ಮೋದಿ ಆಡಳಿತದಿಂದ ಅಭಿವೃದ್ಧಿಗೆ ಮುನ್ನುಡಿ| ಹಾವೇರಿ ಜಿಲ್ಲೆ ಮೋಟೆಬೆನ್ನೂರಲ್ಲಿ ಮೋದಿ ಸಾಧನೆಗಳ ಕುರಿತು ಸಾರ್ವಜನಿಕರಿಗೆ ಕರಪತ್ರ ಹಂಚಿಕೆ| ದೇಶದ ರಕ್ಷಣೆಗಾಗಿ ಹಿಂದಿನ ಯಾವುದೇ ಸರ್ಕಾರಗಳೂ ಕೈಗೊಳ್ಳದ ನಿರ್ಣಯಗಳನ್ನು ಕೈಗೊಳ್ಳುವ ಮೂಲಕ ಭದ್ರತಾ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ|
ಬ್ಯಾಡಗಿ(ಜೂ.15): ಮೋದಿಯವರ ಭ್ರಷ್ಟಾಚಾರ ರಹಿತ ಪಾರದರ್ಶಕ ಆಡಳಿತ, ದೂರದೃಷ್ಟಿವುಳ್ಳ ವಿಚಾರ ಧಾರೆಗಳಿಂದ ದೇಶದ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದು, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಪ್ರಮಾಣದಲ್ಲಿ ಬದಲಾವಣೆ ತಂದಿದ್ದಾರೆ ಎಂದು ಬಿಜೆಪಿ ಯುವ ಮುಖಂಡ ವಿಜಯ ಭರತ ಬಳ್ಳಾರಿ ಹೇಳಿದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ತಾಲೂಕಿನ ಮೋಟೆಬೆನ್ನೂರ ಗ್ರಾಮದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಎರಡನೇ ಅವಧಿಯ ಮೊದಲ ವರ್ಷದ ಸಾಧನೆಗಳ ಕುರಿತು ಸಾರ್ವಜನಿಕರಿಗೆ ಕರಪತ್ರಗಳನ್ನು ಹಂಚಿ ಮಾತನಾಡಿದ ಅವರು, ದೇಶದ ರಕ್ಷಣೆಗಾಗಿ ಹಿಂದಿನ ಯಾವುದೇ ಸರ್ಕಾರಗಳೂ ಕೈಗೊಳ್ಳದ ನಿರ್ಣಯಗಳನ್ನು ಕೈಗೊಳ್ಳುವ ಮೂಲಕ ಭದ್ರತಾ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಅಲ್ಲದೇ ಹಲವು ಐತಿಹಾಸಿಕ ನಿರ್ಧಾರಗಳನ್ನು ತಗೆದುಕೊಳ್ಳುವ ಮೂಲಕ ದೇಶದ ಐಕ್ಯತೆ ಕಾಪಾಡುವಲ್ಲಿ ಶ್ರಮಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ, ಶಿವಪ್ಪ ಹರಮಗಟ್ಟಿ, ರಾಮಪ್ಪ ಮಣಕೂರ, ಬಷೀರ ಅಹ್ಮದ್ ತಳಗೇರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
