜೆಪಿ ಮುಖಂಡರು ಭಾಗಿ

BJP conducts meeting ahead of Karnataka Legislative council elections in December 2021 mnj

ಬೆಂಗಳೂರು(ನ.10 ) : ವಿಧಾನಪರಿಷತ್ತಿನ 25 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಪಕ್ಷ ಶ್ರಮಿಸಬೇಕು ಎಂಬ ಸಂದೇಶವನ್ನು ಮಂಗಳವಾರ ನಡೆದ ಆಡಳಿತಾರೂಢ ಬಿಜೆಪಿಯ (Bharatiya Janata Party) ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ನೀಡಲಾಗಿದೆ. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ಮುಖ್ಯ ವಕ್ತಾರ (Spokesperson) ಕ್ಯಾ.ಗಣೇಶ್‌ ಕಾರ್ಣಿಕ್‌(Ganesh Karnik), ಪಕ್ಷವು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಬೇಕಾದ ಎಲ್ಲ ಸಂಘಟನಾತ್ಮಕ ಚಟುವಟಿಕೆಗಳ ಕುರಿತು ಪಕ್ಷದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಚರ್ಚಿಸಲಾಗಿದೆ. ಪರಿಷತ್‌ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲಲು ತಂತ್ರ ರೂಪಿಸಬೇಕು ಎಂಬ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಪರಿಷತ್‌ ಚುನಾವಣೆ ಬಳಿಕ ಬಿಬಿಎಂಪಿ (BBMP) ಚುನಾವಣೆ, ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಗಳು ಬರಲಿವೆ. ಅವುಗಳನ್ನು ಕೂಡ ಸಮರ್ಥವಾಗಿ ಎದುರಿಸಿ ಪಕ್ಷವು ಅತಿಹೆಚ್ಚು ಸ್ಥಾನಗಳನ್ನು ಗೆಲ್ಲುವಂತಾಗಬೇಕು ಎಂಬ ದಿಕ್ಕಿನಲ್ಲಿ ಸಭೆಯಲ್ಲಿ ಚರ್ಚೆ ನಡೆಯಿತು ಎಂದರು.

"

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ!

ಜಗತ್ತಿನಲ್ಲೇ ಅತ್ಯಧಿಕ ಅಂದರೆ, ಸುಮಾರು 107 ಕೋಟಿ ಕೋವಿಡ್‌ ಲಸಿಕೆ (Covid Vaccine) ನೀಡಿದ್ದಕ್ಕಾಗಿ ಹಾಗೂ ಮಾದರಿ ಕೋವಿಡ್‌ ನಿರ್ವಹಣೆಗಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi)  ಅವರಿಗೆ ಸಭೆ ಧನ್ಯವಾದ ಸಮರ್ಪಿಸಿತು. 1950ರ ದಶಕದಿಂದ ಜನಸಂಘದ ಹುಟ್ಟು ಮತ್ತು ಬೆಳವಣಿಗೆಯಲ್ಲಿ ರಾಷ್ಟ್ರಾದ್ಯಂತ ಕೊಡುಗೆ ನೀಡಿದ ಅನೇಕ ಮಹನೀಯರನ್ನು ನೆನಪು ಮಾಡಿ ಅವರ ಸಾಧನೆಯನ್ನು ಮುಂದಿನ ತಲೆಮಾರಿಗೆ ಪರಿಚಯ ಮಾಡುವ ದೃಷ್ಟಿಯಿಂದ ರಾಷ್ಟ್ರ ಮಟ್ಟದ ಕಮಲ ಪುಷ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಅಂಥ ಕಾರ್ಯಕರ್ತರ ಮಾಹಿತಿ ಸಂಗ್ರಹಕ್ಕೆ ತಂಡ ರಚಿಸಲಾಯಿತು ಎಂದು ಕಾರ್ಣಿಕ್‌ ತಿಳಿಸಿದರು

25 ವಿಧಾನ ಪರಿಷತ್‌ ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ (BL Santosh), ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ (Arun Singh), ಸಹ ಉಸ್ತುವಾರಿ ಡಾ.ಅರುಣಾ (, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ…, ರಾಜ್ಯದ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‌ಕುಮಾರ್‌ ಮತ್ತಿತರರು ಸಭೆಯ ನೇತೃತ್ವ ವಹಿಸಿದ್ದರು.

ಸೇವಾ ಹೀ ಸಂಘಟನ್‌ ಕಾರ್ಯಕ್ರಮಗಳ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪ

ಪಕ್ಷದ ರಾಜ್ಯಾಧ್ಯಕ್ಷರು ಸೇರಿದಂತೆ ನಾಲ್ವರು ಹಿರಿಯ ನಾಯಕರ ನೇತೃತ್ವದ ನಾಲ್ಕು ತಂಡಗಳು ಕೈಗೊಳ್ಳಲಿರುವ ಜನಸ್ವರಾಜ್‌ (Jana Swaraj) ಯಾತ್ರೆಯಲ್ಲಿ ಪಕ್ಷದ ಎಲ್ಲರೂ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಪಕ್ಷದ ರಾಜ್ಯಾಧ್ಯಕ್ಷರು ಸೂಚಿಸಿದ್ದಾರೆ. ನಾಮಫಲಕ ಅನಾವರಣ, ಬೂತ್‌ ಮಟ್ಟದ ಆರು ಕಾರ್ಯಕ್ರಮಗಳು, ಸೇವಾ ಹೀ ಸಂಘಟನ್‌ ಕಾರ್ಯಕ್ರಮಗಳ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪವಾಗಿದೆ. ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಪಕ್ಷಕ್ಕಾಗಿ ದುಡಿದ ಎಲ್ಲ ನಾಯಕರು, ಕಾರ್ಯಕರ್ತರಿಗೆ ಹಾಗೂ ಸಚಿವ ಸಂಪುಟದ ಎಲ್ಲ ಸಚಿವರಿಗೆ ಪಕ್ಷ ಆತ್ಮೀಯವಾಗಿ ಧನ್ಯವಾದ ತಿಳಿಸಿತು ಎಂದು ವಿವರಿಸಿದರು.

25 ವಿಧಾನ ಪರಿಷತ್‌ ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆ ಮುಗಿದ ಬೆನ್ನಲ್ಲೇ ಇದೀಗ ಕರ್ನಾಟಕ ರಾಜ್ಯದ ವಿಧಾನ ಪರಿಷತ್‌ ಚುನಾವಣೆಗೆ (Karnataka MLC Election) ದಿನಾಂಕ ಘೋಷಣೆಯಾಗಿದೆ. ರಾಜ್ಯ ಮೇಲ್ಮನೆಯ (Karnataka Legislative Council) 25 ಸ್ಥಾನಗಳಿಗೆ ಮುಂದಿನ ತಿಂಗಳು ಡಿಸೆಂಬರ್ 10ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ (Election Commission) ಪ್ರಕಟಿಸಿದೆ.

Latest Videos
Follow Us:
Download App:
  • android
  • ios