ಕಾಂಗ್ರೆಸ್ ಪ್ರಣಾಳಿಕೆ ಟೀಕೆ ಮಾಡುವ ನೈತಿಕತೆ ಬಿಜೆಪಿಗಿಲ್ಲ
ಬಿಜೆಪಿಗೆ ಭಯ ಹತಾಶೆ ಶುರುವಾಗಿದೆ ಆದ್ದರಿಂದ ಕಾಂಗ್ರೆಸ್‌ನ ಪ್ರಣಾಳಿಕೆಯನ್ನು ಟೀಕಿಸುತ್ತಿದೆ. ಕಾಂಗ್ರೆಸ್‌ನ ಪ್ರಣಾಳಿಕೆಯನ್ನು ಟೀಕೆ ಮಾಡುವ ನೈತಿಕತೆ ಬಿಜೆಪಿಗೆ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಹೇಳಿದರು.
ನಂಜನಗೂಡು : ಬಿಜೆಪಿಗೆ ಭಯ ಹತಾಶೆ ಶುರುವಾಗಿದೆ ಆದ್ದರಿಂದ ಕಾಂಗ್ರೆಸ್‌ನ ಪ್ರಣಾಳಿಕೆಯನ್ನು ಟೀಕಿಸುತ್ತಿದೆ. ಕಾಂಗ್ರೆಸ್‌ನ ಪ್ರಣಾಳಿಕೆಯನ್ನು ಟೀಕೆ ಮಾಡುವ ನೈತಿಕತೆ ಬಿಜೆಪಿಗೆ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಹೇಳಿದರು.
ಪಟ್ಟಣದ ನಂದಿ ಕನ್ವೆಷನ್‌ಹಾಲ್‌ನಲ್ಲಿ ಕಾಂಗ್ರೆಸ್‌ನ ಪ್ರಜಾಧ್ವನಿ ಯಾತ್ರೆ ಬೃಹತ್ ಸಮಾವೇಶದ ಅಂಗವಾಗಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಿಜೆಪಿ ಅಧಿಕಾರಕ್ಕೆ ಬಂದರೆ 600 ಭರವಸೆಯನ್ನು ಈಡೇರಿಸುವುದಾಗಿ ಭರವಸೆ ನೀಡಿತ್ತು. ಆದರೆ 60 ಭರವಸೆಯನ್ನೂ ಈಡೇರಿಸಲು ಸಾಧ್ಯವಾಗಿಲ್ಲ. ಆದರೆ ಕಾಂಗ್ರೆಸ್ ಅವಧಿಯಲ್ಲಿ ಕೊಟ್ಟ165 ಭರವಸೆಗಳನ್ನೂ ಈಡೇರಿಸಿದೆ. ಅದನ್ನು ಪಟ್ಟಿಸಮೇತ ಬಿಡುಗಡೆ ಮಾಡುತ್ತೇವೆ. ಬಿಜೆಪಿಯವರಿಗೆ ಈಗ ಭಯ, ಹತಾಶೆಯಿಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರಲ್ಲದೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 200 ಯುನಿಟ್ ವಿದ್ಯುತ್‌ನ್ನು ಉಚಿತವಾಗಿ ಕೊಡುವುದಾಗಿ ಹೇಳಿದ್ದ ಕಾಂಗ್ರೆಸ್ ಪ್ರಣಾಳಿಕೆಯನ್ನು ಇಂಧನ ಸಚಿವ ಸುನಿಲ್‌ಕುಮಾರ್ ಹೇಗೆ ನೀಡಲು ಸಾಧ್ಯ ಎಂದಿದ್ದಾರೆ. ಕಾಂಗ್ರೆಸ್ ಅವಧಿಯಲ್ಲೇ ಕರ್ನಾಟಕ ರಾಜ್ಯ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆಗಳಿಸಿದೆ. ಆದರೂ ಸಹ ಬಿಜೆಪಿ ಅವಧಿಯಲ್ಲಿ ಬಿಲ್ ಕಟ್ಟದ ನೆಪಹೊಡ್ಡಿ ಭಾಗ್ಯಜ್ಯೋತಿ ಮನೆಗಳಿಗೆ ಹಾಡಿಜನರ ಮನೆಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ. ಆದ್ದರಿಂದ ನಮ್ಮ ಪಕ್ಷದ ಪ್ರಾಣಳಿಕೆಯನ್ನು ಟೀಕಿಸುವ ನೈತಿಕತೆ ಇಲ್ಲ ಎಂದು ಅವರು ಕಿಡಿಕಾರಿದರು.
ಜ.26 ರಂದು ಮೈಸೂರಿನ ಜೆಕೆ ಗ್ರೌಂಡ್‌ನಲ್ಲಿ ಕಾಂಗ್ರೆಸ್‌ನ ಪ್ರಜಾಧ್ವನಿ ಯಾತ್ರೆಯ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಪ್ರತಿ ವಿಧಾನಸಭೆಗೆ ಕನಿಷ್ಠ 5 ಸಾವಿರದಂತೆ 11 ಕ್ಷೇತ್ರಗಳಿಂದ 55 ಸಾವಿರಕ್ಕಿಂತ ಹೆಚ್ಚಿನ ಜನರು ಭಾಗವಹಿಸುವ ನಿರೀಕ್ಷೆಯಿದ್ದು. ಈ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಮನವಿ ಮಾಡಿದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ, ಸಮಾವೇಶದಲ್ಲಿ ಭಾಗವಹಿಸಲು ಪ್ರತಿ ಬೂತ್‌ಗೂ ಬಸ್ ವ್ಯವಸ್ಥೆ ಮಾಡಲಾಗಿದ್ದು, 5 ಸಾವಿಕ್ಕಿಂತಲೂ ಹೆಚ್ಚಿನ ಜನರು ಸಮಾವೇಶದಲ್ಲಿ ಭಾಗಿಯಾಗುವುದಾಗಿ ತಿಳಿಸಿದರು.
ಮಾಜಿ ಪುರಸಭಾಧ್ಯಕ್ಷ ಚೆಲುವರಾಜು ಅವರು ಬಿಜೆಪಿ ತೊರೆದು ಮರಳಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು.
ವಿಧಾನಸಭಾ ಉಸ್ತುವಾರಿ ಶ್ರೀಕಂಠು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಂ. ಶಂಕರ್, ಮಹೇಶ್, ಮುಖಂಡರಾದ ಸೋಮೇಶ್, ಜಿಪಂ ಮಾಜಿ ಸದಸ್ಯರಾದ ಕೆ. ಮಾರುತಿ, ಲತಾಸಿದ್ದಶೆಟ್ಟಿ, ಶಶಿರೇಖಾ, ಎಪಿಎಂಸಿ ಮಾಜಿ ಅಧ್ಯಕ್ಷರಾದ ಎಂ.ಮಾದಪ್ಪ, ಮುದ್ದುಮಾದಶೆಟ್ಟಿ, ತಾಪಂ ಮಾಜಿ ಅಧ್ಯಕ್ಷ ನಾಗೇಶ್‌ರಾಜ್, ನಗರಸಭಾ ಸದಸ್ಯರಾದ ಶ್ರೀಕಂಠಸ್ವಾಮಿ, ಎಸ್.ಪಿ. ಮಹೇಶ್, ಗಂಗಾಧರ್, ಪ್ರದೀಪ್, ಗಾಯತ್ರಿ ಇದ್ದರು.
ಯಾತ್ರೆ ನಡುವೆಯೇ ಕಾಂಗ್ರೆಸ್‌ಗೆ ಶಾಕ್
ಪಂಜಾಬ್(ಜ.18): ಕರ್ನಾಟಕ ಸೇರಿದಂತೆ ಮುಂಬರುವ ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೇರಲು ಕಾಂಗ್ರೆಸ್ ಶತಾಯಗತಾಯ ಪ್ರಯತ್ನಿಸುತ್ತಿದೆ. ಇದಕ್ಕಾಗಿ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮಾಡಿದ್ದರೆ, ರಾಜ್ಯ ರಾಜ್ಯದಲ್ಲಿ ಪ್ರದೇಶ ಕಾಂಗ್ರೆಸ್ ಹಲವು ಯಾತ್ರೆಗಳನ್ನು ಹಮ್ಮಿಕೊಂಡಿದೆ. ಇದರ ನಡುವೆ ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆಯಾಗಿದೆ. ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಪಂಜಾಬ್‌ನಲ್ಲಿ ಸಂಚರಿಸುವದಕ್ಕಿಂತ ಮೊದಲೇ ಪಕ್ಷದ ಪ್ರಮುಖ ನಾಯಕ, ಮಾಜಿ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ಬಾರಿ ಪಂಜಾಬ್ ಕಾಂಗ್ರೆಸ್ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಮಹತ್ವದ ಜವಾಬ್ದಾರಿ ವಹಿಸಿದ್ದ ಮನ್‌ಪ್ರೀತ್ ಸಿಂಗ್ ಬಾದಲ್ ಇದೀಗ ಪಕ್ಷ ತೊರೆದು ಬಿಜೆಪಿ ಸೇರಿಕೊಂಡಿದ್ದಾರೆ.
ಕಾಂಗ್ರೆಸ್ ತೊರೆದ ಕಲವೇ ನಿಮಿಷಗಳಲ್ಲಿ ಮನ್‌ಪ್ರೀತ್ ಸಿಂಗ್ ಬಿಜೆಪಿ ಸೇರಿಕೊಂಡಿದ್ದಾರೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯೆಲ್, ಪಂಜಾಬ್ ನಾಯಕನನ್ನು ಪಕ್ಷಕ್ಕೆ ಬರಮಾಡಿಕೊಂಡಿದರು. ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಸಂಬಂಧಿಯಾಗಿರುವ ಮನ್‌ಪ್ರೀತ್ ಸಿಂಗ್ ಬಾದಲ್, 2007-11ರಲ್ಲಿ ಬಿಜೆಪಿ ಅಕಾಲಿದಳ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದರು. ಇನ್ನು 2017ರಿಂದ 2022ರ ವರೆಗಿನ ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದರು.