ದೊಷಮುಕ್ತರಾದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

  • ನಗರದಲ್ಲಿ 2014ರ ಮೇ 26ರಂದು ನಡೆದಿದ್ದ ಕೋಮು ಗಲಭೆ ಪ್ರಕರಣ
  •  ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿ ಎಲ್ಲ ಆರೋಪಿಗಳನ್ನು ದೋಷ ಮುಕ್ತ
BJP Leader  Basanagowda patil yatnal is now  allegation Free snr

ವಿಜಯಪುರ (ಸೆ.30): ನಗರದಲ್ಲಿ 2014ರ ಮೇ 26ರಂದು ನಡೆದಿದ್ದ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ (Basanagouda patil yatnal) ಸೇರಿ ಎಲ್ಲ ಆರೋಪಿಗಳನ್ನು ದೋಷ ಮುಕ್ತಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ನೀಡಿದೆ. 

2014ರ ಮೇಲೆ 26ರಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸಮಯದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ವಿಜಯಪುರದ (Vijayapura) ಸಿದ್ದೇಶ್ವರ ದೇವಸ್ಥಾನದಿಂದ ನಗರದ ಪ್ರಮುಖ ಬೀದಿಗಳಲ್ಲಿ ವಿಜಯೋತ್ಸವ ಮೆರವಣಿಗೆ ಏರ್ಪಡಿಸಿದ್ದರು. 

ಮಾಜಿ ಸಿಎಂಗಳಿಂದ ಪಂಚಮಸಾಲಿಗೆ ಅನ್ಯಾಯ: ಸ್ವಪಕ್ಷದವರ ವಿರುದ್ಧ ಗುಡುಗಿದ ಯತ್ನಾಳ್‌

ಈ ಮೆರವಣಿಗೆ ಗಾಂಧಿ ವೃತ್ತ ತಲುಪುತ್ತಿದ್ದಂತೆಯೇ ಕಲ್ಲು ತೂರಾಟ, ಗಲಾಟೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎರಡು ಕೋಮುಗಳ ಹಲವಾರು ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ವಿಡಿಯೋ ಕಾನ್ಫರೆನ್ಸ್‌ ಮೂಲಕ ಕೋರ್ಟ್‌ ತನ್ನ ತೀರ್ಪು ಪ್ರಕಟಿಸಿದೆ.

ಭರವಸೆ ಸಿಕ್ಕರೆ ಹೋರಾಟ ಮುಂದಕ್ಕೆ

ಸರ್ಕಾರದಿಂದ ಪಂಚಮಸಾಲಿ (Panchamasali) 2ಎ ಮೀಸಲಾತಿ ಭರವಸೆ ಸಿಕ್ಕಲ್ಲಿ ಹೋರಾಟ ಮುಂದೆ ಹಾಕುತ್ತೇವೆ ಎಂದು ಹೋರಾಟದ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ್‌ (Basanagouda patil yatnal ) ಹೇಳಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅಕ್ಟೋಬರ್‌ ಒಂದರಂದು ನಡೆಯಲಿರುವ ಹೋರಾಟದ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, ಪಂಚಮಸಾಲಿ ಪಂಚಾಯತ್‌ ನಂತರ ಅ.1ಕ್ಕೆ ಬೆಂಗಳೂರಿನಲ್ಲಿ(Bengaluru) ಹೋರಾಟ ನಡೆಯಲಿದೆ. 

ಮೊದಲ ಬಾರಿಗೆ ಯಡಿಯೂರಪ್ಪಗೆ ಜೈ ಎಂದ ಯತ್ನಾಳ್‌..!

ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ನಡೆಯುವ ಹೋರಾಟಕ್ಕೆ ಈಗಾಗಲೇ ಉತ್ತಮ ಸ್ಪಂದನೆ ಸಿಕ್ಕಿದೆ. ಆದರೆ ಭರವಸೆ ಸಿಕ್ಕಲ್ಲಿ ಹೋರಾಟ ಮುಂದೂಡಲಾಗುವುದು. ನಾವು ಒಂದನೇ ತಾರೀಕು ಹೋರಾಟ ಮಾಡ್ತೀವಿ ಅಂತ ಹಟ ಹಿಡಿದಿಲ್ಲ. ಕಾಲಮಿತಿಯಲ್ಲಿ ಕೆಲಸ ಆಗುವುದಿಲ್ಲ ಎನ್ನುವುದು ಗೊತ್ತಿದೆ. ಸಿ.ಸಿ. ಪಾಟೀಲ, ಮುಖ್ಯಮಂತ್ರಿ ಮೇಲೆ ವಿಶ್ವಾಸವಿದೆ ಎಂದರು.

Latest Videos
Follow Us:
Download App:
  • android
  • ios