ಬೆಳಗಾವಿ(ಸೆ.05): ಮಾಜಿ ಸಚಿವ ಡಿ.ಕೆ.ಶಿವಕುಮಾರ ಅವರನ್ನು ಬಂಧಿಸಿ, ಅವರನ್ನು ಹೀರೋ ಮಾಡುವ ಅವಶ್ಯಕತೆ ಬಿಜೆಪಿಗೆ ಇಲ್ಲ ಎಂದು ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕೆಟ್ಟರಾಜಕಾರಣ ಮಾಡಿಲ್ಲ. ಮಾಡುವುದೂ ಇಲ್ಲ. ಇಡಿ ಇಲಾಖೆ ಅಧಿಕಾರಿಗಳು ಶಿವಕುಮಾರ ಅವರನ್ನು ಬಂಧಿಸಿರುವುದು ಸ್ವಾಭಾವಿಕ. ಅದರ ಬಗ್ಗೆ ಪ್ರತಿಕ್ರಿಯೆ ನೀಡುವ ಅಗತ್ಯ ನಮಗಿಲ್ಲ ಎಂದರು.

ಮೂವರು ಉಪಮುಖ್ಯಮಂತ್ರಿ ಹೈಕಮಾಂಡ್ ನಿರ್ಧಾರ:

ಬಿಜೆಪಿ ಸರ್ಕಾರದಲ್ಲಿ ಮೂವರು ಉಪಮುಖ್ಯಮಂತ್ರಿ ಹುದ್ದೆ ನೀಡಿರುವ ವಿಚಾರ ಬಿಜೆಪಿ ಹೈಕಮಾಂಡ್‌ಗೆ ಬಿಟ್ಟಿದ್ದು. ಆದರೆ, ರಾಜಕಾರಣದಲ್ಲಿ ಎಲ್ಲರಿಗೂ ಆಸೆ ಇದ್ದೇ ಇರುತ್ತದೆ. ಹಿರಿಯರು ಇರುತ್ತಾರೆ. ಆಯಾ ಜಿಲ್ಲೆಯ ಪ್ರಾಂತಗಳನ್ನು ನೋಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಎಲ್ಲವನ್ನೂ ಅಳೆದು ತೂಗಿ ಸಚಿವರನ್ನಾಗಿ ನೇಮಕ ಮಾಡಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಡಿಕೆಶಿಯನ್ನು ಹೀರೋ ಮಾಡೋ ಅಥವಾ ಅರೆಸ್ಟ್ ಮಾಡೋ ಹಠ ನಮಗಿಲ್ಲ’

ದಕ್ಷಿಣ ಕನ್ನಡದಲ್ಲಿ ಸಾಕಷ್ಟುಪ್ರಮಾಣದಲ್ಲಿ ಹಾನಿಯಾಗಿದೆ. ಆದರೆ, ಐದು ಎಕರೆ ಹೆಚ್ಚಿನ ಪ್ರಮಾಣದಲ್ಲಿ ಜಮೀನು ಹೊಂದಿದವರಿಗೆ ಪರಿಹಾರ ಸಿಗುವುದು ಕಷ್ಟ. ಕೇಂದ್ರ ಸರ್ಕಾರಕ್ಕೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಅನುದಾನ ನೀಡುವಂತೆ ಒತ್ತಡ ಹೇರಲಾಗುವುದು ಎಂದು ಹೇಳಿದರು.