ಬೆಂಗಳೂರಿನ ಐತಿಹಾಸಿಕ ಕೆರೆಗಳನ್ನು ಸಂಪೂರ್ಣವಾಗಿ ಕಬಳಿಸಿ ಅಕ್ರಮ ಬಡಾವಣೆಗಳನ್ನು ನಿರ್ಮಿಸಿದ್ದರೂ ಸಹ ಯಾವುದೇ ಕ್ರಮ ಕೈಗೊಳ್ಳದ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ತಕ್ಷಣ ಕೆರೆಗಳ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಬೇಕು ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಅಧ್ಯಕ್ಷ ಎನ್‌.ಆರ್‌.ರಮೇಶ್‌ ಆಗ್ರಹಿಸಿದ್ದಾರೆ.

ಬೆಂಗಳೂರು (ನ.15): ನಗರದ ಹತ್ತಾರು ಐತಿಹಾಸಿಕ ಕೆರೆಗಳನ್ನು ಸಂಪೂರ್ಣವಾಗಿ ಕಬಳಿಸಿ ಅಕ್ರಮ ಬಡಾವಣೆಗಳನ್ನು ನಿರ್ಮಿಸಿದ್ದರೂ ಸಹ ಯಾವುದೇ ಕ್ರಮ ಕೈಗೊಳ್ಳದ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ತಕ್ಷಣ ಕೆರೆಗಳ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಬೇಕು ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಅಧ್ಯಕ್ಷ ಎನ್‌.ಆರ್‌.ರಮೇಶ್‌ ಆಗ್ರಹಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಸಿಂಗಾಪುರ ಕೆರೆ, ಅಬ್ಬಿಗೆರೆ ಕೆರೆ, ಚಿಕ್ಕಬಾಣಾವರ ಕೆರೆ ಮತ್ತು ಹೆಬ್ಬಾಳ ಕೆರೆ ಸೇರಿದಂತೆ ಹಲವು ಐತಿಹಾಸಿಕ ಕೆರೆಗಳನ್ನು ಭೂ ಕಬಳಿಕೆದಾರರು ತಮಗಿರುವ ರಾಜಕೀಯ ಮತ್ತು ಹಣದ ಪ್ರಭಾವಗಳಿಂದ ಕಬಳಿಸಿರುವ ದಾಖಲೆಗಳು ನಮ್ಮ ಮುಂದೆಯೇ ಅತ್ಯಂತ ಸ್ಪಷ್ಟವಾಗಿದ್ದರೂ ಸಹ ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಅಧಿಕಾರಿಗಳು, ಬಿಬಿಎಂಪಿ ಮತ್ತು ಬಿಡಿಎ ಕೆರೆಗಳ ವಿಭಾಗದ ಅಧಿಕಾರಿಗಳು ಎಲ್ಲಾ ಮಾಹಿತಿಗಳನ್ನು ದುರುದ್ದೇಶ ಪೂರ್ವಕವಾಗಿಯೇ ಶಾಸಕ ಎ.ಟಿ.ರಾಮಸ್ವಾಮಿ ಸಮಿತಿ ಮತ್ತು ಮಾಜಿ ಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಸಮಿತಿಯ ಸದಸ್ಯರ ಗಮನಕ್ಕೆ ಬಾರದಂತೆ ಮುಚ್ಚಿ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ 66.18 ಎಕರೆಗಳಷ್ಟುವಿಸ್ತೀರ್ಣದ ಸಿಂಗಾಪುರ ಕೆರೆ ಸಂಪೂರ್ಣವಾಗಿ ಭೂಗಳ್ಳರಿಂದ ಕಬಳಿಸಲ್ಪಟ್ಟು, ಅಕ್ರಮ ಬಡಾವಣೆಗಳು ನಿರ್ಮಾಣಗೊಂಡಿವೆ. ಸಿಂಗಾಪುರ ಕೆರೆಯನ್ನು 1528ರಲ್ಲಿ ನಾಲಪ್ಪ ನಾಯಕ ನಿರ್ಮಿಸಿರುವ ಬಗ್ಗೆ ಸ್ಥಳದಲ್ಲಿಯೇ ಇರುವ ಶಾಸನವು ಇಂದಿಗೂ ಸಾರಿ ಹೇಳುತ್ತದೆ. ಅಬ್ಬಿಗೆರೆ ಕರೆಯು 75 ಎಕರೆಗಳಿಗೂ ಹೆಚ್ಚು ವಿಸ್ತೀರ್ಣ ಇದ್ದು, ಸಂಪೂರ್ಣ ಕೆರೆಯು ಒತ್ತುವರಿಯಾಗಿ ವಿನಾಯಕ ನಗರ ಎಂಬ ಬಡಾವಣೆ ತಲೆ ಎತ್ತಿದೆ. ಚಿಕ್ಕಬಾಣಾವರ ಕೆರೆಯು ಸುಮಾರು 170 ಎಕರೆಗಳಷ್ಟುವಿಸ್ತೀರ್ಣವಿದ್ದು, ಅದರೆ ಪೈಕಿ ಈಗಾಗಲೇ 20 ಎಕರೆಗಳಿಗೂ ಹೆಚ್ಚು ಕೆರೆ ಪ್ರದೇಶವನ್ನು ಸರ್ಕಾರಿ ನೆಲಗಳ್ಳರು ಕಬಳಿಸಿ ಅಕ್ರಮ ಬಡಾವಣೆಗಳನ್ನು ನಿರ್ಮಿಸಿದ್ದಾರೆ ಎಂದಿದ್ದಾರೆ.

ಕುಡಿವ ನೀರಿನ ಯೋಜನೆ ಬಿಜೆಪಿ ಕೊಡುಗೆ
ಜಗಳೂರು: ಕ್ಷೇತ್ರದ 57 ಕೆರೆಗಳಿಗೆ ನೀರು ತುಂಬಿಸುವ ಭದ್ರಾಮೇಲ್ದಂಡೆ ಯೋಜನೆ, ಸಂತೆಮುದ್ದಾಪುರ ಗ್ರಾಮ ವ್ಯಾಪ್ತಿಯ ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ 164 ಗ್ರಾಮಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ನೀಡಿದ ಕೀರ್ತಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಶಾಸಕ ಎಸ್‌.ವಿ.ರಾಮಚಂದ್ರ ಹೇಳಿದರು.

ಪಟ್ಟಣದ ವಾಲ್ಮೀಕಿ ಭವನದಲ್ಲಿ ನ.22ರಂದು ನಡೆಯುವ ಬಿಜೆಪಿ ಜನಸಂಕಲ್ಪ ಯಾತ್ರೆ ಅಂಗವಾಗಿ ತಾಲೂಕು ಬಿಜೆಪಿ ಘಟಕ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಕ್ಷೇತ್ರಕ್ಕೆ ಸಿರಿಗೆರೆ ಶ್ರೀಗಳ ಶ್ರಮದಿಂದ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸೇರಿ ಮೂರು ಮಹತ್ವದ ಯೋಜನೆಗಳ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿಯವರಿಗೆ ಬಿಜೆಪಿ ಜನ ಸಂಕಲ್ಪ ಯಾತ್ರೆಯಲ್ಲಿ ಕ್ಷೇತ್ರದ ಜನರ ಪರವಾಗಿ ಅದ್ಧೂರಿಯಾಗಿ ಬರಮಾಡಿ ಕೃತಜ್ಞತೆ ಸಲ್ಲಿಸೋಣ. ಜನ ಸಂಕಲ್ಪಯಾತ್ರೆ ಮುಂಬರುವ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಹೇಳಿದರು.

ಜೋಂಡು ಸೂಪ್ಪಿನ ತೋಟವಾದ ಕೋಲಾರಮ್ಮನ ಕೆರೆ!

ಹರಪನಹಳ್ಳಿಯ 60 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಲ್ಲಿ 6 ಕೆರೆ ಮತ್ತು ಕ್ಷೇತ್ರದಿಂದ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಡಿ 6 ಕೆರೆಗೆ ಸೇರಿದಂತೆ ಒಟ್ಟು 12 ಕೆರೆಗಳಿಗೆ ಅರಸೀಕೆರೆ ಭಾಗದ ನೀರು ಬರಲಿವೆ. ಡಿಸೆಂಬರ್‌ ವೇಳೆಗೆ ಅರಸೀಕೆರೆ ವ್ಯಾಪ್ತಿಯ ಉಚ್ಚಿಂಗಿದುರ್ಗದಲ್ಲಿ ದೊಡ್ಡ ಸಮಾರಂಭ ಆಯೋಜಿಸಲಾಗುವುದು.

Chamarajanagar: ಕೆರೆಗೆ ನೀರು ತುಂಬಿಸುವ ಯೋಜನೆಗೆ ಸಚಿವ ಸೋಮಣ್ಣ ಸೂಚನೆ

ಬಿಜೆಪಿ ಮಂಡಲ ಅಧ್ಯಕ್ಷ ಎಚ್‌.ಸಿ.ಮಹೇಶ್‌ ಮಾತನಾಡಿ, ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಾ ಆಕಾಂಕ್ಷಿಗಳು ಕ್ಷೇತ್ರದಲ್ಲಿ ಬೇರೊಬ್ಬರಿಲ್ಲ ಗಾಳಿ ಸುದ್ದಿಗಳ ನಂಬದೇ ಎಸ್‌.ವಿ.ರಾಮಚಂದ್ರ ಗೆಲುವಿಗೆ ಪ್ರತಿಯೊಬ್ಬರೂ ಶ್ರಮಿಸಿ ಎಂದರು.