Asianet Suvarna News Asianet Suvarna News

150 ಸ್ಥಾನ ಗೆಲ್ಲಲು ಬಿಜೆಪಿ ಹೈಕಮಾಂಡ್‌ ಪ್ಲಾನ್‌

ಮುಂದಿನ ಆಸೆಂಬ್ಲಿ ಚುನಾವಣೆಯಲ್ಲಿ ಕರ್ನಾಟಕದಲ್ಲಿ 150ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಹೈಕಮಾಂಡ್‌ ಕಾರ್ಯತಂತ್ರ ರೂಪಿಸಿದೆ ಎಂದು ಮಧುಗಿರಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಕೆ.ಮಂಜುನಾಥ್‌ ತಿಳಿಸಿದರು.

BJP high command plan to win 150 seats snr
Author
First Published Jan 20, 2023, 6:11 AM IST

  ಮಧುಗಿರಿ :  ಮುಂದಿನ ಆಸೆಂಬ್ಲಿ ಚುನಾವಣೆಯಲ್ಲಿ ಕರ್ನಾಟಕದಲ್ಲಿ 150ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಹೈಕಮಾಂಡ್‌ ಕಾರ್ಯತಂತ್ರ ರೂಪಿಸಿದೆ ಎಂದು ಮಧುಗಿರಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಕೆ.ಮಂಜುನಾಥ್‌ ತಿಳಿಸಿದರು.

ಗುರುವಾರ ಇಲ್ಲಿನ ಅಯ್ಯಪ್ಪ ಸ್ವಾಮಿ ದೇಗುಲದ ಬಳಿಯಿರುವ ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಭಾರಿಯ ಚುನಾವಣೆಯನ್ನು ಹೈಕಮಾಂಡ್‌ ಗಂಭೀರವಾಗಿ ಪರಿಗಣಿಸಿದ್ದು ಕರ್ನಾಟಕವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಹಲವಾರು ಕಾರ್ಯತಂತ್ರ ರೂಪಿಸಿದ್ದು, ಈ ಹಿನ್ನಲೆಯಲ್ಲಿ ಜ.21 ರಿಂದ 29ರವರೆಗೆ ಬೂತ್‌ ವಿಜಯ ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

ಜ.29ರಂದು ತುಮಕೂರು ವಿಧಾನ ಸಭಾ ಕ್ಷೇತ್ರದಲ್ಲಿ ಸಿಎಂ ಬಸವರಾಜಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಮಧುಗಿರಿಯಲ್ಲಿ ಮಾಜಿ ಸಿಎಂ ಸದಾನಂದಗೌಡ ಚಾಲನೆ ನೀಡುವರು. ವಿಧಾನ ಪರಿಷತ್‌ ಮಾಜಿ ಸದಸ್ಯ ಶಿವಯೋಗಿಸ್ವಾಮಿ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ಬಿಜೆಪಿಯ ಪದಾಧಿಕಾರಿಗಳು ,ಕಾರ್ಯಕರ್ತರು ಹಾಜರಿದ್ದು ಬೂತ್‌ ಸಂಕಲ್ಪ ಅಭಿಯಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ನೀಡಿದ ಅಭಿವೃದ್ದಿ ಕಾರ್ಯಗಳನ್ನು ಕಾರ್ಯಕರ್ತರು ಮನೆ ಮನೆಗೆ ತಲುಪಿಸಬೇಕು. ಫಲಾನುಭವಿಗಳನ್ನು ಬೇಟಿ ಮಾಡಿ ಬಿಜೆಪಿಗೆ ಮತ ಹಾಕಲು ಎಲ್ಲರೂ ಮನವಿ ಮಾಡಬೇಕು. ಗೋಡೆ ಬರಹದ ಮತ್ತು ಸ್ಟಿಕ್ಕರ್‌ ಮೂಲಕ ಮತದಾರರ ಗಮನ ಸಳೆಯುವುದು ಸದಸ್ಯರ ನೊಂದಣಿ, ಮನ್‌ಕಿ ಬಾತನ್ನು ಜ.29ರಂದು ಎಲ್ಲ ಪದಾಧಿಕಾರಿಗಳು, ಕಾರ್ಯಕರ್ತರು ವೀಕ್ಷಿಸಿ ಇದರ ಬಗ್ಗೆ ಜನತೆಗೆ ಮನವರಿಕೆ ಮಾಡಿ ಕೊಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಈ ಹಿಂದೆ ಒಟ್ಟು 1100 ಬೂತ್‌ಗಳಲ್ಲಿ ವಿಜಯ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಈ ಪೈಕಿ 860 ಬೂತ್‌ಗಳಲ್ಲಿ ಪೂರ್ಣಗೊಂಡಿದೆ ಎಂದರು.

ಸ್ಪೀಕರ್‌ ಕಾಗೇರಿ ಅಭಿನಂದನಾ ಸಮಾರಂಭಕ್ಕೆ ಶಿರಸಿಯಲ್ಲಿ ಸಿದ್ಧತೆ: ಬಿಜೆಪಿಗೆ ತಟ್ಟುತ್ತಾ ಕಪ್ಪುಪಟ್ಟಿ ಪ್ರದರ್ಶನ?

ಗೋಷ್ಠಿಯಲ್ಲಿ ಮಾಜಿ ಶಾಸಕ ಗಂಗಹನುಮಯ್ಯ.ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ, ಪಾವಗಡ ರವಿ, ಜಯಣ್ಣ, ಮಂಡಲ ಅಧ್ಯಕ್ಷ ಪುರವರ ಮೂರ್ತಿ, ಜಿಲ್ಲಾ ಸಂಚಾಲಕ ಮಾರುತಿ ಗಂಗಹನುಮಯ್ಯ, ಮಧುಗಿರಿ ಪ್ರಧಾನ ಕಾರ್ಯದರ್ಶಿ ಸೀತರಾಮು, ಜಿಲ್ಲಾ ಕಚೇರಿ ಕಾರ್ಯದರ್ಶಿ ಸುರೇಶ್‌, ಪದಾಧಿಕಾರಿಗಳಾದ ಕಂಬದರಂಗಯ್ಯ, ನಾಗೇಂದ್ರ, ಅಪ್ಪಜಾಪ್ಪ, ಬಡವನಹಳ್ಳಿ ನಾಗರಾಜಪ್ಪ, ರಮೇಶ್‌ ರವಿ ಮೊದಲಾದವರು ಇದ್ದರು

6 ಕ್ಷೇತ್ರ ಗೆಲ್ಲೋಣ

ಚಿತ್ರದುರ್ಗ (ಜ.14): ಕಾರ್ಯಕರ್ತರಿಗೆ ಮುಜುಗರವಾಗುವ ಯಾವ ಕೆಲಸವನ್ನು ಮಾಡಿಲ್ಲ. ಎದೆಗುಂದದೆ ಪ್ರತಿ ಮನೆ ಮನೆಗೆ ಹೋಗಿ ಧೈರ್ಯವಾಗಿ ಬಿಜೆಪಿಗೆ ಮತ ಕೇಳಿ ಎಂದು ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಕರೆ ನೀಡಿದರು. ಕೆಳಗೋಟೆಯಲ್ಲಿರುವ ಅಂಬಾ ಭವಾನಿ ದೇವಸ್ಥಾನದಲ್ಲಿ ಬಿಜೆಪಿ ನಗರ ಮಂಡಲ ವತಿಯಿಂದ ನಡೆದ ಬೂತ್‌ ವಿಜಯ ಅಭಿಯಾನ ಸಮಾರೋಪ ಸಮಾರಂಭದಲ್ಲಿ ಗುರುವಾರ ಭಾಗವಹಿಸಿ ಮಾತನಾಡಿದ ಅವರು, ಬೂತ್‌ ವಿಜಯ ಅಭಿಯಾನ ಕಾರ್ಯಕ್ರಮ ಅತ್ಯಂತ ಮಹತ್ವವಾದುದು. ಬೇರೆ ಯಾವ ಪಕ್ಷಗಳಲ್ಲಿಯೂ ಇಂತಹ ವ್ಯವಸ್ಥೆಯಿಲ್ಲ. ಶೇ. 51ರಷ್ಟು ಮತಗಳನ್ನು ಪಡೆದರೆ ಅಂತಹ ಬೂತ್‌ ಗೆದ್ದಂತೆ. 

ಕೆಲವು ಬೂತ್‌ಗಳಲ್ಲಿ ಕಳೆದ ಚುನಾವಣೆಯಲ್ಲಿ ಹಿನ್ನೆಡೆ ಯಾಕಾಯಿತು, ನೂನ್ಯತೆಗಳೇನು ಎನ್ನುವುದನ್ನು ತಿಳಿದುಕೊಂಡು ಸರಿಪಡಿಸುವ ಕೆಲಸ ಮಾಡಿಕೊಂಡು ಈ ಬಾರಿಯ ಚುನಾವಣೆಯಲ್ಲಿ ಜಿಲ್ಲೆಯ ಆರು ಕ್ಷೇತ್ರಗಳನ್ನು ಗೆದ್ದುಕೊಳ್ಳೋಣ ಎಂದು ಕಾರ್ಯಕರ್ತರಲ್ಲಿ ಹುರುಪು ಮೂಡಿಸಿದರು. ಚಿತ್ರದುರ್ಗ ನಗರ, ಗ್ರಾಮಾಂತರ ಹಾಗೂ ಚಿತ್ರದುರ್ಗ ವಿಧಾನಸಭಾ ಕ್ಷೇತ್ರಗಳಲ್ಲಿ 287 ಬೂತ್‌ಗಳಿದ್ದು, ಎಲ್ಲಾ ಬೂತ್‌ನಲ್ಲಿಯೂ ವಿಜಯ ಅಭಿಯಾನ ನಡೆದಿದೆ. ಬೂತ್‌ಗಳ ಕಡೆ ಹೆಚ್ಚಿನ ಗಮನ ಕೊಡುವಂತೆ ಪಕ್ಷ ಸೂಚಿಸಿದೆ. ಜ. 21ರಿಂದ ಬೂತ್‌ ವಿಜಯ ಸಂಕಲ್ಪ ಯಾತ್ರೆ ಆರಂಭಗೊಳ್ಳಲಿದೆ. 

ಅಲಯನ್ಸ್ ವಿಶ್ವವಿದ್ಯಾಲಯದಲ್ಲಿ ಸಂಭ್ರಮದ ವಾರ್ಷಿಕ ಘಟಿಕೋತ್ಸವ: ಸಚಿವ ಅಶ್ವಥ್ ಭಾಗಿ

ನಗರದ ಸ್ಲಂಗಳಲ್ಲಿ ಹನ್ನೆರಡು ಸಾವಿರ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ಕೊಡುತ್ತಿದ್ದೇವೆ. ಎಂಟೊಂಬತ್ತು ಲಕ್ಷ ರು. ಗಳನ್ನು ನೀಡಿ ಮನೆಗಳನ್ನು ಕಟ್ಟಿಸಿಕೊಡಲಾಗುವುದು. ಹಾಗಾಗಿ ಕಾರ್ಯಕರ್ತರು ನಿರಾಶರಾಗುವುದು ಬೇಡ. ಮುಂದೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಅವಕಾಶ ಸಿಗುತ್ತದೆ. ಸ್ಥಳೀಯ ಸಂಸ್ಥೆಗಳಲ್ಲಿ ನಾಮನಿರ್ದೇಶನ ಮಾಡಲಾಗುವುದು. ಕಾಂಗ್ರೆಸ್‌ನಲ್ಲಿ ಅನೇಕ ವಂಚನೆಯಾಗಿದೆ. 2013 ರಲ್ಲಿ ಚಿತ್ರದುರ್ಗಕ್ಕೆ ಮಂಜೂರಾದ ಮೆಡಿಕಲ್‌ ಕಾಲೇಜನ್ನು ಬೇರೆಡೆ ವರ್ಗಾಯಿಸಲಾಯಿತು. ಆದರೆ ಈಗಿನ ಸಿಎಂ ಬೊಮ್ಮಾಯಿ ಕಾಲದಲ್ಲಿ ಮೆಡಿಕಲ್‌ ಕಾಲೇಜು ಕಟ್ಟಡ ಆರಂಭಗೊಳ್ಳಲಿದೆ ಎಂದು ಹೇಳಿದರು.

ಬೂತ್‌ ವಿಜಯ ಅಭಿಯಾನದ ಸಂಚಾಲಕ ಮಲ್ಲಿಕಾರ್ಜುನ್‌ ಮಾತನಾಡಿ, ಹತ್ತು ದಿನಗಳ ಕಾಲ ಜಿಲ್ಲೆಯಲ್ಲಿ ಬೂತ್‌ ಅಭಿಯಾನ ನಡೆಯಿತು. ಎಲ್ಲೆಡೆ ಜನರ ಸ್ಪಂದನೆ ಸಿಕ್ಕಿದೆ. ವಿಧಾನಸಭೆ ಚುನಾವಣೆಗೆ ಇದು ದಿಕ್ಸೂಚಿಯಾಗಿದೆ. ಹಿಂದೆ ಮಾಡಿದ ಬೂತ್‌ ಸಮಿತಿಯನ್ನು ಪರಿಶೀಲಿಸಿದ್ದೇವೆ. 45 ಬೂತ್‌ನಲ್ಲಿ ಕಾರ್ಯಕರ್ತರ ಉತ್ಸಾಹವಿದೆ. ಬೂತ್‌ ಮಟ್ಟದಲ್ಲಿ ಸಂಘಟನೆಯಾಗಬೇಕು. ಪೇಜ್‌ ಪ್ರಮುಖ್‌, ಮನ್‌ಕಿಬಾತ್‌ ಲಿಂಕ್‌ ಮಾಡಿ ಪ್ರತಿ ಮನೆ ಮನೆಗೆ ಧ್ವಜಗಳನ್ನು ಕಟ್ಟಲಾಗಿದೆ. ಚಿತ್ರದುರ್ಗ ನಗರ ಸೇರಿದಂತೆ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರು ಉತ್ತಮ ಗುಣಮಟ್ಟದ ರಸ್ತೆ, ನೀರು, ಬೀದಿ ದೀಪದ ವ್ಯವಸ್ಥೆ ಕಲ್ಪಿಸಿದ್ದಾರೆ.

Follow Us:
Download App:
  • android
  • ios