Asianet Suvarna News Asianet Suvarna News

ಮೋದಿ ಸರ್ಕಾರದ ಮೇಲೆ ಗೂಬೆ ಕೂಡಿಸುವ ಕೆಲಸ ಮಾಡುತ್ತಿರುವ ಸಿದ್ದರಾಮಯ್ಯ: ಲಿಂಬಾವಳಿ ಆಕ್ರೋಶ

ಇದುವರೆಗೆ ರಾಜ್ಯದ ಬರಪರಿಸ್ಥಿತಿಯ ಅಂಕಿ-ಸಂಖ್ಯೆ ನೀಡದೆ ಕೇಂದ್ರ ಸರ್ಕಾರ ರಾಜ್ಯದ ಮನವಿಗೆ ಸ್ಪಂದಿಸುತ್ತಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ ಎಂದ ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ 

BJP Leader Arvind Limbavali Slams CM Siddaramaiah grg
Author
First Published Nov 21, 2023, 3:00 AM IST

ರಾಮದುರ್ಗ(ನ.21):  ರಾಜ್ಯದಲ್ಲಿನ ಭೀಕರ ಬರ ಎದುರಿಸುವಲ್ಲಿ ವಿಫಲವಾಗಿರುವ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರ ಹಣ ನೀಡುತ್ತಿಲ್ಲ ಎಂದು ಮೋದಿ ಸರ್ಕಾರದ ಮೇಲೆ ಗೂಬೆ ಕೂಡಿಸುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಅರವಿಂದ ಲಿಂಬಾವಳಿ ಆಕ್ರೋಶ ವ್ಯಕ್ತಪಡಿಸಿದರು.

ಸೋಮವಾರ ತಾಲೂಕಿನ ಮುಳ್ಳೂರ ಗ್ರಾಮದಲ್ಲಿ ಬರ ಅಧ್ಯಯನ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದುವರೆಗೆ ರಾಜ್ಯದ ಬರಪರಿಸ್ಥಿತಿಯ ಅಂಕಿ-ಸಂಖ್ಯೆ ನೀಡದೆ ಕೇಂದ್ರ ಸರ್ಕಾರ ರಾಜ್ಯದ ಮನವಿಗೆ ಸ್ಪಂದಿಸುತ್ತಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ ಎಂದರು.

ಸುಳ್ಳುಸುದ್ದಿ, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾವಹಿಸಲು ಸಚಿವ ಪರಮೇಶ್ವರ್ ಸೂಚನೆ

ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ರೈತರ ಜಮೀನಿಗೆ ತೆರಳಿ ಬರದ ಗಂಭೀರತೆ ಅರಿತುಕೊಂಡಿಲ್ಲ. ಅಧಿಕಾರಿಗಳು ಮಾತ್ರ ಬರ ಎದುರಿಸಲು ಹಣದ ಕೊರತೆಯಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ, ಇದುವರೆಗೆ ಎಲ್ಲಿಯೂ ಒಂದು ಪೈಸೆ ಖರ್ಚು ಮಾಡಿದ ಉದಾರಹಣೆ ಇಲ್ಲ ಎಂದು ಕಿಡಿಕಾರಿದರು. ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಬರಗಾಲದ ಭೀಕರತೆ ಕುರಿತು ಪ್ರಸ್ತಾಪಿಸಿ ರೈತರಿಗೆ ಪರಿಹಾರ ಕೊಡಿಸಲು ಬಿಜೆಪಿ ಹೋರಾಟ ಮಾಡಲಿದೆ ಎಂದರು.

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯರು ಪ್ರಧಾನಿಯವರನ್ನು ಭೇಟಿಯಾಗಿ ರಾಜ್ಯದ ಸ್ಥಿತಿಗತಿ ತಿಳಿಸಿಲ್ಲ. ಸೌಜನ್ಯಕ್ಕೂ ರಾಜ್ಯಕ್ಕೆ ಅನುದಾನ ನೀಡಬೇಕು ಎಂದು ಮಾತನಾಡಿಲ್ಲ. ಕೇವಲ ರಾಜ್ಯದ ಸಂಸದರು ಮೋದಿಯವರ ಮೇಲೆ ಒತ್ತಡ ತಂದು ಪರಿಹಾರ ಕೊಡಿಸಿ ಮತ್ತು ಕೇಂದ್ರ ಸರ್ಕಾರ ರಾಜ್ಯಕ್ಕೆ ಎನ್‌ಡಿಆರ್‌ಎಫ್‌ನಡಿ ಅನುದಾನ ನೀಡುತ್ತಿಲ್ಲವೆಂದು ಆರೋಪಿಸುತ್ತಿದ್ದಾರೆ. ಕೇಂದ್ರ ಬರ ಪರಿಹಾರ ನಿಧಿ ಬಿಡುಗಡೆಗೆ ನಿಯಮಗಳಿವೆ. ಸರಿಯಾದ ಮಾಹಿತಿ ನೀಡಿಲ್ಲ. ರಾಜ್ಯ ಸರ್ಕಾರ ಬರ ಪೀಡಿತ ತಾಲೂಕು ಘೋಷಿಸಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಬೇಕು. ಮಾಹಿತಿ ನೀಡದೇ ಪರಿಹಾರ ಹಣ ಹೇಗೆ ಬಿಡುಗಡೆಯಾಗುತ್ತದೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಎರಡು ನೂರಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಬಗ್ಗೆ ಕಾಳಜಿ ಇಲ್ಲದ ಸರ್ಕಾರ ತಮ್ಮ ಪ್ರತಿನಿಧಿಗಳನ್ನು ಕಳಿಸಿ ಸಮಾಧಾನ ಪಡಿಸಲು ಸಹ ಮುಂಗಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಪಂಪ್‌ಸೆಟ್‌ಗಳಿಗೆ ಹೆಸರಿಗೆ ಮಾತ್ರ 7 ಗಂಟೆ ವಿದ್ಯುತ್ ನೀಡುತ್ತೇವೆ ಎಂದು ಹೇಳುತ್ತಾರೆ. ಆದರೆ, ಮೂರು ಗಂಟೆ ಮಾತ್ರ ಅದು ರಾತ್ರಿ ಹೊತ್ತಿನಲ್ಲಿ ವಿದ್ಯುತ್ ಪೂರೈಕೆಯಾಗುತ್ತಿದೆ. ಇದರಿಂದ ರೈತರು ಕಷ್ಟದಲ್ಲಿದ್ದಾರೆ ಎಂದು ತಿಳಿಸಿದರು. ಬಿಜೆಪಿ ಬರ ಅಧ್ಯಯನ ತಂಡದಲ್ಲಿ ವಿಪ ಸದಸ್ಯ ಹನಮಂತ ನಿರಾಣಿ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಪಿ.ಎಫ್. ಪಾಟೀಲ, ಬಸವರಾಜ ಸೋಮಗೊಂಡ, ಬಿ.ಎಫ್. ಬಸಿಡೋಣಿ, ರಾಜೇಶ ಬೀಳಗಿ ಸೇರಿದಂತೆ ಅನೇಕರು ಇದ್ದರು.

ಲೋಕಸಭೆಯ 28 ಸ್ಥಾನಗಳಲ್ಲೂ ಕಾಂಗ್ರೆಸ್‌ ಗೆಲುವಿಗೆ ಶ್ರಮಿಸಿ: ಶಾಸಕ ರಾಜು ಕಾಗೆ

ಇದುವರೆಗೆ ರಾಜ್ಯದ ಬರಪರಿಸ್ಥಿತಿಯ ಅಂಕಿ-ಸಂಖ್ಯೆ ನೀಡದೆ, ಕೇಂದ್ರ ಸರ್ಕಾರ ರಾಜ್ಯದ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರ ಹಣ ನೀಡುತ್ತಿಲ್ಲ ಎಂದು ಮೋದಿ ಸರ್ಕಾರದ ಮೇಲೆ ಗೂಬೆ ಕೂಡಿಸುವ ಕೆಲಸ ಕಾಂಗ್ರೆಸ್‌ ಮಾಡುತ್ತಿದೆ ಎಂದು ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ. 

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಎರಡು ನೂರಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಬಗ್ಗೆ ಕಾಳಜಿ ಇಲ್ಲದ ಸರ್ಕಾರ ತಮ್ಮ ಪ್ರತಿನಿಧಿಗಳನ್ನು ಕಳಿಸಿ ಸಮಾಧಾನ ಪಡಿಸಲು ಸಹ ಮುಂಗಾಗುತ್ತಿಲ್ಲ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ.  

Follow Us:
Download App:
  • android
  • ios