ರೈತ ಸಮುದಾಯಕ್ಕೆ ಬಿಜೆಪಿ ಕೊಡುಗೆ ಅಪಾರ: ಮಂಜುಳಾ

ರೈತರ ಸಮಸ್ಯೆಗೆ ಸ್ಪಂದಿಸಿ, ರೈತ ಪರವಾದ ಹಲವಾರು ಯೋಜನೆಗಳನ್ನು ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಡಬ್ಬಲ್‌ ಎಂಜಿನ್‌ ಸರ್ಕಾರಗಳು ಜಾರಿಗೊಳಿಸಿ ಅಪಾರ ಕೊಡುಗೆಗಳನ್ನು ನೀಡಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷೆ ಹಾಗೂ ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ತಿಳಿಸಿದರು.

BJP govt gives More Important To Farmers snr

 ತುಮಕೂರು (ಡಿ.02):ರೈತರ ಸಮಸ್ಯೆಗೆ ಸ್ಪಂದಿಸಿ, ರೈತ ಪರವಾದ ಹಲವಾರು ಯೋಜನೆಗಳನ್ನು ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಡಬ್ಬಲ್‌ ಎಂಜಿನ್‌ ಸರ್ಕಾರಗಳು ಜಾರಿಗೊಳಿಸಿ ಅಪಾರ ಕೊಡುಗೆಗಳನ್ನು ನೀಡಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷೆ ಹಾಗೂ ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ತಿಳಿಸಿದರು.

ಬಿಜೆಪಿ ತುಮಕೂರು-ಮಧುಗಿರಿ ಸಂಘಟನಾತ್ಮಕ ಜಿಲ್ಲೆಗಳ ಪ್ರಶಿಕ್ಷಣ ವರ್ಗ ಕೊರಟಗೆರೆ ತಾಲೂಕು ಚಿಕ್ಕತೊಟ್ಲುಕೆರೆ ಅಟವಿ ಮಠದಲ್ಲಿ (ಎರಡನೇ ದಿನದ ಸಂಜೆ) ನಡೆದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ರೈತರಿಗೆ ಕೃಷಿ ಆದಾಯ ದ್ವಿಗುಣಗೊಳಿಸಲು ಕ್ರಮ, ನೀರಾವರಿ ಯೋಜನೆಗಳ ಅನುಷ್ಠಾನ, ಸಮರ್ಪಕ ವಿದ್ಯುತ್‌ ಪೂರೈಕೆ, ರಸಗೊಬ್ಬರ ವಿತರಣೆ, ಮಾರುಕಟ್ಟೆಯಲ್ಲಿ ರೈತರು ಬೆಳೆದ ಉತ್ಪನ್ನಗಳಿಗೆ ಬೆಂಬಲ ಬೆಲೆ ಸಿಗುವಂತೆ ಪೋ›ತ್ಸಾಹ, ಪ್ರಧಾನಮಂತ್ರಿ ಕೃಷಿ ಸಮ್ಮಾನ್‌ ಯೋಜನೆ ಸೇರಿದಂತೆ ಸರ್ಕಾರದ ಯೋಜನೆಗಳ ಮನನ ಮಾಡಿಸಿ, ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಮತ ಪರಿವರ್ತಿತವಾಗುವಂತೆ ಕಾರ್ಯನಿರ್ವಹಿಸಲು ಕಾರ್ಯಕರ್ತರಿಗೆ ಕರೆ ನೀಡಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪಿಗೆ ಶ್ರೀಧರ ಮಾತನಾಡಿ, ರಾಜಕೀಯದ ಲಾಭ-ನಷ್ಟಗಳನ್ನು ಬದಿಗೊತ್ತಿ ಬಿಜೆಪಿ ತಾನು ನಂಬಿಕೊಂಡು ಬಂದತಂಹ ವಿಚಾರಧಾರೆಗಳಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ದೇಶದ ಒಟ್ಟಾರೆ ಜನಸಂಖ್ಯೆಯ ಶೇಕಡ 80ರಷ್ಟುರೈತ ಸಮುದಾಯವಿದ್ದು, ರೈತರ ಭಾವನೆಗಳಿಗೆ ಬಿಜೆಪಿ ಹಲವಾರು ಯೋಜನೆಗಳನ್ನು ರೂಪಿಸಿ, ಸ್ಪಂದಿಸುತ್ತಿದೆ. ರೈತ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ರೈತ ಮತದಾರರನ್ನು ತಲುಪುವಂತೆ ಕರೆ ನೀಡಿದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಧುಗಿರಿ ಜಿಲ್ಲಾ ರೈ ಮೋರ್ಚಾ ಅಧ್ಯಕ್ಷ ವಿಶ್ವಾನಾಥ್‌ ಅಪ್ಪಾಜಪ್ಪ ವಹಿಸಿದರು. ಈ ಪ್ರಶಿಕ್ಷಣ ವರ್ಗದ ಸಮಾರೋಪ ಸಮಾರಂಭದಲ್ಲಿ ರಾಜ್ಯ ರೈತ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಸ್ನೇಕ್‌ ನಂದೀಶ್‌, ತುಮಕೂರು ಜಿಲ್ಲಾ ಉಪಾಧ್ಯಕ್ಷ ಹಾಗೂ ರಾಜ್ಯ ವಕ್ತಾರ ಹೆಚ್‌.ಎನ್‌.ಚಂದ್ರಶೇಖರ್‌, ತುಮಕೂರು ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಶಿವಶಂಕಬಾಬು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ತುಮಕೂರು ರೈತ ಮೋರ್ಚಾ ಪ್ರಧಾನಕಾರ್ಯದರ್ಶಿ ರಮೇಶ್‌ ಸ್ವಾಗತಿಸಿದರೆ, ತುಮಕೂರು ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹಾಲೇಗೌಡ ಕಾರ್ಯಕ್ರಮ ನಿರೂಪಿಸಿದರು. ಪಾವಗಡ ಮಂಡಲದ ರೈತ ಮೋರ್ಚಾ ಪ್ರಧಾನಕಾರ್ಯದರ್ಶಿ ಪುರುಷೋತ್ತಮ್‌ ವಂದಿಸಿದರು.

ಕೋಟ್‌.....

ರೈತರ ಹಲವಾರು ಸಮಸ್ಯೆಗಳನ್ನು ವಿಸ್ತೃತವಾಗಿ ಅಭ್ಯಸಿಸಿರುವ ಬಿಜೆಪಿ ರೈತರ ಸಮಸ್ಯೆ ಮತ್ತು ಭಾವನೆಗಳಿಗೆ ಗೌರವಿಸಿ ಹಲವಾರು ಯೋಜನೆಗಳ ಮೂಲಕ ರೈತರಿಗೆ ಸಹಕಾರಿಯಾಗುವ ಕಾರ್ಯಕ್ರಮಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಡುತ್ತಿವೆ. ರೈತ ಮೋರ್ಚಾ ಕಾರ್ಯಕರ್ತರು ರೈತರ ಭಾವನೆಗಳಿಗೆ ಸ್ಪಂದಿಸಿ ಸಮಸ್ಯೆಗಳನ್ನು ಅರಿತು ಸಂಬಂಧಿಸಿದ ಅಧಿಕಾರಿಗಳನ್ನು ಭೇಟಿ ಮಾಡಿ ಬಗೆ ಹರಿಸಲು ಕಾರ್ಯಕರ್ತರು ಶ್ರಮಿಸಬೇಕಿದೆ.

ಎಸ್‌.ಶಿವಪ್ರಸಾದ್‌ ರಾಜ್ಯ ಪ್ರಧಾನ ಕಾರ್ಯದರ್ಶಿ, ಬಿಜೆಪಿ ರೈತಮೋರ್ಚಾ

Latest Videos
Follow Us:
Download App:
  • android
  • ios