Asianet Suvarna News Asianet Suvarna News

‘ಇಬ್ಬರು ಪಕ್ಷೇತರರು, ರೆಬಲ್ ಕಾಂಗ್ರೆಸಿಗರ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚನೆ’

ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಕರ್ನಾಟಕದ ದೋಸ್ತಿ ಸರಕಾರದ ಭವಿಷ್ಯವನ್ನು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಈಶ್ವರಪ್ಪ ನುಡಿದಿರುವ ಭವಿಷ್ಯ ರಾಜ್ಯ ರಾಜಕಾರಣದ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂಬುದನ್ನು ಕಾದು ನೋಡಬೇಕು.

BJP Leader KS Eshwarappa Slams Karnataka Congress Shivamogga
Author
Bengaluru, First Published May 3, 2019, 5:40 PM IST

ಶಿವಮೊಗ್ಗ [ಮೇ. 02]  ಮೇ 23 ರಂದು ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, ಅದಾದ ನಂತರ  ಕರ್ನಾಟಕ ರಾಜಕೀಯದಲ್ಲಿ ದೊಡ್ಡ ರಾಜಕೀಯ ಸ್ಫೋಟವಾಗಲಿದೆ ಎಂದು  ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದರು.  ಇನ್ನು ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಎರಡು ಸ್ಥಾನಗಳಲ್ಲಿ ಜಯಗಳಿಸಿ, ತನ್ನ ಬಲ ಹೆಚ್ಚಿಸಿಕೊಳ್ಳಲಿದೆ. 

104 ಸ್ಥಾನಗಳ ಜೊತೆಗೆ ಇಬ್ಬರು ಪಕ್ಷೇತರ ಅಭ್ಯರ್ಥಿಗಳ ಬೆಂಬಲ ದೊರೆಯಲಿದೆ.  ಇದರಿಂದ ಬಿಜೆಪಿ ಬಲ 108ಕ್ಕೆ ಏರಲಿದೆ. ಉಳಿದಿರುವ ಐದಾರು ಸ್ಥಾನಗಳಿಗೆ  ಕಾಂಗ್ರೆಸ್ ಜೊತೆಗೆ ಮುಂದುವರಿಯಲ್ಲ ಎಂದಿರುವ  ರಮೇಶ್ ಜಾರಕಿಹೊಳಿ ಮತ್ತು ಟೀಂ ಜೊತೆ ಸೇರಿ ಸರ್ಕಾರ ರಚನೆ ಮಾಡಲಾಗುವುದು ಎಂದರು. 

 

ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಭಿನ್ನಮತ ಇರುವ ಕಾರಣ, ಬಿಜೆಪಿ ಏಕಶಿಲೆಯಂತೆ ಗಟ್ಟಿಯಾಗಿ ನಿಂತಿರುವ ಕಾರಣ  ಸರ್ಕಾರ ರಚನೆ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ.  

ಇದೇ ಮೇ 5 ರಂದು ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ 268 ಬೂತ್ ಪದಾಧಿಕಾರಿಗಳ ಸಮಾವೇಶ ನಡೆಸಿ ಶಕ್ತಿ ಪ್ರದರ್ಶನ ನಡೆಸಲಿದೆ  ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ ಉಮೇಶ್ ಜಾಧವ್ ರವರ ವೈಯಕ್ತಿಕ ವರ್ಚಸ್ಸು ಹಾಗೂ ಬಿಜೆಪಿ ಶಕ್ತಿ ಒಗ್ಗೂಡಿ ಬಿಜೆಪಿ ಗೆಲುವು ಸಾಧಿಸಲಿದೆ.   ಚಿಂಚೋಳಿಯಲ್ಲಿ ಕಾಂಗ್ರೆಸ್ ಗೆ ಅಭ್ಯರ್ಥಿಗಳು ಸಿಗದೆ ಕೊನೆ ಕ್ಷಣದಲ್ಲಿ ಬಿಜೆಪಿ ಕಾರ್ಯಕರ್ತನನ್ನೆ ಕಣಕ್ಕಿಳಿಸಿದೆ ಎಂದು   ಆರೋಪಸಿದರು.

Follow Us:
Download App:
  • android
  • ios