Asianet Suvarna News Asianet Suvarna News

ಕಾರ್ಯಕರ್ತರನ್ನು ನಾಯಕರನ್ನಾಗಿಸುವ ಪಕ್ಷ ಬಿಜೆಪಿ : ಡಾ. ಚಂದ್ರು ಲಮಾ​ಣಿ

ಬಿಜೆಪಿಯಲ್ಲಿ ಮಾತ್ರ ಕಾರ್ಯಕರ್ತರನ್ನು ನಾಯಕರನ್ನಾಗಿ ಮಾಡಲಾಗುತ್ತದೆ. ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದೆ. ಇಲ್ಲಿ ವ್ಯಕ್ತಿಗಿಂತ ಪಕ್ಷವೇ ಮುಖ್ಯ. ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಪಕ್ಷದಲ್ಲಿ ಕಾರ್ಯಕರ್ತರಿಗಿರುವ ಗೌರವ ಯಾವ ಪಕ್ಷದಲ್ಲೂ ಇಲ್ಲ ಎಂದು ಬಿಜೆಪಿ ಯುವ ಮುಖಂಡ ಡಾ. ಚಂದ್ರು ಲಮಾಣಿ ಹೇಳಿದರು.

BJP is a party that makes workers leaders snr
Author
First Published Jan 6, 2023, 5:33 AM IST

  ಶಿರಹಟ್ಟಿ (  ಜ . 06 ) :  ಬಿಜೆಪಿಯಲ್ಲಿ ಮಾತ್ರ ಕಾರ್ಯಕರ್ತರನ್ನು ನಾಯಕರನ್ನಾಗಿ ಮಾಡಲಾಗುತ್ತದೆ. ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದೆ. ಇಲ್ಲಿ ವ್ಯಕ್ತಿಗಿಂತ ಪಕ್ಷವೇ ಮುಖ್ಯ. ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಪಕ್ಷದಲ್ಲಿ ಕಾರ್ಯಕರ್ತರಿಗಿರುವ ಗೌರವ ಯಾವ ಪಕ್ಷದಲ್ಲೂ ಇಲ್ಲ ಎಂದು ಬಿಜೆಪಿ ಯುವ ಮುಖಂಡ ಡಾ. ಚಂದ್ರು ಲಮಾಣಿ ಹೇಳಿದರು.

ತಾಲೂಕಿನ ಮಾಚೇನಹಳ್ಳಿ ಗ್ರಾಮದಲ್ಲಿ ಗುರು​ವಾ​ರ ಹಮ್ಮಿಕೊಂಡಿದ್ದ ಬೂತ್‌ ವಿಜಯ್‌ ಅಭಿಯಾನ ಸಭೆಯಲ್ಲಿ ಕಾರ್ಯಕರ್ತರಿಗೆ ಪಕ್ಷದ ಧ್ವಜ ನೀಡಿ ಅವರು ಮಾತನಾಡಿದರು. ಕಾರ್ಯಕರ್ತರು ಪಕ್ಷದಲ್ಲಿ ಸಂಘಟನಾನ್ಮಕವಾಗಿ ದುಡಿದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವಂತೆ ಸಲಹೆ ನೀಡಿದರು.

ಬಿಜೆಪಿ ವಿಶ್ವದಲ್ಲಿಯೇ ಅತೀ ಹೆಚ್ಚು ಸದಸ್ಯರನ್ನು ಹೊಂದಿರುವ ದೊಡ್ಡ ಪಕ್ಷವಾಗಿದೆ. ಈ ಪಕ್ಷವು ಇತರ ಪಕ್ಷಗಳಿಗಿಂತ ಭಿನ್ನವಾಗಿದ್ದು, ಕಾರ್ಯಕರ್ತರಿಗೆ ಮನ್ನಣೆ ನೀಡುವ ಏಕೈಕ ಪಕ್ಷವಾಗಿದೆ. ಬಿಜೆಪಿ ತತ್ವಾಧಾರಿತ ಪಕ್ಷವಾಗಿದೆ. ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಿಂದ ಭಾರತವು ವಿಶ್ವದಲ್ಲಿಯೇ ಬಲಶಾಲಿ ರಾಷ್ಟವಾಗಿದೆ ಎಂದರು.

ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಎದೆಗುಂದದೆ ಸಕ್ರಿಯವಾಗಿ ಪಕ್ಷ ಕಟ್ಟುವ ಕೆಲಸದಲ್ಲಿ ತೊಡಗಿಕೊಳ್ಳಬೇಕು. ದೇಶವಾಸಿಗಳ ಪರವಾಗಿರುವ ಪ್ರಧಾನಿ ಮೋದಿ ಹಾಗೂ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಜನಪರ ಕಾರ್ಯಕ್ರಮಗಳಿಂದಾಗಿ ದೇಶದ ಜನರು ಬಹುಪಾಲು ಬಿಜೆಪಿ ಪರವಾಗಿದ್ದಾರೆ. ಹಾಗಾಗಿಯೇ ಸ್ಥಳೀಯ ಚುನಾವಣೆಯಿಂದ ಸಂಸತ್‌ ಚುನಾವಣೆ ವರೆಗೂ ಬಿಜೆಪಿ ಗೆಲವು ಸಾಧಿಸುತ್ತಿದೆ ಎಂದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನದಲ್ಲಿ ಗೆಲ್ಲುವ ವಿಶ್ವಾಸವಿದೆ. ಈಗಾಗಲೇ ಉತ್ತಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಹಾಗೂ ಅವರನ್ನು ಗೆಲ್ಲಿಸಲು ತಂತ್ರ ರೂಪಿಸಲಾಗುತ್ತಿದೆ. ಆಡಳಿತಾರೂಢ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಡಿರುವ ಜನಪರ ಕಾರ್ಯಗಳೆ ಬಿಜೆಪಿ ಗೆಲುವಿಗೆ ಸಹಕಾರಿಯಾಗಲಿವೆ. ಪಕ್ಷದ ಅಭಿವೃದ್ಧಿ ಕಾರ್ಯಗಳೆ ನಮಗೆ ಬೆನ್ನೆಲುಬಾಗಲಿವೆ. ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಗ್ರಾಮೀಣ ಜನರಲ್ಲಿ ಅರಿವು ಮೂಡಿಸಿ ಪಕ್ಷವನ್ನು ಪ್ರತಿ ಬೂತ್‌ ಮಟ್ಟದಿಂದ ಸಂಘಟಿಸಿ ಬೂತ್‌ ಅಭಿಯಾನವನ್ನು ಯಶಸ್ವಿಯಾಗಿಸೋಣ ಎಂದು ಕರೆ ನೀಡಿದರು.

ಬೆಳ್ಳಟ್ಟಿಮಹಾಶಕ್ತಿ ಕೇಂದ್ರ ಅಧ್ಯಕ್ಷ ಶಂಕರ್‌ ಮರಾಠೆ ಮಾತನಾಡಿ, ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಭೂತ ಪೂರ್ವ ಗೆಲುವು ದೊರೆಯಲಿದೆ. ಪಕ್ಷದ ವರಿಷ್ಠರು ಈ ಬಾರಿ ಗೆಲ್ಲುವ ಅಭ್ಯರ್ಥಿಯನ್ನೇ ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದ್ದು, ಶಿರಹಟ್ಟಿವಿಧಾನಸಭಾ ಮತಕ್ಷೇತ್ರದ ಅಭ್ಯರ್ಥಿಯ ಜಯದೊಂದಿಗೆ ಪಕ್ಷ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ವರವಿ, ಕುಸಲಾಪುರ, ಮಾಚೇನಹಳ್ಳಿ, ಹಡಗಲಿ, ನವೇ ಭಾವನೂರ, ತೆಗ್ಗಿನ ಭಾವನೂರ ಗ್ರಾಮಗಳಲ್ಲಿ ಬೂತ್‌ ವಿಜಯ್‌ ಅಭಿಯಾನ ಕಾರ್ಯಕ್ರಮ ನಡೆಸಲಾಯಿತು.

ಮುಂಡರಗಿ ಮಂಡಲದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಪವಿತ್ರಾ ಕಲ್ಲಕುಟ್ಟಿಗಾರ್‌, ನವೀನ್‌ ಬೆಳ್ಳಟ್ಟಿ, ರಾಘು ಪಾಟೀಲ, ಗ್ರಾಪಂ ಸದಸ್ಯ ಹೊನಕೇರೆಪ್ಪ ಸಂಶಿ, ಉಮೇಶ ತಳವಾರ ಸೇರಿ ಅನೇಕರು ಇದ್ದರು.

Follow Us:
Download App:
  • android
  • ios