ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆನ್ನಿಗೆ ಅವರ ಪಕ್ಷದವರೇ ಚೂರಿ ಕೆಪಿಸಿಸಿ ವಕ್ತಾರೆ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಆರೋಪ
ಬೆಳಗಾವಿ (ಜು.25): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆನ್ನಿಗೆ ಅವರ ಪಕ್ಷದವರೇ ಚೂರಿ ಹಾಕಿದ್ದಾರೆ ಎಂದು ಕೆಪಿಸಿಸಿ ವಕ್ತಾರೆ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಆರೋಪಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಬೆನ್ನಿಗೆ ಅವರ ಪಕ್ಷದವರೇ ಚೂರಿ ಹಾಕಿದ್ದಾರೆ.
ಇನ್ನೇನು ಕಾಂಗ್ರೆಸ್‌ನವರು ಚೂರಿ ಹಾಕಲು ಸಾಧ್ಯನಾ ಎಂದು ಪ್ರಶ್ನಿಸಿದ ಅವರು, ಯಡಿಯೂರಪ್ಪ ಯಾರನ್ನು ಬೆಳೆಸಿದ್ದರೋ, ಅವರೇ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
1 ತಿಂಗಳು ಬಿಎಸ್‌ವೈ ಮುಂದುವರಿಸಿ: ಕಾಂಗ್ರೆಸ್ ಶಾಸಕಿ ಅಂಜಲಿ ಆಗ್ರಹ
ಇನ್ನು ನಾಯಕತ್ವ ಬದಲಾವಣೆ ಬಿಜೆಪಿಯ ಆಂತರಿಕ ವಿಚಾರ. ಈ ಬಗ್ಗೆ ನಾನೇನೂ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
